ಜಿಲ್ಲೆಯಲ್ಲಿ ಹೆಚ್ಚಿದ ಮನೆ ಕಳವು ಪ್ರಕರಣ
ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳವು, ವಿವಿಧೆಡೆಗಳಲ್ಲಿ ಪ್ರಕರಣ ದಾಖಲು
Team Udayavani, Mar 10, 2021, 4:43 PM IST
ಜಿಲ್ಲೆಯಲ್ಲಿ ಹೆಚ್ಚಿದ ಮನೆ ಕಳವು ಪ್ರಕರಣ
ಹಾಸನ: ನಗರ ಸೇರಿದಂತೆ ಜಿಲ್ಲೆಯಲ್ಲಿ ಮನೆ ಕಳವು ಪ್ರಕರಣಗಳ ಸಂಖ್ಯೆಹೆಚ್ಚಿದ್ದು, ಪೊಲೀಸ್ ಇಲಾಖೆ ಕಡಿವಾಣಹಾಕಬೇಕಿದೆ. ಭಾನುವಾರ ಮತ್ತುಸೋಮವಾರ ವಿವಿಧೆಡೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದು, ಲಕ್ಷಾಂತರ ರೂ. ನಗದು, ಚಿನ್ನಾಭರಣ ದೋಚಲಾಗಿದೆ.
5.98 ಲಕ್ಷ ರೂ. ಆಭರಣ ಕಳವು: ಮನೆಯ ಬೀಗ ಮುರಿದು 5,98,000ರೂ. ಬೆಲೆಯ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಹಾಸನದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ.
ಹಾಸನದ ವಿಶ್ವೇಶ್ವರಯ್ಯ ಬಡಾವಣೆ ವಾಸಿ ಸಂಕಾಶ್ ಎಸ್. ಭಾರದ್ವಾಜ್ ಎಂಬವರು ಮಾ.5 ರಂದು ಮನಗೆ ಬೀಗ ಹಾಕಿಕೊಂಡು ಬೆಂಗಳೂರಿಗೆಹೋಗಿದ್ದರು. ಅವರು ವಾಪಸ್ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಒಳನುಗ್ಗಿದ್ದ ಕಳ್ಳರು ಬೀರುವಿನಲ್ಲಿಟ್ಟಿದ್ದ 5,98,000ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಆಭರಣಗಳನ್ನು ಕಳವು ಮಾಡಿದ್ದರು.ಈ ಸಂಬಂಧ ಹಾಸನದ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿಸೋಮವಾರ ಪ್ರಕರಣ ದಾಖಲಾಗಿದೆ.
ದರೋಡೆ ಅಲ್ಲ, ಮನೆ ಬೀಗ ಮುರಿದು ಚಿನ್ನಾಭರಣ ಕಳವು; ಸ್ಪಷ್ಟನೆ :
ಹಾಸನ: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಅರಸೀಕೆರೆ ತಾಲೂಕು ಜಾವಗಲ್ ಹೋಬಳಿ ಅರಕೆರೆ ಗ್ರಾಮದಲ್ಲಿ ನಡೆದಿದೆ.
ಅರಕೆರೆ ಗ್ರಾಮದ ಸಿದ್ದಲಿಂಗಮ್ಮ ಎಂಬವರು ಸೋಮವಾರ ಬೆಳಗ್ಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಅರಸೀಕೆರೆಗೆ
ಹೋಗಿದ್ದರು. ಅವರು ವಾಪಸ್ ಮನೆಗೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ ನುಗ್ಗಿ ಬೀರುವಿನ ಬೀಗ ಮುರಿದು 46 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ನಾಲ್ಕೈದು ಮಂದಿ ದರೋಡೆಕೋರರು ಮನೆಗೆ ನುಗ್ಗಿ ಚಾಕು ತೋರಿಸಿ 50 ಸಾವಿರ ರೂ. ನಗದು ಹಾಗೂ 70 ಗ್ರಾಂ ಚಿನ್ನಾಭರಣ ದೋಚಿದ್ದರು ಎಂದು ವರದಿಯಾಗಿತ್ತು. ಆದರೆ, ದರೋಡೆ ನಡೆದಿಲ್ಲ. ಮನೆಯ ಬೀಗ ಮುರಿದು 46 ಗ್ರಾಂ ಚಿನ್ನಾಭರಣ ಕಳವಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಈ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಕಲೇಶಪುರ: 98 ಗ್ರಾಂ ಚಿನ್ನಾಭರಣ ಕಳವು :
ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಸಕಲೇಶಪುರದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಡಾವಣೆವಾಸಿ ಸಾವಿತ್ರಮ್ಮ ಎಂಬವರು ಭಾನುವಾರ ಮಧ್ಯಾಹ್ನಮನೆಗೆ ಬೀಗ ಹಾಕಿಕೊಂಡು ಸಕಲೇಶಪುರದಚಂಪಕನಗರ ಬಡಾವಣೆಯಲ್ಲಿರುವ ಸಂಬಂಧಿಕರ ಆರಾಧನೆ ಕಾರ್ಯಕ್ಕೆ ಹೋಗಿದ್ದರು. ಅವರು ವಾಪಸ್‌ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ 98 ಗ್ರಾಂ ಚಿನ್ನಾಭರಣಗಳನ್ನು ಕಳವುಮಾಡಿದ್ದರು. ಈ ಸಂಬಂಧ ಸಕಲೇಶಪುರ ನಗರಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.