ಆಸರೆ ಮನೆಗಳ ಹಕ್ಕು ಪತ್ರಕ್ಕೆ ಒತ್ತಾಯ : ತಲೆ ಮೇಲೆ ಕಲ್ಲುಹೊತ್ತು ಪ್ರತಿಭಟನೆ
ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಪ್ರತಿಭನೆ
Team Udayavani, Mar 10, 2021, 4:21 PM IST
ರೋಣ (ಗದಗ) : ತಾಲೂಕಿನ ನೆರೆ ಪೀಡಿತ ಪ್ರದೇಶದ ಗಾಡಗೋಳಿ ನವಗ್ರಾಮದಲ್ಲಿ ನಿರ್ಮಿಸಿರುವ ಆಸರೆ ಮನೆಗಳ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಫಲಾನುಭವಿಗಳು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟಿಸುವ ಮೂಲಕ ಸ್ಥಳೀಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡು ದಿನಗಳಿಂದ ನಿರಂತರ ಹೋರಾಟ ಮುಂದುವರಿಸಿರುವ ನೆರೆ ಸಂತ್ರಸ್ತರು, ಗಾಡಗೋಳಿ ನವಗ್ರಮದ ಆಸರೆ ಮನೆಗಳ ಹಕ್ಕುಕ್ಕಾಗಿ ಒತ್ತಾಯಿಸುತ್ತಿದ್ದಾರೆ.
ಎರಡನೇ ದಿನಕ್ಕೆ ಕಾಲಿಟ್ಟಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ನರಗುಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್.ಯಾವಗಲ್ ಸ್ಥಳಕ್ಕೆ ಭೇಟಿ ನೀಡಿ, ನೆರೆ ಸಂತ್ರಸ್ತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಬಳಿಕ ಪ್ರತಿಭಟನಾ ಸ್ಥಳಕ್ಕೆ ರೋಣ ತಹಶಿಲ್ದಾರ ಜೆ.ಬಿ.ಜಕ್ಕನಗೌಡ್ರ ಅವರನ್ನು ಕರೆಯಿಸಿ, ಸಮಸ್ಯೆ ಬಗೆಹರಿಸಲು ಎರಡು ವಾರಗಳ ಗಡುವು ನೀಡಿದರು. ಅದಕ್ಕೆ ತಹಶೀಲಾರ್ ಜೆ.ಬಿ.ಜಕ್ಕನಗೌಡ್ರ ತಲೆ ದೂಗಿಸಿದ್ದರಿಂದ ನೆರೆ ಸಂತ್ರಸ್ತರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಎನ್.ಬಿ.ಚಲವಾದಿ, ಈರಣ್ಣ ತಳವಾರ, ಶರಣಪ್ಪ ಜಂಗಣ್ಣವರ, ಮುತ್ತಣ್ಣ ಹಾಲಣ್ಣವರ, ಗ್ರಾಪಂ ಸದಸ್ಯ ಪ್ರಕಾಶ ಭಜಂತ್ರಿ, ಸಿದ್ದು ಬೊಮ್ಮನಗೌಡ್ರ, ಲಲಿತಾ ಪಂಚಾಳ, ಸುವರ್ಣ ಗಣಿ, ಲಕ್ಕಮ್ಮ ತಳವಾರ, ಯಲ್ಲಮ್ಮ ತಳವಾರ, ದ್ರಾಕ್ಷಾಯಿಣಿ ಪುರಾಣಿಕಮಠ, ಕಲಾವತಿ ತಳವಾರ, ಹುಸನವ್ವ ಬೇಟಗೇರಿ, ಮಂಜುಳಾ ಭಜಂತ್ರಿ, ಪ್ರೇಮಾ ಪರಸಣ್ಣವರ, ಬೇಗಂ ನಧಾಪ, ಖಾತನಬೀ ನಧಾಪ, ಗಿರಿಜವ್ವ ತಳವಾರ, ಲಕ್ಷ್ಮೀಬಾಯಿ ಹೂಗಾರ, ಶಾರದಾ ದೇಶಾಯಿ, ಪಾರವ್ವ ಮಡಿವಾಳರ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.