ಪರಿಹಾರ ವಿತರಣೆಗೆ ಒತ್ತಾಯಿಸಿ ಕ್ವಾರಿ ಕಾರ್ಮಿಕರ ಧರಣಿ

Team Udayavani, Mar 9, 2021, 12:28 PM IST

ಪರಿಹಾರ ವಿತರಣೆಗೆ ಒತ್ತಾಯಿಸಿ ಕ್ವಾರಿ ಕಾರ್ಮಿಕರ ಧರಣಿ

ದಾವಣಗೆರೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಲ್ಲಿರುವ ಲೋಪ-ದೋಷ ಸರಿಪಡಿಸಬೇಕು. ಸ್ಥಗಿತಗೊಂಡಿರುವ ಕೋವಿಡ್‌ -19ರ 5 ಸಾವಿರ ಪರಿಹಾರವನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಾರ್ಮಿಕ ಮುಖಂಡ ಸಾತಿ ಸುಂದರೇಶ್‌ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ಮಂತ್ರಿಗಳು ಅತ್ಯಾಚಾರ ಪ್ರಕರಣಗಳಲ್ಲಿ ಪಾಲ್ಗೊಂಡು ಇಡೀ ಮಹಿಳಾ ಸಮುದಾಯಕ್ಕೆ ಕಳಂಕ ತಂದಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ದಿಕ್ಕು ತಪ್ಪಿದೆ. ಆಡಳಿತ ವೈಫಲ್ಯ ಮರೆಮಾಚಲು ಸರ್ಕಾರಗಳು ಇಲ್ಲಸಲ್ಲದ ಕಾನೂನು ಜಾರಿ ತರಲು ಮುಂದಾಗುತ್ತಿವೆ. ಕೂಡಲೇ ಜನವಿರೋಧಿ ನೀತಿ ಕೈಬಿಟ್ಟು ಅಭಿವೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಆವರೆಗೆರೆ ಎಚ್‌.ಜಿ.ಉಮೇಶ್‌ ಮಾತನಾಡಿ, ಗುರುತಿನ ಚೀಟಿ ಹೊಂದಿದ ಎಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಜಮೀನು ಖರೀದಿಸಿ ಖಾಲಿ ನಿವೇಶನ ನೀಡಿ ಮನೆ ನಿರ್ಮಾಣ ಮಾಡಿಕೊಡಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರು ಅಪಘಾತದಿಂದಾಗಲಿ ಮತ್ತು ಸ್ವಾಭಾವಿಕವಾಗಿ ಸಾವು ಸಂಭವಿಸಿದ್ದಲ್ಲಿ ಅವರ ಅವಲಂಬಿತ ಕುಟುಂಬಕ್ಕೆ 10 ಲಕ್ಷ ಪರಿಹಾರ ಸಹಾಯಧನ ನೀಡಬೇಕು . 60 ವರ್ಷ ಪೂರೈಸಿದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿ ತಿಂಗಳು 5 ಸಾವಿರ ನಿವೃತ್ತಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಕಟ್ಟಡ ನಿರ್ಮಾಣ ಕಾರ್ಮಿರಲ್ಲದ ವ್ಯಕ್ತಿಗಳಿಗೆ ಗುರುತಿನ ಚೀಟಿ ನೀಡಲಾಗಿದೆ. ಇಂತಹ ಅನರ್ಹ ಗುರುತಿನ ಚೀಟಿ ಹೊಂದಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾರ್ಡ್‌ನ್ನು ರದ್ದು ಮಾಡಬೇಕು. ಸೇವಾ ಸಿಂಧು ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ನವೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಪಿ.ಕೆ. ಲಿಂಗರಾಜ್‌, ವಿ.ಲಕ್ಷ್ಮಣ, ಭೀಮಾರೆಡ್ಡಿ, ಮುರುಗೇಶ್‌, ಜಿ.ಆರ್‌.ನಾಗರಾಜ, ಯರಗುಂಟೆ ಸುರೇಶ್‌, ಮಹಮ್ಮದ್‌ ರಫೀಕ್‌, ಎಸ್‌. ಎಂ.ಸಿದ್ದಲಿಂಗಪ್ಪ, ಶಿವಕುಮಾರ್‌ ಡಿ.ಶೆಟ್ಟರ್‌, ಬಿ.ದುಗ್ಗಪ್ಪ, ನಾಗಮ್ಮ, ನೇತ್ರಾವತಿ, ದಾದಾಪೀರ್‌, ಸುರೇಶ್‌, ಐರಣಿ ಚಂದ್ರು ಇತರರು ಇದ್ದರು.

ಟಾಪ್ ನ್ಯೂಸ್

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.