ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
Team Udayavani, Mar 9, 2021, 6:31 PM IST
ಬೆಂಗಳೂರು : ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರ ಪಡೆಯನ್ನು (ಸೆಲ್ಫ ಡಿಫೆನ್ಸ್ ಆರ್ಮಿ) ರಚನೆ ಮಾಡಬೇಕಾದ ಅಗತ್ಯವಿದ್ದು, ಈ ಸಂಬಂಧ ರಾಜ್ಯ ಮಟ್ಟದಲ್ಲಿ ಗೃಹ ಇಲಾಖೆಯಿಂದ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್ಆರ್ ಪಿ) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಶಸ್ತ್ರ ರಹಿತ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸ್ವಯಂ ರಕ್ಷಣಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಇಂದಿನ ಆಧುನಿಕ ಕಾಲದಲ್ಲಿ ಮಹಿಳೆಯರ ಸುರಕ್ಷತೆ ದೊಡ್ಡ ಸವಾಲು. ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳುವಷ್ಟು ಶಕ್ತಿವಂತರಾಗಬೇಕಾಗಿದೆ. ಇದಕ್ಕೆ ಸ್ವಯಂ ರಕ್ಷಣಾ ತರಬೇತಿ ಅಗತ್ಯವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಈ ರೀತಿಯ ತರಬೇತಿ ನೀಡಲು ksrp ಯೋಜನೆ ಹಾಕಿಕೊಂಡಿರುವುದು ಸ್ವಾಗತಾರ್ಹ. ಇದಕ್ಕಾಗಿ ನಾನು ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಮತ್ತು ksrp ಮುಖ್ಯಸ್ಥ ಅಲೋಕ್ ಕುಮಾರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಬೊಮ್ಮಾಯಿ ಹೇಳಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಯೋಜನೆಯೊಂದನ್ನು ಜಾರಿಗೆ ತರುವ ಉದ್ದೇಶವಿದೆ. ಈ ಯೋಜನೆ ಕುರಿತು ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ ೧೫, ೨೦೨೦ ರಂದು ಸೆಲ್ಫ್ ಡಿಫೆನ್ಸ್ ಆರ್ಮಿ ಸಿದ್ದಪಡಿಸುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಪ್ರಕಟಿಸಿದರು.
ಮಹಿಳಾ ಪೇದೆಗಳಿಗೆ ವಿಶೇಷ ತರಬೇತಿ ಶಾಲೆ ಸ್ಥಾಪನೆ ;
ರಾಜ್ಯದಲ್ಲಿ ಮಹಿಳಾ ಪೊಲೀಸ್ ಪೇದೆಗಳಿಗಾಗಿ ವಿಶೇಷ ತರಬೇತಿಯ ಅಗತ್ಯವಿದೆ. ಹೀಗಾಗಿ ಅವರಿಗಾಗಿ ವಿಶೇಷವಾದ ತರಬೇತಿ ಶಾಲೆಯನ್ನು ಆರಂಭಿಸಲಾಗುವುದು. ಇದರಿಂದ ಮಹಿಳಾ ಪೊಲೀಸ್ ಪೇದೆಗಳ ಕಾರ್ಯಕ್ಷಮತೆ ಹೆಚ್ಚಲಿದೆ. ಹಾಗು ಕಾನೂನು ಸುವ್ಯವಸ್ಥೆ ರಕ್ಷಣೆಗೆ ಮತ್ತಷ್ಟುಬಲ ಬಂದಂತಾಗುತ್ತದೆ ಎಂದು ಸಚಿವರು ಹೇಳಿದರು.
KSRP ಬಗ್ಗೆ ಮೆಚ್ಚುಗೆ ;
ಕೆ ಎಸ್ ಆರ್ ಪಿ ಸದಾ ಕಾಲ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಗಲಭೆಗಳನ್ನು ಯಶಸ್ವಿಯಾಗಿ ನಿಗ್ರಹಿಸುವಲ್ಲಿ ಹಾಗೂ ಕಾನೂನು ಭಂಗ ಮಾಡುವವರರಿಗೆ ತಕ್ಕ ಪಾಠ ಕಲಿಸುವಲ್ಲಿ ಕೆ ಎಸ್ ಆರ್ ಪಿ ಪಾತ್ರ ಬಹು ಮುಖ್ಯವಾಗಿದೆ. ಹೀಗಾಗಿಯೇ ಇದು ನಮ್ಮ ಹೆಮ್ಮೆಯ ಪಡೆ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಬೊಮ್ಮಾಯಿ ಅವರು, ಇದೇ ರೀತಿ ಉತ್ತಮ ಕೆಲಸ ಮಾಡುವಂತೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.