ನೀರಿನ ಸಮಸ್ಯೆ ನೀಗಿಸಲು ಕ್ರಮವಹಿಸಿ

Team Udayavani, Mar 10, 2021, 4:54 PM IST

ನೀರಿನ ಸಮಸ್ಯೆ ನೀಗಿಸಲು ಕ್ರಮವಹಿಸಿ

ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಆರಂಭವಾಗಿ ರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತಾತ್ವಾರ ಹೆಚ್ಚಿದ್ದು, ಕೂಡಲೇ ಗಮನ ಹರಿಸಬೇಕು, ಜಿಲ್ಲೆಯ ಅಯಾ ಗ್ರಾಪಂ ವ್ಯಾಪ್ತಿಯಲ್ಲೇ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳನ್ನು ಚುರುಕುಗೊಳಿಸಿ ಕೂಲಿ ಕಾರ್ಮಿಕರ ನೆರವಿಗೆ ಮುಂದಾಗಬೇಕೆಂದು ಒತ್ತಾಯ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೆಪಿಸಿಸಿಮಾಧ್ಯಮ ವಿಶ್ಲೇಷಕ ಮುರಳೀಧರ ಹಾಲಪ್ಪ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷಆರ್‌.ರಾಮಕೃಷ್ಣ ಅವರೊಂದಿಗೆ ಜಿಪಂ ಕಚೇರಿಗೆತೆರಳಿ ಜಿಪಂ ಸಿಇಒ ಅವರನ್ನು ಭೇಟಿ ಮಾಡಿ ಮನವಿಸಲ್ಲಿಸಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.ಈ ವೇಳೆ ಮಾತನಾಡಿದ ಮುರಳೀಧರ ಹಾಲಪ್ಪ,ತುಮಕೂರು ಜಿಲ್ಲೆ ಬರಪೀಡಿತ ಜಿಲ್ಲೆಯಾಗಿರುವುದರಿಂದ ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡಿದೆ. ಯಾವ ಯಾವ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬು ದರ ಬಗ್ಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಬೋರ್‌ವೆಲ್‌ ಕೊರೆಸುವಅಥವಾ ಟ್ಯಾಂಕರ್‌ ಮೂಲಕ ನೀರುಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ನರೇಗ ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣವನ್ನು ಪಾವತಿಸಬೇಕು,ನರೇಗ ಅಡಿಯಲ್ಲಿ ಹೆಚ್ಚು ಹೆಚ್ಚು ಕೆಲಸ ನೀಡುವಂತೆ ಕೇಂದ್ರ ಸರ್ಕಾರವೂ ಸೂಚಿಸಿರುವ ಹಿನ್ನೆಲೆಯಲ್ಲಿಗರಿಷ್ಠ ಪ್ರಮಾಣದ ಮಾನವ ದಿನಗಳನ್ನು ಸೃಷ್ಟಿಸಲುಅಧಿಕಾರಿಗಳು ಮುಂದಾಗಬೇಕು, ನರೇಗ ಯೋಜ ನೆಯಲ್ಲಿ 275 ರೂ ಕೂಲಿ ಹಣದ ಬದಲಾಗಿ 375 ರೂ. ನೀಡಬೇಕೆಂದು ಒತ್ತಾಯಿಸಿದರು.

ಡಿಆರ್‌ಡಿಎ ಶಾಖೆಯು ನಿರ್ವಹಿಸುವ ವಿವಿಧ ವಸತಿ ಯೋಜನೆಗಳಾದ ಆಶ್ರಯ,ಡಾ.ಅಂಬೇಡ್ಕರ್‌, ಇಂದಿರಾ ಆವಾಜ್‌ ಯೋಜನೆ, ಬಸವ ವಸತಿ ಯೋಜನೆಗಳ ಅನುಷ್ಠಾನ, ಆಶ್ರಯನಿವೇಶನ ಯೋಜನೆ ಅನುಷ್ಠಾನ, ವಸತಿ ಯೋಜನೆಗಳಡಿ ಬರುವ ದೂರುಗಳ ಪರಿಶೀಲನೆನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕೆರೆಗಳ ಹೂಳು ತೆಗೆಯುವುದು, ಏರಿ ನಿರ್ಮಾಣ, ಕಂದಕ ಬದುಗಳ ನಿರ್ಮಾಣ, ಕೃಷಿಹೊಂಡ ನಿರ್ಮಾಣ, ಮಳೆ ನೀರು ಸಂಗ್ರಹಕಾಮಗಾರಿ, ಕೊಳವೆ ಬಾವಿಗೆ ಜಲ, ಮರುಪೂರಣ ಗುಂಡಿ, ಸಸಿ ನೆಡುವಿಕೆಯಂತಹ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿದೆ. ರೈತರಿಗೆ ಸಬ್ಸಿಡಿಪ್ರಮಾಣ ಹೆಚ್ಚಿಸಬೇಕು, ಕೃಷಿ ಇಲಾಖೆಯಲ್ಲಿರುವ ಮದ್ಯವರ್ತಿಗಳ ಹಾವಳಿ ಕಡಿವಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಸ್ಯೆಗಳನ್ನು ಆಲಿಸಿದ ಸಿಇಒ ಗಂಗಾಧರಸ್ವಾಮಿ, ಎಲ್ಲೆಲ್ಲಿ ಸಮಸ್ಯೆಗಳಿವೆಯೋಅಲ್ಲೆಲ್ಲಾ ಖುದ್ದು ನಾನೇ ಭೇಟಿ ನೀಡಿ ಸಮಸ್ಯೆಗಳನ್ನುಬಗೆ ಹರಿಸಲು ಕ್ರಮ ಕೈಗೊಳ್ಳುತ್ತಿದ್ದೇನೆ ಎಂದರು.

ಕುಡಿವ ನೀರಿನ ಸಮಸ್ಯೆಗೆ ಆಯಾ ಗ್ರಾಪಂಯಲ್ಲಿ 14-15 ಹಣಕಾಸಿನ ಯೋಜನೆಯಅನುದಾನ ಬಳಸಿಕೊಂಡು ಬೋರ್‌ವೆಲ್‌ ಕೊರೆಸುವುದು ಆಯಾ ಪಂಚಾಯ್ತಿಗಳ ಜವಾಬ್ದಾರಿ, ಈಗಾಗಲೇ ಜಿಲ್ಲೆಯಲ್ಲಿ ಕೊರೆಸಿರುವ ಬೋರ್‌ವೆಲ್‌ ಗ‌ಳಿಗೆ 34 ಕೋಟಿ ರೂ. ಹಣ ಬಾಕಿ ಇದೆ. ಆ ಹಣವನ್ನೇ ಇನ್ನೂ ಪಾವತಿ ಮಾಡಿಲ್ಲ,ಹೊಸ ಬೋರ್‌ವೆಲ್‌ಗ‌ಳಿಗೆ ಅನುದಾನದ ಕೊರತೆ ಇದೆ. ಆದ್ದರಿಂದ ಆಯಾ ಪಂಚಾಯ್ತಿಗಳಮೂಲಕವೇ ಅನುದಾನ ಸದ್ಬಳಕೆ ಮಾಡಿಕೊಳ್ಳ ಬೇಕೆಂದು ಸಿಇಒ ಹೇಳಿದರು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.