ಐಸಿಸಿ ಟಿ20 ರ್‍ಯಾಂಕಿಂಗ್: ಭಾರತ ನಂ.2
Team Udayavani, Mar 11, 2021, 12:10 AM IST
ದುಬಾೖ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆರಂಭಿಸಲಿ ರುವ ಹೊತ್ತಿನಲ್ಲೇ ಭಾರತಕ್ಕೊಂದು ಸಿಹಿ ಸುದ್ದಿ ಲಭಿಸಿದೆ. ನೂತನ ಐಸಿಸಿ ಟೀಮ್ ರ್‍ಯಾಂಕಿಂಗ್‌ನಲ್ಲಿ ಭಾರತ ಮೂರರಿಂದ ಎರಡನೇ ಸ್ಥಾನಕ್ಕೆ ಏರಿದೆ.
ಕಿವೀಸ್-ಆಸ್ಟ್ರೇಲಿಯ ನಡುವಿನ ಟಿ20 ಸರಣಿ ಬಳಿಕ ಪರಿಷ್ಕರಿಸಿದ ನೂತನ ರ್‍ಯಾಂಕಿಂಗ್ ಯಾದಿಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಸರಣಿಯನ್ನು 2-3 ಅಂತ ರದಿಂದ ಕಳೆದುಕೊಂಡ ಕಾರಣ ಆಸೀಸ್ ಮೂರಕ್ಕೆ ಇಳಿಯಿತು. ಇದರಿಂದ ಭಾರತಕ್ಕೆ ಲಾಭವಾಯಿತು. ಇಂಗ್ಲೆಂಡ್ ಟಾಪ್ ಟೀಮ್ ಆಗಿದೆ.
ರಾಹುಲ್ ಕುಸಿತ
ನ್ಯೂಜಿಲ್ಯಾಂಡ್ ವಿರುದ್ಧ ಆರನ್ ಫಿಂಚ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ 2 ಸ್ಥಾನ ಮೇಲೇರಿದರು. ಇದರಿಂದ ಕೆ.ಎಲ್. ರಾಹುಲ್ ಎರಡರಿಂದ ಮೂರಕ್ಕೆ ಇಳಿಯಬೇಕಾಯಿತು. ಟಾಪ್-10 ಯಾದಿಯಲ್ಲಿರುವ ಭಾರತದ ಉಳಿ ದೋರ್ವ ಆಟಗಾರ ಕೊಹ್ಲಿ 6ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇದನ್ನೂ ಓದಿ :ಐಸಿಸಿ ಸಿಇಒ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಮನು ಸಾಹ್ನಿ
ನ್ಯೂಜಿಲ್ಯಾಂಡ್ ಎದುರಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಮಾರ್ಟಿನ್ ಗಪ್ಟಿಲ್ ಅಗ್ರ ಹತ್ತರ ಯಾದಿಗೆ ಮರಳಿ ದ್ದಾರೆ. ಅವರದು 3 ಸ್ಥಾನಗಳ ನೆಗೆತ. ಮ್ಯಾಕ್ಸ್‌ವೆಲ್ 7ನೇ ಸ್ಥಾನ ಉಳಿಸಿಕೊಂಡಿದ್ದು, ಡೇವಿಡ್ ಮಾಲನ್ ಅಗ್ರಸ್ಥಾನ ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Cricket; ವೇಗಿ ಸಿದ್ದಾರ್ಥ್ ಕೌಲ್ ನಿವೃತ್ತಿ
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.