ಸಿಡಿ ಪ್ರಕರಣರದ ಸತ್ಯ ತನಿಖೆ ನಂತರ ಗೊತ್ತಾಗುತ್ತದೆ : ವಿಜಯೇಂದ್ರ
ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ
Team Udayavani, Mar 14, 2021, 4:52 PM IST
ಚಿತ್ರದುರ್ಗ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರ್ಕಾರ SIT ಮೂಲಕ ತನಿಖೆ ನಡೆಸುತ್ತಿದೆ. ನಿನ್ನೆ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ. ಬರುವ ದಿನಗಳಲ್ಲಿ ಸತ್ಯ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗುತ್ತದೆ ಎಂದು ಮುರುಘಾ ಮಠದಲ್ಲಿ ನಡೆದ ಶರಣ ಸೇನೆ ಉದ್ಘಾಟನೆ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ನಿನ್ನೆ ಕೈ ಪಡೆಯ ಶಿವಮೊಗ್ಗ ಚಳುವಳಿ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ದಿನೇ ದಿನೇ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಂತೆ ರಾಜ್ಯದಲ್ಲೂ ಕಳೆದುಕೊಳ್ಳತ್ತದೆ. ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದು ತಪ್ಪಾ? ಘೋಷಣೆ ಕೂಗಿದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ ಆ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಪಕ್ಷ ಗೂಂಡಾಗಿರಿ ಮಾಡಲು ಬಿಜೆಪಿ ಅವಕಾಶ ನೀಡಲ್ಲ. ಸಿಡಿ ರಾಮ, ಬಾಂಬೆ ರಾಮ ಎಂಬ ರಮೇಶ್ ಕುಮಾರ್ ಹೇಳಿಕೆಗೆ ವಿಜಯೇಂದ್ರ ತಿರುಗೇಟು ನೀಡಿದ್ದು, ಎಲುಬಿಲ್ಲದ ನಾಲಿಗೆ ಏನು ಬೇಕಾದರು ಮಾತನಾಡುತ್ತದೆ. ಇದಕ್ಕೆಲ್ಲಾ ರಾಜ್ಯದ ಜನತೆ ಉತ್ತರ ಕೊಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.