ಇತಿಮಿತಿ ನಡುವೆಯೂ ವಾಸ್ತವಕ್ಕೆ ಹತ್ತಿರವಾದ ಬಜೆಟ್‌


Team Udayavani, Mar 9, 2021, 12:02 PM IST

ಇತಿಮಿತಿ ನಡುವೆಯೂ ವಾಸ್ತವಕ್ಕೆ ಹತ್ತಿರವಾದ ಬಜೆಟ್‌

ಸಾಕಷ್ಟು ಸವಾಲು, ಆರ್ಥಿಕ ಇತಿಮಿತಿ ನಡುವೆಯೂ 2021-22ನೇ ಸಾಲಿಗೆ ವಾಸ್ತವಕ್ಕೆ ಹತ್ತಿರವಾಗಿರುವ ಬಜೆಟ್‌ ಮಂಡಿಸಲು ಸಿಎಂ ಯಡಿಯೂರಪ್ಪ ಅವರು ಪ್ರಯತ್ನ ನಡೆಸಿರುವುದು ಕಾಣುತ್ತದೆ. ಬಜೆಟ್‌ ಗಾತ್ರವನ್ನು ಅನಗತ್ಯವಾಗಿ ಹಿಗ್ಗಿಸದೆ, ಅವಾಸ್ತವಿಕವಾಗಿ ಆದಾಯ ನಿರೀಕ್ಷಿಸದೆ, ವಾಸ್ತವತೆಗೆ ಪೂರಕವಾಗಿ ರಾಜಸ್ವ ನಿರೀಕ್ಷಿಸುವ ಮೂಲಕ ನೈಜತೆಗೆ ಮಹತ್ವ ನೀಡಿರುವುದನ್ನು ತೋರಿಸುತ್ತದೆ.

ಪ್ರತಿವರ್ಷ ಅಬಕಾರಿ ತೆರಿಗೆಯಿಂದ ನಿರೀಕ್ಷಿತ ಆದಾಯ ಸಂಗ್ರಹವಾಗುತ್ತಿರುವುದರಿಂದ ಮುಂದಿನ ಸಾಲಿನಲ್ಲಿ 24,580 ಕೋಟಿ ರೂ. ನಿರೀಕ್ಷಿಸಿರುವುದು ಸೂಕ್ತವಾಗಿದೆ. 35 ಲಕ್ಷ ರೂ.ನಿಂದ 45 ಲಕ್ಷ ರೂ.ವರೆಗಿನ ಮೌಲ್ಯದ ಫ್ಲ್ಯಾಟ್‌ಗಳ ಮೊದಲ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇ. 5ರಿಂದ ಶೇ. 3ಕ್ಕೆ ಇಳಿಕೆ ಮಾಡುವ ಪ್ರಸ್ತಾವ ಸ್ವಾಗತಾರ್ಹ. ಇದರಿಂದ ಮುದ್ರಾಂಕ ಮತ್ತು ನೋಂದಣಿ ಶುಲ್ಕದ ಆದಾಯ ಹೆಚ್ಚಾಗುವ ನಿರೀಕ್ಷೆ ಮೂಡಿಸಿದೆ. ಮೂರ್‍ನಾಲ್ಕು ತಿಂಗಳಿನಿಂದ ದೇಶಾದ್ಯಂತ ಜಿಎಸ್‌ಟಿ ಸಂಗ್ರಹಚೇತರಿಕೆಯಾಗಿದ್ದು, ಅದರ ಆಧಾರದ ಮೇಲೆ ರಾಜ್ಯದಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ 76,473 ಕೋಟಿ ರೂ. ವಾಣಿಜ್ಯ ತೆರಿಗೆ ಆದಾಯ ನಿರೀಕ್ಷಿಸಲಾಗಿದೆ. ಪ್ರಸಕ್ತ ಸಾಲಿಗೆ ಹೋಲಿಸಿದರೆ ಮುಂದಿನ ವರ್ಷ ವಾಣಿಜ್ಯ ತೆರಿಗೆ ನಿರೀಕ್ಷೆಯಲ್ಲಿ 6000 ಕೋಟಿ ರೂ.ನಷ್ಟು ಇಳಿಕೆಯಾಗಿದ್ದರೂ ವಾಸ್ತವಕ್ಕೆ ಸಮೀಪವಿರುವಂತೆ ಕಾಣುತ್ತಿದೆ.

ಸಂಪನ್ಮೂಲ ಕ್ರೋಢೀಕರಣದ ರೂಪದಲ್ಲೇವೆಚ್ಚ ಕ್ರೋಢೀಕರಣಕ್ಕೂ ಒತ್ತು ನೀಡುವ  ಅಗತ್ಯವಿತ್ತು. ಉದಾಹರಣೆಗೆ, ಹೆಚ್ಚುವರಿಯಾಗಿ50 ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸುವ ಪ್ರಸ್ತಾಪವಾಗಿದೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ಇತರೆ ಇಲಾಖೆಗಳು ಪ್ರತ್ಯೇಕವಾಗಿ ಇಂತಹ ಶಾಲೆ ನಡೆಸುವ ಬದಲಿಗೆಶಿಕ್ಷಣ ಇಲಾಖೆಯೊಂದೇ ನಡೆಸಿ ಸಂಬಂಧಪಟ್ಟ ಇಲಾಖೆಗಳು ಅನುದಾನ ವರ್ಗಾಯಿಸಿದರೆ ವೆಚ್ಚ ಕ್ರೋಢೀಕರಣಕ್ಕೂ ನೆರವಾಗಲಿದೆ.

7.5ರಿಂದ 8 ಅಂಕ :

ಬದ್ಧತಾ ವೆಚ್ಚಗಳು ಹೆಚ್ಚಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಅನಿವಾರ್ಯತೆಯೂ ಇದೆ. ಸಾಲ ಪ್ರಮಾಣಹೆಚ್ಚಾದಂತೆ ಬಡ್ಡಿ ಪಾವತಿಯೂಹೊರೆಯಾಗುತ್ತಿದ್ದು, ಈ ಬಗ್ಗೆಯೂ ಎಚ್ಚರ ವಹಿಸಬೇಕಾಗುತ್ತದೆ. ಒಟ್ಟಾರೆ ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಅಂದಾಜುಗಳನ್ನು ಆಧರಿಸಿದ ಬಜೆಟ್‌ ಮಂಡನೆಯಾಗಿದೆ. 10 ಅಂಕಗಳಿಗೆ 7.5ರಿಂದ 8 ಅಂಕ ನೀಡಬಹುದಾಗಿದೆ.

 

ಬಿ.ವಿ. ಮಧುಸೂದನ ರಾವ್‌

ಹಿರಿಯ ಸಂಶೋಧನಾ

ಸಲಹೆಗಾರರು, ಆಯವ್ಯಯ

ಮತ್ತು ನೀತಿ ಅಧ್ಯಯನ ಕೇಂದ್ರ

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.