ಬೆಳ್ತಂಗಡಿ: ಮರ ಕಡಿಯುವಾಗ ದಾರುಣ ಘಟನೆ; ಮೈಮೇಲೆ ಮರಬಿದ್ದು ಮೂವರು ಸಾವು
Team Udayavani, Mar 9, 2021, 2:27 PM IST
ಬೆಳ್ತಂಗಡಿ: ಮನೆ ಸಮೀಪ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಬೆಳ್ತಂಗಡಿಯ ಪಟ್ರಮೆಯಲ್ಲಿ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದಾರೆ.
ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ (21 ವ), ಸೇಸಪ್ಪ ಪೂಜಾರಿ ಅವರ ಪುತ್ರ ಸ್ವಸ್ತಿಕ್ (23 ವ) ಮತ್ತೋರ್ವ ಉಪ್ಪಿನಂಗಡಿಯ ಗಣೇಶ್ (38 ವ) ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಅಪ್ಪ ಯಾರೆಂದು ತಿಳಿಯಲು ಮಗ ಒತ್ತಾಯ : ಅತ್ಯಾಚಾರವಾದ 27 ವರ್ಷಗಳ ನಂತ್ರ ಮಹಿಳೆ ದೂರು!
ಅನಾರು ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರವನ್ನು ಕಡಿದು ಉರುಳಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್, ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಕುಸಿದು ಬಿದ್ದು ಸಾವು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.