ಮಹದೇವನ ಧ್ಯಾನದಲ್ಲಿ ಮಹಾನಗರ ತಲ್ಲೀನ
ಶಿವದೇಗುಲಗಳಲ್ಲಿ ವಿಶೇಷ ಅಭಿಷೇಕ, ಅಲಂಕಾರ, ಪೂಜೆ ಕೈಂಕರ್ಯ | ಸಾಲಿನಲ್ಲಿ ನಿಂತು ಶಿವದರ್ಶನ ಪಡೆದ ಭಕ್ತವೃಂದ
Team Udayavani, Mar 12, 2021, 6:09 PM IST
ಬೆಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಶಿವಾಲಯಗಳಲ್ಲಿ ಗುರುವಾರ ಶಿವನಾಮ ಸ್ಮರಣೆ ಮೊಳಗಿತು. ಮುಂಜಾನೆ ಯಿಂದಲೇ ಶಿವನಿಗೆ ವಿವಿಧ ಪೂಜಾ ಕೈಂಕರ್ಯ ನಡೆದಿದ್ದು, ನೆರದ ಭಕ್ತರನ್ನು ಆಕರ್ಷಿಸಿದವು. ಭಕ್ತರು ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಶಿವರಾತ್ರಿ ಅಂಗವಾಗಿ ಶಿವಾಲಯಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಬಣ್ಣ ಬಣ್ಣದ ವಿದ್ಯುತ್ ದೀಪಲಂಕಾರ ಮಾಡಲಾಗಿತ್ತು. ಕೆಂಪೇಗೌಡ ನಗರದ ಐತಿಹಾಸಿಕ ಪ್ರಸಿದ್ಧ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಹಲಸೂರಿನ ಶ್ರೀಸೋಮೇಶ್ವರ ದೇವಾಲಯ, ಮಲ್ಲೇಶ್ವರದ ಶ್ರೀಕಾಡುಮಲ್ಲೇಶ್ವರ ದೇವಾಲಯ, ಕೋಟೆ ಶ್ರೀ ಜಲಕಂಠೇಶ್ವರ ದೇವಸ್ಥಾನ, ಜೆಪಿನಗರ 7ನೇ ಹಂತದಲ್ಲಿರುವ ಶ್ರೀ ನಂಜುಂಡೇಶ್ವರ ದೇವಾ ಲಯ ಸೇರಿದಂತೆ ಹಲವು ಶಿವಾ ಲಯ ಗಳಲ್ಲಿ ಈಶ್ವರನಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿ ಷೇಕಗಳ ನಡೆದವು.
ಭಕ್ತರ ಸುಗಮ ದರ್ಶನಕ್ಕಾಗಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಆಡಳಿತ ಮಂಡಳಿ ಭಕ್ತರ ದರ್ಶನಕ್ಕಷ್ಟೇ ಅವಕಾಶ ನೀಡಿತ್ತು. ಆ ಹಿನ್ನೆಲ್ಲೆಯಲ್ಲಿ ಮುಂಜಾನೆಯೇ ಸಾಲುಗಟ್ಟಿದ್ದ ಭಕ್ತ ಸಮೂಹ ದೂರದಿಂದಲೇ ದೇವರ ದರ್ಶನ ಪಡೆಯಿತು. ಈ ವೇಳೆ ಮಾತನಾಡಿದ ದೇಗುಲ ಆಡಳಿತಾಧಿಕಾರಿ ಕೃಷ್ಣ ಗಂಗಾಧರೇಶ್ವರನಿಗೆ ಅಲಂಕಾರ ಸೇರಿದಂತೆ ವಿವಿಧ ಪೂಜೆಗಳು ನಡೆದವು.ಗುರುವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ಮುಂಜಾನೆ ವರೆಗೂ ಶಿವಲಿಂಗಕ್ಕೆ ಅಭಿಷೇಕ, ವಿಶೇಷ ಅಲಂಕಾರ ನಡೆಯಿತು ಎಂದರು.
ಕೊರೊನಾ ಹಿನ್ನೆಲೆಯಲ್ಲಿಮುಂಜಾಗ್ರತಾ ಕ್ರಮ ವಹಿಸಲಾಗಿತ್ತು.ಹಳೆ ಮದ್ರಾಸ್ ರಸ್ತೆಯ ಶಿವದೇವಾಲಯ, ಮಾಚೋ ಹಳ್ಳಿಯ ಜೋಡಿ ವೀರಭದ್ರೇಶ್ವರ ರುದ್ರೇಶ್ವರ ಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ಯಶ ವಂತಪುರದ ಶ್ರೀ ಮಹಾಯಾಗ ಕ್ಷೇತ್ರ ಶ್ರೀಗಾಯತ್ರಿ ದೇವಸ್ಥಾನ, ಬಳೇ ಪೇಟೆಯ ಕಾಶಿ ವಿಶ್ವ ನಾಥ ದೇವಸ್ಥಾನ, ಕೆ.ಆರ್.ಪುರದ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಾಲಯ, ಇಟ್ಟು ಮಡು ವಿನ ಕೆ.ಬಿ.ರಸ್ತೆಯ ಲ್ಲಿರುವ ರಾಮೇ ಶ್ವರ ಸ್ವಾಮಿ ದೇವಾಲ ಯ, ಬೇಗೂರು ನಗರೇಶ್ವರ ದೇವಸ್ಥಾನ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಸಮೀಪ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ಇನ್ನೂ ಹಲವು ಬಡಾ ವಣೆಗಳಲ್ಲಿರುವ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸ ಲಾಯಿತು.
ಯಶವಂತಪುರದ ಗಾಯತ್ರಿ ದೇವಾಲಯದಲ್ಲಿ ಶ್ರೀಸ್ವರ್ಣ ಗೌರಿ ಸಮೇತ ಶ್ರೀ ಅಗಸೆöàಶ್ವರ ಸ್ವಾಮಿಗೆ ಸಹಸ್ರನಾಮ ಬಿಲ್ವಾರ್ಚನೆ ನಡೆಯಿತು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಶಿವನಾಮ ಸ್ಮರಣೆ: ಶಿವರಾತ್ರಿಯ ಹಿನ್ನೆಲೆಯಲ್ಲಿ ಉಪವಾಸ, ಜಾಗರಣೆ ಮಾಡಿ ಶಿವಸ್ಮರಣೆ ಮಾಡಿದರು. ಪುರಾಣ ಪಠಣ, ವೇದಾಂತಉಪನ್ಯಾಸ ನಡೆದವು. ಸಂಗೀತೋತ್ಸವದ ಜತೆಗೆ ಅಹೋರಾತ್ರಿ ಶಿವನಾಮ ಜಪ ಜರುಗಿದವು. ರಾತ್ರಿ ಜಾಗರಣೆಗಾಗಿ ನಾನಾ ಸಂಘ ಸಂಸ್ಥೆಗಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿದ್ದವು. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಭಜನೆ, ಸತ್ಸಂಗ ನಡೆಯಿತು. ಶ್ರೀ ಶೃಂಗೇರಿ ಶಾರದಾ ಪೀಠಂ ಶಂಕರಪುರಂನ ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ಗುರುವಾರ ವಿಶೇಷ ಪೂಜೆ, ವೇದಾಶೀರ್ವಾದಗಳು ನೆಡೆದವು. ಹೆಬ್ಟಾಳದ ಚೋಳನಾಯಕನಹಳ್ಳಿಯ ಶ್ರೀಆನಂ ದ ಗಿರಿ ಬೆಟ್ಟದಲ್ಲಿ ಶಿವರಾತ್ರಿ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈಶ್ವರನಿಗೆ ವಿಶೇಷ ಪೂಜೆ ಅಲಂಕಾರ ಮಾಡ ಲಾಗಿತ್ತು. ಕೋಟೆ ಶ್ರೀ ಜಲಕಂಠೇಶ್ವರ ದೇವ ಸ್ಥಾನದಲ್ಲಿ ಮಹಾಪ್ರದೋಷ, ನಂದೀಶ್ವರ ಸ್ವಾಮಿಗೆ ಅಭಿಷೇಕ ಸೇರಿದಂತೆ ಹಲವು ಪೂಜಾ ಕಾರ್ಯಕ್ರಮಗಳು ನೆರೆದ ಭಕ್ತರನ್ನು ಆಕರ್ಷಿಸಿದವು. ಮಲ್ಲೇಶ್ವರದ ನಂಜನಗೂಡು ಶ್ರೀಕಂಠೇಶ್ವರ ಸೇವಾ ಸಂಘ ಶಿವರಾತ್ರಿ ಅಂಗವಾಗಿ ಹಮ್ಮಿ ಕೊಂಡಿದ್ದ ಭಜನಾ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು. ಕುಮಾರಸ್ವಾಮಿ ಬಡಾವಣೆಯ ಬ್ರಾಹ್ಮಣ ಸೇವಾ ಸಂಘದ ಮಹಿಳಾ ವಿಭಾಗದ ಜಯಲಕ್ಷ್ಮಿ ತಂಡ ಭಜನಾ ಕಾರ್ಯಕ್ರಮ ನಡೆಸಿಕೊಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.