ಗ್ರಾಮಾಂತರ ಜಿಲ್ಲೆಗೆ ಬರಗಾಲದ ಬಜೆಟ್‌

Team Udayavani, Mar 9, 2021, 4:45 PM IST

ಗ್ರಾಮಾಂತರ ಜಿಲ್ಲೆಗೆ ಬರಗಾಲದ ಬಜೆಟ್‌

ದೇವನಹಳ್ಳಿ: ಸಿಎಂ ಯಡಿಯೂರಪ್ಪ ಮಂಡಿಸಿರುವ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಕೇಂದ್ರವನ್ನು ಘೋಷಿಸುತ್ತಾರೆಂಬುವ ಆಸೆಯಲ್ಲಿದ್ದ ಜನತೆಗೆ ಸರ್ಕಾರ ನಿರಾಸೆ ಮೂಡಿಸಿದೆ. ಜಿಲ್ಲೆಗೆ ಅನೇಕ ಯೋಜನೆಗಳನ್ನು ನೀಡಬೇಕಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಯಾವುದೇ ತಾಲೂಕಿಗೆ ಯೋಜನೆಗಳನ್ನು ನೀಡುವುದರಲ್ಲಿ ಬಜೆಟ್‌ ಹಿಂದುಳಿದಿದೆ.

ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿರುವುದು: ದೇವನಹಳ್ಳಿಯಲ್ಲಿ ಸಾರ್ವ ಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫುಟ್‌ಬಾಲ್‌, ಹಾಕಿ, ಶೂಟಿಂಗ್‌, ಈಜು, ಟೆನ್ನಿಸ್‌ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಒದಗಿಸಲು ಕ್ರಮವಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ದಿಂದ ಬೆಂಗಳೂರು ಸಿಗ್ನೇಚರ್‌ ಬ್ಯುಸಿನೆಸ್‌ ಪಾರ್ಕ್‌ ನಿರ್ಮಿಸಲು ಪ್ರಸ್ತಾಪಿಸಿದ್ದು, ಈ ಯೋಜನೆಯ ಟ್ರಂಕ್‌ ಮೂಲ ಸೌಕರ್ಯವನ್ನು 168 ಕೋಟಿ ರೂ.ಗಳ ವೆಚ್ಚದಲ್ಲಿ ಈಗಾಗಲೇ ಅಭಿವೃದ್ಧಿಪಡಿಸಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ

2ನೇ ರನ್‌ವೇ ಕಾಮಗಾರಿಯು 2,708 ಕೋಟಿ ರೂ.ಗಳ ವೆಚ್ಚದಲ್ಲಿಪೂರ್ಣಗೊಳಿಸಿ, 2ನೇ ಟರ್ಮಿನಲ್‌ ಕಟ್ಟಡ ಕಾಮಗಾರಿಯನ್ನು 4,751ಕೋಟಿ ರೂ.ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಎತ್ತಿನಹೊಳೆ ಸಮಗ್ರ ಯೋಜನೆಗೆ ಭೈರಗೊಂಡಲು ಜಲಾಶಯದ ನಿರ್ಮಾಣಕ್ಕೆ ಅಡ್ಡಿಯಾಗಿರುವ ಭೂಸ್ವಾಧೀನ ಸಮಸ್ಯೆ ನಿವಾರಿಸಿ ಕಾಮಗಾರಿಗೆ ಆದ್ಯತೆ ನೀಡಲಾಗುವುದು. ಬೆಂಗಳೂರು ನಗರ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308ಎಂಎಲ್‌ಡಿ ನೀರನ್ನು ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಯ 234 ಕೆರೆಗಳಿಗೆ ನೀರುತುಂಬಿಸುವ ಯೋಜನೆಗೆ 500 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ. ಕಾರ್ಮಿಕರ ಸುಸಜ್ಜಿತವಾದ ತಾತ್ಕಾಲಿಕ ವಸತಿ ನಿರ್ಮಾಣಕ್ಕೆ ಆದ್ಯತೆಯನ್ನು ಬಜೆಟ್‌ನಲ್ಲಿ ನೀಡಲಾಗಿದೆ.

ನಿರಾಸೆ ಮೂಡಿಸಿದ ಬಜೆಟ್‌: ಈ ಬಾರಿ ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರದ ಘೋಷಣೆ, ಜಿಲ್ಲಾಸ್ಪತ್ರೆ, ಮೆಡಿಕಲ್‌ ಕಾಲೇಜು, ಸರ್ಕಾರಿ ಎಂಜನಿಯರಿಂಗ್‌ ಕಾಲೇಜು, ದೇವನಹಳ್ಳಿ ಮತ್ತು ವಿಜಯಪುರ ಅವಳಿ ನಗರಗಳಾಗಿ ಅಭಿವೃದ್ಧಿ ಪಡಿಸುವುದು. ಜಿಲ್ಲಾ ಕ್ರೀಡಾಂಗಣ,ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಕಾವೇರಿನೀರು ನಗರಕ್ಕೆ ವಿಸ್ತರಣೆ, ಮೆಟ್ರೋ ರೈಲು, ದ್ರಾಕ್ಷಿ ಹಣ್ಣಿನಸಂಸ್ಕರಣಾ ಘಟಕ ಸೇರಿದಂತೆ ಯಾವುದೇ ಯೋಜನೆಗಳಿಗೂಅನುದಾನ ಘೋಷಣೆಯಾಗಿಲ್ಲ, ಎತ್ತಿನಹೊಳೆ ಯೋಜನೆಯಿಂದ ಯಾವಾಗ ನೀರು ಬರುವುದು ಎಂಬುವ ಕನಸಿನಲ್ಲಿ ಜನರು ಇದ್ದಾರೆ. ಕಾಮಗಾರಿ ಸ್ಥಗಿತಗೊಂಡಿದೆ. ಜಿಲ್ಲೆಯಲ್ಲಿ 1500 ಅಡಿ ಕೊರೆಸಿದರೂಕೊಳವೆ ಬಾವಿಗಳಲ್ಲಿ ನೀರು ಬರದ ಸ್ಥಿತಿ ನಿರ್ಮಾಣವಾಗಿದೆ. ಶಾಶ್ವತ ನೀರಾವರಿಗೆ ಹೆಚ್ಚಿನ ಅನುದಾನ ನೀಡುತ್ತಾರೆಂಬುವ ಜನಪ್ರತಿನಿಧಿಗಳು ಮತ್ತು ಜನರಿಗೆಈ ಬಾರಿಯು ಸರ್ಕಾರ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ.

ಬೆಂ.ಗ್ರಾ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಸಾಕಷ್ಟುಅನುದಾನದ ನಿರೀಕ್ಷೆ ಹುಸಿಯಾಗಿದೆ. ಏತ ನೀರಾವರಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ ಎಂಬುವ ಆಶಾ ಭಾವನೆಯಲ್ಲಿದ್ದೆವು. ಎಸ್‌ಟಿಆರ್‌ಆರ್‌ಯೋಜನೆಗೆ ಹೆಚ್ಚಿನ ಒತ್ತನ್ನು ನೀಡಬೇಕಾಗಿತ್ತು. ಪಿಆರ್‌ ಆರ್‌ ರಸ್ತೆಗಳಿಗೆ ಹೆಚ್ಚಿನ ಒತ್ತನ್ನು ನೀಡಿದೆ. ಶರತ್‌ ಬಚ್ಚೇಗೌಡ, ಶಾಸಕ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನಪ್ರದೇಶ ಅಭಿವೃದ್ಧಿಗೆ ಬಜೆಟ್‌ನಲ್ಲಿಹೆಚ್ಚಿನ ಒತ್ತನ್ನು ನೀಡಿದರೆ ಹೇಗೆ,ದೇವನಹಳ್ಳಿ ಸುತ್ತಮುತ್ತಲು ಅನೇಕ ಬಡ ಜನರು, ರೈತರು, ಕೂಲಿಕಾರ್ಮಿಕರು, ಅಲ್ಪಸಂಖ್ಯಾತರುಸಾಕಷ್ಟು ಇದ್ದರೂ ಸರ್ಕಾರ ಬಜೆಟ್‌ನಲ್ಲಿ ಅವರಿಗೆ ಅನುಕೂಲವಾಗುವ ಯೋಜನೆ ರೂಪಿಸುವಲ್ಲಿ ವಿಫಲವಾಗಿದೆ. ಎಲ್‌.ಎನ್‌.ನಾರಾಯಣಸ್ವಾಮಿ, ಶಾಸಕ

ಟಾಪ್ ನ್ಯೂಸ್

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.