ಪಶ್ಚಿಮಬಂಗಾಳ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ, ಕಾಲಿಗೆ ಗಾಯ
ನಂದಿಗ್ರಾಮಕ್ಕೆ ವಲಸೆ ಬಂದಿರುವ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು.
Team Udayavani, Mar 10, 2021, 6:56 PM IST
ಕೋಲ್ಕತಾ: ಮುಂಬರುವ ವಿಧಾಣಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಲು ಬುಧವಾರ(ಮಾರ್ಚ್ 10) ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸಲು ತೆರಳಿದ್ದ ವೇಳೆ ಹೈಡ್ರಾಮಾ ನಡೆದಿದ್ದು, ಈ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ತನ್ನ ಮೇಲೆ ಹಲ್ಲೆ ನಡೆಯುತ್ತಿರುವಾಗ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಮಮತಾ ಬ್ಯಾನರ್ಜಿ ಈ ಸಂದರ್ಭದಲ್ಲಿ ಆರೋಪಿಸಿದ್ದಾರೆ. ನಂದಿಗ್ರಾಮದಲ್ಲಿ ನಡೆದ ಘಟನೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದಲ್ಲಿ ನೆಲದ ಮೇಲೆ ಬಿದ್ದಿದ್ದ ಮಮತಾ ಬ್ಯಾನರ್ಜಿ ಅವರನ್ನು ಭದ್ರತಾ ಸಿಬ್ಬಂದಿಗಳು ಎತ್ತಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳ್ಳಿರಿಸಿರುವುದು ದಾಖಲಾಗಿದೆ.
ಮೂಲಗಳ ಪ್ರಕಾರ ಕಾರಿನೊಳಗೆ ಕುಳಿತುಕೊಳ್ಳಲು ಹೋದ ಸಂದರ್ಭದಲ್ಲಿ ನಾಲ್ಕೈದು ಮಂದಿ ಏಕಾಏಕಿ ದಾಳಿ ನಡೆಸಿದ್ದು, ಇದರಿಂದಾಗಿ ಆಯ ತಪ್ಪಿ ಬಿದ್ದ ಮಮತಾ ಬ್ಯಾನರ್ಜಿ ಅವರ ಕಾಲಿಗೆ ಗಾಯವಾಗಿರುವುದಾಗಿ ತಿಳಿಸಿದೆ.
ಈ ಬಾರಿ ತಮ್ಮ ಭವಾನಿಪುರ್ ಕ್ಷೇತ್ರದಿಂದ ನಂದಿಗ್ರಾಮಕ್ಕೆ ವಲಸೆ ಬಂದಿರುವ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ನಂದಿಗ್ರಾಮದಲ್ಲಿ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸಲಿದ್ದು, ಮಮತಾ ಸುವೇಂದುವಿಗೆ ಸಡ್ಡು ಹೊಡೆದು ಅಖಾಡಕ್ಕಿಳಿಯುವುದಾಗಿ ಘೋಷಿಸಿದ್ದರು.
#WATCH West Bengal CM Mamata Banerjee in Nandigram says she has suffered an injury in her leg after few people pushed her when she was near her car pic.twitter.com/D1l00MU7xw
— ANI (@ANI) March 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.