ಹುಲಿ ಸೆರೆಗೆ ಆಗ್ರಹಿಸಿ ಪೊನ್ನಂಪೇಟೆ ಬಂದ್
Team Udayavani, Mar 12, 2021, 1:27 AM IST
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಮೂವರು ಅಮಾಯಕರ ಸಾವಿಗೆ ಕಾರಣವಾಗಿರುವ ಹುಲಿ ಯನ್ನು ನಿಗ್ರಹಿಸುವಲ್ಲಿನ ಸರಕಾರದ ವೈಫಲ್ಯವನ್ನು ಖಂಡಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನೀಡಿದ ಕರೆಯಂತೆ ಗುರುವಾರ ಪೊನ್ನಂಪೇಟೆ ತಾಲೂಕಿನಲ್ಲಿ ಮಧ್ಯಾಹ್ನದವರೆಗೆ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ತಾಲೂಕಿನ ಪ್ರಮುಖ ವಾಣಿಜ್ಯ ನಗರಿ ಗೋಣಿಕೊಪ್ಪಲು ಸೇರಿದಂತೆ ನಿಟ್ಟೂರು, ಬಾಳೆಲೆ, ಶ್ರೀಮಂಗಲ, ಕುಟ್ಟ, ಟಿ. ಶೆಟ್ಟಿಗೇರಿ, ಹುದಿಕೇರಿ ವಿಭಾಗಗಳಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಮುಚ್ಚುವ ಮೂಲಕ ಹುಲಿ ಸೆರೆಗೆ, ಇಲ್ಲವೇ ಗುಂಡಿಕ್ಕುವಂತೆ ಸರಕಾರದ ಮೇಲೆ ಒತ್ತಡ ಹೇರಲಾಯಿತು.
ಹುಲಿ ದಾಳಿಯಿಂದ ಜೀವಹಾನಿ ಸಂಭವಿಸಿದ ಬೆಳ್ಳೂರು ಗ್ರಾಮದಲ್ಲಿ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಅಹೋರಾತ್ರಿ ಧರಣಿಗೆ ಮುಂದಾಗಿರುವ ಗ್ರಾಮೀಣರು, ಹುಲಿ ಸೆರೆ ಹಿಡಿಯುವ ಇಲ್ಲವೆ ಗುಂಡಿಕ್ಕುವವರೆಗೆ ಪ್ರತಿಭಟನೆ ಮುಂದುವರಿಸುವ ದೃಢ ನಿರ್ಧಾರ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.