ಕೃಷಿ ಪತ್ತಿನ ಸಂಘಗಳಲ್ಲಿ ಜನೌಷಧ ಕೇಂದ್ರ
Team Udayavani, Mar 15, 2021, 1:31 PM IST
ಕೋಲಾರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರಧಾನ ಮಂತ್ರಿಜನೌಷಧಿ ಕೇಂದ್ರಗಳನ್ನು ತೆರೆಯುವ ಬಗ್ಗೆಹಾಗೂ ಸಾಲ ವಸೂಲಾತಿ ಕುರಿತು ಅರಿವುಮೂಡಿಸಲು ಸೊಸೈಟಿಗಳ ಸಿಇಒಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಶೇಶ ತರಬೇತಿ ಕಾರ್ಯಾಗಾರವನ್ನು ಮಾ.17 ರಂದು ಬೆಳಗ್ಗೆ 10 ಗಂಟೆಗೆ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸ ಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಕೋಲಾರ ಮತ್ತುಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರಬ್ಯಾಂಕ್ ಹಾಗೂ ಸಹಕಾರ ಇಲಾಖೆಆಶ್ರಯದಲ್ಲಿ ಈ ಕಾರ್ಯಾಗಾರಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ವ್ಯಾಪ್ತಿ ಹೆಚ್ಚು: ಸಹಕಾರ ಮಹಾಮಂಡಳ ವತಿಯಿಂದ ರಾಜ್ಯಾದ್ಯಂತ 1 ಸಾವಿರ ಜನೌಷಧಿ ಕೇಂದ್ರಗಳನ್ನುತೆರೆಯಲು ನಿರ್ಧರಿಸಲಾಗಿದ್ದು, ಇದರಲ್ಲಿಹೆಚ್ಚಿನ ಸಂಖ್ಯೆಯ ಕೇಂದ್ರಗಳನ್ನು ಡಿಸಿಸಿ ಬ್ಯಾಂಕ್ ವ್ಯಾಪ್ತಿಯಲ್ಲಿನ ಸೊಸೈಟಿಗಳಮೂಲಕ ಆರಂಭಿಸುವ ಚಿಂತನೆಯೊಂದಿಗೆಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜನೌಷಧ ಕೇಂದ್ರಗಳಮಾಹಿತಿ: ಕಾರ್ಯಗಾರವನ್ನು ಶ್ರೀನಿವಾಸಪುರ ಶಾಸಕಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸುವರು. ರಾಜ್ಯ ಸಹಕಾರ ಮಹಾಮಂಡಳಿ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್‌ಜನೌಷಧ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಾಹಿತಿ ನೀಡುವರು. ಶಾಸಕರು ಹಾಗೂ ಇಪ್ಕೋ ವಿಮೆ ಕಂಪನಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸುವರು.
ಸಿಬ್ಬಂದಿಗೆ ತರಬೇತಿ: ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಜನೌಷಧಿ ಕೇಂದ್ರತೆರೆಯುವ ಕುರಿತು ಅನುಸರಿಸಬೇಕಾದ ಕ್ರಮಗಳು ಮತ್ತು ಬ್ಯಾಂಕುಗಳ ನಿಷ್ಕ್ರಿಯಆಸ್ತಿಯಾಗಿರುವ ಎನ್‌ಪಿಎ ಸಾಲಗಳನ್ನು ಗುರುತಿಸುವಿಕೆ ಹಾಗೂ ವಸೂಲಾತಿ ಕುರಿತು ಫ್ಯಾಕ್ಸ್‌ಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಡಿಸಿಸಿ ಬ್ಯಾಂಕ್‌ಎಜಿಎಂ ಎಂ.ಆರ್. ಶಿವಕುಮಾರ್ ತರಬೇತಿ ನೀಡಲಿದ್ದಾರೆ ಗೋವಿಂದಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.