ಏರ್‌ಪೋರ್ಟ್‌ ಸ್ಥಳದಲ್ಲಿ  ಸ್ಪೋಟಕ 

ಪೂರೈಕೆ ಕಂಪನಿಯಿಂದ ನಿಯಮ ಉಲ್ಲಂಘನೆ

Team Udayavani, Mar 10, 2021, 8:47 PM IST

Shivamogga Airport

ಶಿವಮೊಗ್ಗ: ವಿಮಾನ ನಿಲ್ದಾಣದಲ್ಲಿದ್ದ ಕಲ್ಲುಗಣಿ ಸ್ಫೋಟಿಸಲು ತಂದಿದ್ದ ಸ್ಫೋಟಕಗಳನ್ನು ಮಾಲೀಕ ಸ್ಥಳದಲ್ಲಿಯೇ ಬಿಟ್ಟು ಹೋದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹುಣಸೋಡು ಸ್ಫೋಟದಲ್ಲಿ ಬಳಕೆಯಾಗಿದ್ದಷ್ಟೇ ಪ್ರಮಾಣದ ಸ್ಫೋಟಕಗಳು ವಾಹನದಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿತ್ತು. ಎರಡು ವಾಹನಗಳಲ್ಲಿ 904 ಕೆಜಿ ಜಿಲೆಟಿನ್‌ ಕಡ್ಡಿ, 3267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ವಸ್ತುಗಳು ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮದಿಂದ ಆತಂಕ ದೂರವಾಗಿದೆ.

ಟಾಟಾ 407 ವಾಹನದಲ್ಲಿ 36 ಬಾಕ್ಸ್‌ ಜಿಲೆಟಿನ್‌ ಕಡ್ಡಿಗಳು, ಪಿಕ್‌ ಅಪ್‌ ವಾಹನದಲ್ಲಿ 3267 ಎಲೆಕ್ಟ್ರಾನಿಕ್‌ ಡಿಟೊನೇಟರ್‌ಗಳು, 9 ಮೀಟರ್‌ನ 79 ಎಕ್ಸೆಲ್‌ಗ‌ಳು, 3 ಮೀಟರ್‌ನ 105 ಎಕ್ಸೆಲ್‌ಗ‌ಳು ಪತ್ತೆಯಾಗಿವೆ. ಶನಿವಾರ ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಿಂದ ಬಾಂಬ್‌ ನಿಷ್ಕ್ರಿಯ ದಳ ಸಿಬ್ಬಂದಿ ಕರೆಸಿ ಸ್ಫೋಟಕಗಳನ್ನು ಸುರಕ್ಷಿತವಾಗಿ ಇಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಾಗಿ ಸ್ಥಳದಲ್ಲೇ ಕ್ವಾರಿ ಒದಗಿಸಲಾಗಿತ್ತು. ಇಲ್ಲಿಯೇ ಬಂಡೆ ಸ್ಫೋಟಿಸಿ, ಕಾಮಗಾರಿಗೆ ಜೆಲ್ಲಿ ಬಳಕೆ ಮಾಡಲಾಗುತಿತ್ತು. ಇದಕ್ಕೆ ಸ್ಫೋಟಕ ಪೂರೈಕೆ ಮಾಡುವಂತೆ ಚಿಕ್ಕಬಳ್ಳಾಪುರದ ಕಂಪನಿಯೊಂದರ ಜತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಕಂಪನಿಯವರು ಸ್ಫೋಟಕಗಳನ್ನು ತಂದಿದ್ದರು. ಆದರೆ ಎರಡು ವಾಹನಗಳಲ್ಲಿ ತಂದ ಸ್ಫೋಟಕಗಳನ್ನು ಹಾಗೆ ಬಿಟ್ಟು ಹೋಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು.

ಬಿಟ್ಟು ಹೋಗಿದ್ದೇಕೆ?: ಜಿಲ್ಲೆಯ ಹುಣಸೋಡು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ಸ್ಫೋಟಕ ಬಳಕೆಗೆ ಕಡಿವಾಣ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಪೂರೈಕೆ ಕಂಪನಿಯವರು ಇದರ ಬಳಕೆ ಬಗ್ಗೆ ಜಿಲ್ಲಾಧಿ ಕಾರಿ ಅನುಮತಿ ಕೇಳಿದ್ದರು. ಮಂಗಳೂರಿನಲ್ಲಿರುವ ಪೆಟ್ರೋಲಿಯಂ ಮತ್ತು ಎಕ್ಸ್‌ಪ್ಲೋಸಿವ್‌ ಸೇಫ್ಟಿ ಆರ್ಗನೈಸೇಷನ್‌ನಿಂದ ಅನುಮತಿ ಪಡೆಯುವಂತೆ ಡಿಸಿ ಸೂಚಿಸಿದ್ದರು. ಅಲ್ಲಿ ಅನುಮತಿ ಕೇಳಿದಾಗ ಸ್ಫೋಟಕ ಪೂರೈಕೆ ಕಂಪನಿಯವರು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.

ಸ್ಫೋಟಕಗಳನ್ನು 150 ಕಿಮೀ ಮಾತ್ರ ಸಾಗಣೆ ಮಾಡಬಹುದು. ಆದರೆ ಇಲ್ಲಿ ಚಿಕ್ಕಬಳ್ಳಾಪುರದಿಂದ ಶಿವಮೊಗ್ಗದವರೆಗೆ ಸ್ಫೋಟಕಗಳನ್ನು ಪೂರೈಕೆ ಮಾಡಿ ನಿಯಮ ಉಲ್ಲಂಘಿಸಲಾಗಿತ್ತು. ಹೀಗಾಗಿ ಇದರ  ಬಳಕೆಗೆ ಅವಕಾಶವಿಲ್ಲ ಎಂದು ಮಂಗಳೂರಿನ ಪೆಟ್ರೋಲಿಯಂ ಮತ್ತು ಎಕ್ಸ್‌ಪ್ಲೋಸಿವ್ಸ್‌ ಸೇಫ್ಟಿ ಆರ್ಗನೈಸೇಷನ್‌ ತಿಳಿಸಿತ್ತು.

ಈ ಗೊಂದಲದಿಂದ ಸ್ಫೋಟಕವನ್ನು ಸ್ಥಳದಲ್ಲಿಯೇ ಬಿಟ್ಟು ತೆರಳಿದ್ದಾರೆ ಎಂದು ತಿಳಿದು ಬಂದಿದೆ. ವಾಹನದಲ್ಲಿ ಸ್ಫೋಟಕ ವಸ್ತು ಇರುವ ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ದೀಪಕ್‌ ನೇತೃತ್ವದ ತಂಡ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಅಲ್ಲದೆ ನಿಯಮ ಉಲ್ಲಂಘಿಸಿದ ಮತ್ತು ಸ್ಫೋಟಕ ವಸ್ತುಗಳನ್ನು ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ಸಂಬಂಧ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.