ಮೊದಲ ದಿನವೇ ‘ರಾಬರ್ಟ್’ ಪೈಸಾ ವಸೂಲಿ : ಫಸ್ಟ್ ಡೇ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ ?
Team Udayavani, Mar 12, 2021, 7:00 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಚಿಂದಿ ಉಡಾಯಿಸಿದೆ.
ರಾಬರ್ಟ್, ಗುರುವಾರ (ಮಾರ್ಚ್ 11) ಕರ್ನಾಟಕ ಹಾಗೂ ತೆಲುಗು ರಾಜ್ಯಗಳಲ್ಲಿ(ಆಂಧ್ರಪ್ರದೇಶ, ತೆಲಂಗಾಣ) ಅದ್ಧೂರಿಯಾಗಿ ತೆರೆ ಕಂಡಿದೆ. ಎಲ್ಲೆಡೆ ಅಮೋಘ ಪ್ರದರ್ಶನ ಕಾಣುತ್ತಿರುವ ಈ ಚಿತ್ರ ಮೊದಲ ದಿನವೇ ಪೈಸಾ ವಸೂಲಿ ಮಾಡಿದೆ. ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಪ್ರಮಾಣದಲ್ಲಿ ಹಣ ಬಾಚಿಕೊಂಡಿದೆ.
ರಾಬರ್ಟ್ ಮೊದಲ ದಿನದ ಕಲೆಕ್ಷನ್ ಎಷ್ಟು ?
‘ಯಜಮಾನ’ ಸಿನಿಮಾ ಬಳಿಕ ದರ್ಶನ್ ಅವರು ನಟಿಸಿರುವ ‘ರಾಬರ್ಟ್’ ಚಿತ್ರಕ್ಕೆ ಎಲ್ಲೆಡೆ ಅದ್ಭುತ ಸ್ವಾಗತ ದೊರೆತಿದೆ. ದಿನದ ಎಲ್ಲ ಪ್ರದರ್ಶನಗಳು ಪ್ರೇಕ್ಷಕರಿಂದ ತುಂಬಿ ತುಳುಕಿದೆ. ಮೊದಲ ದಿನವೇ ಕೋಟ್ಯಂತರ ರೂ. ಹಣ ಗಲ್ಲಾಪೆಟ್ಟಿಗೆಗೆ ಹರಿದು ಬಂದಿದೆ. ಮೂಲಗಳ ಪ್ರಕಾರ ರಾಬರ್ಟ್ ಫಸ್ಟ್ ಡೇ ಕಲೆಕ್ಷನ್ ಕರ್ನಾಟಕದಲ್ಲಿ ಬರೋಬ್ಬರಿ 17.24 ಕೋಟಿ, ತೆಲುಗು ರಾಜ್ಯಗಳಲ್ಲಿ 3.12 ಕೋಟಿಯಂತೆ. ರಾಬರ್ಟ್ ಚಿತ್ರದ ಮೊದಲ ದಿನದ ಗಳಿಕೆ ಚಿತ್ರತಂಡದ ಸಂತಸ ಇಮ್ಮಡಿಸಿದೆ.
ಇನ್ನು ಕನ್ನಡ ಚಿತ್ರರಂಗದಲ್ಲಿ ಬಾಕ್ಸ್ ಆಫೀಸ್ ಸುಲ್ತಾನ ಎಂದು ಬಿರುದು ಪಡೆದಿರುವ ದರ್ಶನ್, ಅದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.
ಇನ್ನು ತರುಣ್ ಕಿಶೋರ್ ನಿರ್ದೇಶನದ ರಾಬರ್ಟ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇವರಿಗೆ ನಾಯಕಿಯಾಗಿ ಆಶಾ ಭಟ್, ತೆಲುಗು ಚಿತ್ರರಂಗದ ಖ್ಯಾತ ಪೋಷಕ ನಟ ಜಗಪತಿ ಬಾಬು, ಕನ್ನಡದ ರವಿ ಶಂಕರ್, ಜ್ಯೂನಿಯರ್ ಟೈಗರ್ ವಿನೋದ ಪ್ರಭಾಕರ್, ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ ಹೀಗೆ ದೊಡ್ಡ ತಾರಾಬಳಗ ಕಾಣಿಸಿಕೊಂಡಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ರಾಬರ್ಟ್ ಚಿತ್ರವನ್ನು ಉಮಾಪತಿ ಶ್ರೀನಿವಾಸ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.