ನಾಳೆಯಿಂದ ದುಡಿಯೋಣ ಬಾ ಅಭಿಯಾನ

ಕಲ್ಪತರು ನಾಡಿನ ಗ್ರಾಮಗಳಲ್ಲಿ ಅಭಿಯಾನ ಆರಂಭ , ಗ್ರಾಮೀಣರಿಗೆ ನರೇಗಾ ಯೋಜನೆಯಡಿ 100ದಿನ ಕೆಲಸ

Team Udayavani, Mar 14, 2021, 2:05 PM IST

ನಾಳೆಯಿಂದ ದುಡಿಯೋಣ ಬಾ ಅಭಿಯಾನ

ತುಮಕೂರು: ಬೇಸಿಗೆ ಅವಧಿಯಲ್ಲಿ ಕಲ್ಪತರು ನಾಡಿನ ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಒದಗಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ಮಾ.15 ರಿಂದ 3 ತಿಂಗಳವರೆಗೆ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನರೇಗಾ ಯೋಜನೆಯಡಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು. ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆಮಾಡುವುದು. ಸ್ಥಳೀಯವಾಗಿ ಉದ್ಯೋಗ ನೀಡಿ ಸ್ವಾವಲಂಬಿಗಳಾಗುವಂತೆ ಮಾಡುವುದು. ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಜಿಪಂ ಸಿಇಒ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜನಜಾಗೃತಿ ಕಾರ್ಯಕ್ರಮ: ಮಾ.15ರಿಂದ ಮಾರ್ಚ್‌ 22ರವರೆಗೆ ದುಡಿಯೋಣ ಬಾ ಅಭಿಯಾನ ಕುರಿತುಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಜನಜಾಗೃತಿಕಾರ್ಯಕ್ರಮ ನಡೆಸಲಾವುದು. ಒಂದು ಕುಟುಂಬವು ವರ್ಷದಲ್ಲಿ 100 ದಿನಗಳ ಕೆಲಸ ಮಾಡಲು ಅವಕಾಶ ಇದ್ದು, ಬೇಸಿಗೆ ಅವಧಿಯಲ್ಲಿ 60 ದಿನಗಳು ಕೆಲಸ ಮಾಡಿದರೆ 16,500 ರೂ.ಗಳಿಸಬಹುದು. ಇದರಿಂದ ಮುಂಬರುವ ಕೃಷಿ ಚಟುವಟಿಕೆಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಖರೀದಿ, ಮಕ್ಕಳ ಶಾಲೆ ಮತ್ತು ಕಾಲೇಜು ಶುಲ್ಕ ಭರಿಸಲು ಅನುಕೂಲವಾಗುತ್ತದೆ ಎಂಬ ಅಂಶದ ಬಗ್ಗೆ ಗ್ರಾಮೀಣ ಜನರಲ್ಲಿ ಜನ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಉದ್ಯೋಗ ಚೀಟಿ ಹೊಂದಿಲ್ಲದ ಕುಟುಂಬಗಳಿಗೆ ನಮೂನೆ-1ರಲ್ಲಿ ಉದ್ಯೋಗ ಚೀಟಿಗಾಗಿ ಅರ್ಜಿ ಮತ್ತು ಅಗತ್ಯ ದಾಖಲಾತಿ ಪಡೆದುಕೊಳ್ಳುವುದು, ನೋಂದಾಯಿತ ಕೂಲಿಕಾರರಿಂದ ನಮೂನೆ-6ರಲ್ಲಿಒಂದೇ ಬಾರಿಗೆ 3 ತಿಂಗಳ ಕೆಲಸದ ಬೇಡಿಕೆ ಪಡೆಯುವುದು ಹಾಗೂ ಗ್ರಾಪಂಗಳಲ್ಲಿ ಕೆಲಸದ ಬೇಡಿಕೆಪಡೆಯಲು ಬೇಡಿಕೆ ಪೆಟ್ಟಿಗೆಗಳನ್ನು ಇಡುವುದು ಈಜನಜಾಗೃತಿ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.

ಉದ್ಯೋಗ ಚೀಟಿ ವಿತರಣೆ: ಮಾ.23ರಿಂದ 31ರವರೆಗೆ ಉದ್ಯೋಗ ಚೀಟಿಗಾಗಿ ಅರ್ಜಿ ಸಲ್ಲಿಸಿದ ಎಲ್ಲ ಕುಟುಂಬಕ್ಕೆ ಕಡ್ಡಾಯವಾಗಿ ಉದ್ಯೋಗ ಚೀಟಿ ವಿತರಿಸುವುದು. ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ಕೆಲಸ ಒದಗಿಸಲು ಕಾಮಗಾರಿಗಳ ಅಂದಾಜುಪಟ್ಟಿ ತಯಾರಿಕೆ, ತಾಂತ್ರಿಕ ಮತ್ತು ಆಡಳಿತ ಮಂಜೂರಾತಿ, ಸಾರ್ವಜನಿಕ ಮಾಹಿತಿ ಫ‌ಲಕ ಅಳವಡಿಕೆ ಮತ್ತು ಜಿಯೋ ಟ್ಯಾಗ್‌ ಇತ್ಯಾದಿ ಕಾಮಗಾರಿ ಪ್ರಾರಂಭ ಪೂರ್ವ ಸಿದ್ಧತೆ ಮಾಡಿಕೊಳ್ಳುವುದು. ವ್ಯವಸ್ಥಿತವಾಗಿ ಕೂಲಿಕಾರರ ಗುಂಪುಗಳನ್ನು ರಚಿಸಿ ಮೇಟ್‌ ಗುರುತಿಸುವುದು ಮತ್ತು ಮೇಟ್‌ಗಳಿಗೆ ತರಬೇತಿ ನೀಡಲು ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಂಡು, ಏ.1ರಿಂದ ಕಾಮಗಾರಿ ಪ್ರಾರಂಭಿಸಲು ಎನ್‌ಎಂಆರ್‌ ಸೃಜನೆ ಮಾಡಲು ಕ್ರಮವಹಿಸಲಾಗುವುದು ಎಂದಿದ್ದಾರೆ. ಕೂಲಿಕಾರನಿಗೆ ನಿರಂತರ ಕೆಲಸ: ಏ.1ರಿಂದ ಜೂನ್‌ 15ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಪೆಟ್ಟಿಗೆ ತೆರೆದು ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರವಿವರ ಎಂಐಎಸ್‌ನಲ್ಲಿ ದಾಖಲಿಸುವುದು. 2  ದಿನದೊಳಗೆ ಕೆಲಸ ಒದಗಿಸುವುದು. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಶಿಶುಪಾಲನೆ ಸೌಲಭ್ಯ ಕಲ್ಪಿಸುವುದು. ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಯೋಜನೆ ಯಶಸ್ಸಿಗೆ ಸಮಿತಿ ರಚನೆ  :

ದುಡಿಯೋಣ ಬಾ ಅಭಿಯಾನ ಮೇಲ್ವಿಚಾರಣೆ ಮಾಡಲು ಜಿಲ್ಲೆ, ತಾಲೂಕು, ಗ್ರಾಪಂಮಟ್ಟದಲ್ಲಿ ಉಸ್ತುವಾರಿ ಸಮಿತಿ ರಚಿಸಲಾಗಿದ್ದು,ಅಭಿಯಾನವನ್ನು ಸಂಪೂರ್ಣ ಯಶಸ್ವಿಗೊಳಿಸುವ ಸಂಪೂರ್ಣ ಹೊಣೆಗಾರಿಕೆಯನ್ನು ಆಯಾ

ಸಮಿತಿಗಳಿಗೆ ನೀಡಲಾಗಿದೆ. ಅಭಿಯಾನದಅವಧಿಯಲ್ಲಿ ಬದು ನಿರ್ಮಾಣ, ಬಚ್ಚಲು ಗುಂಡಿ, ಸಮಗ್ರ ಕೆರೆ ಅಭಿವೃದ್ಧಿ, ರಸ್ತೆ ಬದಿ ನೆಡು ತೋಪು, ಬ್ಲಾಕ್‌ ಪ್ಲಾಂಟೇಶನ್‌, ಕೃಷಿ ಅರಣ್ಯೀಕರಣ, ರೈತರ ಜಮೀನುಗಳಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಮುಂಗಡವಾಗಿ ಗುಂಡಿ ತೆಗೆಯುವ ಕಾಮಗಾರಿ, ಬೋರ್‌ವೆಲ್‌ ರೀಚಾರ್ಜ್‌ ಕಾಮಗಾರಿ ಕೈಗೆತ್ತಿಕೊಳ್ಳಲು ಎಲ್ಲ ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಯಭಾರಿ ನೇಮಕಕ್ಕೂ ಅವಕಾಶ :

ದುಡಿಯೋಣ ಬಾ ಅಭಿಯಾನದ ಅನುಷ್ಟಾನ ಮತ್ತು ಮೇಲ್ವಿಚಾರಣೆಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿಯಾನದ ಕಾಲಾವಧಿಗೆ ರಾಯಭಾರಿಯನ್ನುಗ್ರಾಪಂ ಪಿಡಿಒ ಅಧಿಕಾರಿಗಳು ನೇಮಕ ಮಾಡಿಕೊಳ್ಳಬಹುದು. ನರೇಗಾ ಕೂಲಿ ಕೆಲಸದಲ್ಲಿ ದೀರ್ಘ‌ ಕಾಲ ಮೇಟ್‌ ಆಗಿ ಕಾರ್ಯನಿರ್ವಹಿಸಿಅನುಭವ ಇರುವವರಿಗೆ ರಾಯಭಾರಿಯಾಗಿ ನೇಮಿಸಬಹುದಾಗಿದೆ. ಬೇಸಿಗೆ ಕಾಲದಲ್ಲಿ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೂಲಿಯ ಅವಕಾಶ ಕಡಿಮೆ ಇರುವುದರಿಂದ ಅಗತ್ಯವಿರುವ ಎಲ್ಲ ಜನರೂ ಗ್ರಾಪಂನಿಂದ ಉದ್ಯೋಗ ಚೀಟಿ ಪಡೆದುಕೆಲಸಕ್ಕಾಗಿ ಬೇಡಿಕೆ ಅರ್ಜಿ ಸಲ್ಲಿಸಿ ನರೇಗಾ ಯೋಜನೆಯಿಂದ ಅನುಕೂಲ ಪಡೆಯುವಂತೆ ಜಿಪಂ ಸಿಇಒ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.