![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 13, 2021, 7:18 PM IST
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಪಂಗಳಲ್ಲಿ ಮಾ.29ರಂದು ಸರಕಾರ ನಡೆಸಲು ಉದ್ದೇಶಿಸಿದ ಗ್ರಾಪಂ ಚುನಾವಣೆಯನ್ನು ಮತ್ತೆ ಬಹಿಷ್ಕರಿಸಲು ಖಾಂಡ್ಯ ನಾಗರಿಕ ರಕ್ಷಣಾ ವೇ ದಿಕೆ ನಿರ್ಧರಿಸಿದೆ.
ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ, ಪರಿಸರ ಸೂಕ್ಷ್ಮ ವಲಯ ಯೋಜನೆಗಳನ್ನು ಜನರ ಮೇಲೆ ಸರಕಾರ ಹೇರುತ್ತಿದೆ ಎಂದು ಆರೋಪಿಸಿ ಡಿ.22ರಂದು ನಡೆದ ಗ್ರಾಪಂ ಚುನಾವಣೆಯನ್ನು ಬಹಿಷ್ಕರಿಸಲಾಗಿತ್ತು, ಹೀಗೆ ಚುನಾವಣೆ ಬಹಿಷ್ಕಾರಗೊಂಡ ಗ್ರಾಪಂಗಳಲ್ಲಿ ಮರು ಚುನಾವಣೆ ನಡೆಸಲು ಚುನಾವಣಾ ಆಯೋಗ ಮಾ.29ರಂದು ದಿನಾಂಕ ನಿಗದಿಪಡಿಸಿದೆ.
ಈ ಹಿನ್ನೆಲೆಯಲ್ಲಿ ಖಾಂಡ್ಯ ಹೋಬಳಿಯ ದೇವದಾನ, ಬಿದರೆ, ಹುಯಿಗೆರೆ, ಕಡವಂತಿ ಗ್ರಾಪಂ ವ್ಯಾಪ್ತಿಯ ಮುಖಂಡರು ಸಂಗಮೇಶ್ವರಪೇಟೆ ಸಭಾ ಭವನದಲ್ಲಿ ಸಭೆ ಸೇರಿ ಸರಕಾರ ಸ್ಪಷ್ಟ ನಿಲುವು ವ್ಯಕ್ತಪಡಿಸುವವರೆಗೂ ಚುನಾವಣೆಯನ್ನು ಬಹಿಷ್ಕರಿಸುವ ಕುರಿತು ಚರ್ಚೆ ನಡೆಸಿ ಬಹಿಷ್ಕಾರ ತೀರ್ಮಾನ ಕೈಗೊಂಡರು.
ಅಂತಿಮವಾಗಿ ಇನ್ನೊಮ್ಮೆ ಹೋಬಳಿಯ ಎಲ್ಲಾ ಮುಖಂಡರು ಸೇರಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆಯ ಚಂದ್ರಶೇಖರ್ ರೈ ತಿಳಿಸಿದ್ದಾರೆ. ಮುಖಂಡರಾದ ಶಿವಶಂಕರ್, ವಿಜಯಕುಮಾರ್, ಸುಧಾಕರ್ ಬೆಳಸೆ, ರಾಜು ಸೇರಿದಂತೆ ಇತರ ಮುಖಂಡರು ಇದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.