ವೈರಮುಡಿ ಉತ್ಸವ: ಹೊರ ರಾಜ್ಯ, ಜಿಲ್ಲೆಯ ಭಕ್ತಾಧಿಗಳಿಗೆ ನಿರ್ಬಂಧ, ಸರಳವಾಗಿ ಆಚರಿಸಲು ನಿರ್ಧಾರ
Team Udayavani, Mar 15, 2021, 7:59 PM IST
ಮಂಡ್ಯ: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ವೈರಮುಡಿ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದು, ಸದರಿ ಆಚರಣೆಗೆ ಅಂತರ್ ರಾಜ್ಯ, ಅಂತರ್ ಜಿಲ್ಲೆ ಮಂಡ್ಯದ ಇತರೆ ತಾಲೂಕುಗಳಿಂದ ಬರುವ ಭಕ್ತಾಧಿಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಆಚರಣೆಯ ಪೂರ್ವಭಾವಿ ಸಬೆಯಲ್ಲಿ ಮಾತನಾಡಿದ ಅವರು, ಮಾ.19ರಿಂದ 31ರವರೆಗೆ ವಿಶ್ವ ವಿಖ್ಯಾತಿ ಮೇಲುಕೋಟೆ ವೈರಮುಡಿ ಉತ್ಸವ ನಡೆಯಲಿದ್ದು, 24ರಂದು ಶ್ರೀ ಚಲುವನಾರಾಯಣಸ್ವಾಮಿಯ ವೈರಮುಡಿ ಕಿರೀಟಧಾರಣೆ ಮಹೋತ್ಸವ ನಡೆಯಲಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುವುದರಿಂದ ಮಾ.12ರ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಸೂಚಿಸಲಾಗಿದೆ ಎಂದರು.
ನೆಗೆಟಿವ್ ವರದಿ ಬಂದವರಿಗೆ ದರ್ಶನ:
ಭಕ್ತಾಧಿಗಳ ದರ್ಶನಕ್ಕೆ ದೇವಸ್ಥಾನದ ಎರಡು ಪ್ರವೇಶ ದ್ವಾರದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪ್ರವೇಶದ್ವಾರದಲ್ಲಿಯೇ ಕೋವಿಡ್-19 ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುವುದು. ಅಲ್ಲದೆ, ನೆಗೆಟಿವ್ ವರದಿ ಬಂದವರಿಗೆ ಸೀಲ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
2 ಸಾವಿರ ಭಕ್ತರಿಗೆ ಅವಕಾಶ:
ಉತ್ಸವದಲ್ಲಿ ಕೇವಲ 2 ಸಾವಿರ ಹೆಚ್ಚಿನ ಭಕ್ತಾಧಿಗಳು ಸೇರದಂತೆ ವ್ಯವಸ್ಥೆ ಮಾಡಲಾಗಿದ್ದು, ದೇವಸ್ಥಾನದ ಪ್ರಾಂಗಣದೊಳಗೆ ಒಂದು ಬಾರಿಗೆ ನೂರಕ್ಕಿಂತ ಹೆಚ್ಚು ಜನರಿಗೆ ಪ್ರವೇಶವಿಲ್ಲ. ದೇವಸ್ಥಾನದಲ್ಲಿ ನಿಯೋಜಿಸಿರುವ ಅರ್ಚಕರು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ಹೊರತುಪಡಿಸಿ, ಹೆಚ್ಚುವರಿ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ದೇವಾಲಯದ ಆವರಣದಲ್ಲಿ ಗುಂಪುಗೂಡುವುದನ್ನು ಹಾಗೂ ರಾತ್ರಿ ವೇಳೆಯಲ್ಲಿ ತಂಗುವಿಕೆಯನ್ನು ನಿಷೇಧಿಸಲಾಗಿದೆ ಎಂದರು.
ಇದನ್ನೂ ಓದಿ :ಚಲಿಸುವ ಕಾರಿನ ಮೇಲೆ ಸ್ಟಂಟ್ ಮಾಡಿದ ಯುವಕ : ಪೊಲೀಸರಿಂದ ತಕ್ಕ ಪಾಠ!
ಪ್ರಸಾದ ವಿತರಣೆ ಇಲ್ಲ:
ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ. ಸುತ್ತಮುತ್ತಲಿನ ಹೊಟೇಟ್‌ಳನ್ನು ತೆರೆಯದಂತೆ ಆದೇಶಿಸಲಾಗಿದೆ ಎಂದರು.
24ರoದು ಬ್ರಹ್ಮೋತ್ಸವ ಮಧ್ಯಾಹ್ನ 3 ಗಂಟೆಯಿoದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ರಾತ್ರಿ 12 ಗಂಟೆಯೊಳಗೆ ಮುಗಿಯುವಂತೆ ಕ್ರಮ ವಹಿಸಲಾಗಿದೆ. ಸರಳ ಆಚರಣೆಗೆ ಸಾರ್ವಜನಿಕರು ಸಹಕರಿಸಿ, ಸ್ಥಳದಲ್ಲಿ ಮಾಸ್ಕ್ ಧರಿಸಿ, ನಿಯೋಜಿಸಿರುವ ಸ್ಯಾನಿಟೈಸರ್ ಬಳಸಿ ಹಾಗೂ 3.25 ಚ.ಮೀ ದೈಹಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯಬೇಕು ಎಂದರು.
ಪಾoಡವಪುರದ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ವಾರ್ತಾಧಿಕಾರಿ ಟಿ.ಕೆ.ಹರೀಶ್, ಪಾಂಡವಪುರ ತಹಶಿಲ್ದಾರ್ ಪ್ರಮೋದ್ ಎಲ್.ಪಾಟೀಲ್ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.