ಬಜಪೆ ದುರಂತ: ಖಾಸಗಿ ದೂರು ರದ್ದು
Team Udayavani, Mar 12, 2021, 7:31 AM IST
ಬೆಂಗಳೂರು: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರು ಮತ್ತು ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣದಲ್ಲಿ ಮಂಗಳೂರು 2ನೇ ಜೆಎಂಎಫ್ಸಿ ಕೋರ್ಟ್ ಕ್ರಮವನ್ನು ಪ್ರಶ್ನಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಪೀಟರ್ ಅಬ್ರಹಾಂ, ಏರ್ಇಂಡಿಯಾ ಅಧಿಕಾರಿ ಆನ್ಸಬರ್ಟ್ ಡಿ’ ಸೋಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಅಶೋಕ್ ಜಿ. ನಿಜಗಣ್ಣನವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ 2ನೇ ಜೆಎಂಎಫ್ಸಿ ಕೋರ್ಟ್ ನಡೆಸುತ್ತಿದ್ದ ವಿಚಾರಣೆಯನ್ನು ರದ್ದುಪಡಿಸಿತು.
2010ರ ಮೇ 25ರಂದು ದುಬಾೖಯಿಂದ ಮಂಗಳೂರಿಗೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಸಾವನ್ನಪ್ಪಿದ್ದರು. ಇದಕ್ಕೆ ಸಂಬಂಧಿಸಿ 2012ರ ಮಾ. 6ರಂದು ಮಂಗಳೂರು ಮೂಲದ “812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು. ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆ ನಡೆಯುತ್ತಿತ್ತು. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.