ಮತ್ತೆ ಲಾಕ್‌ಡೌನ್‌ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ


Team Udayavani, Mar 16, 2021, 7:00 AM IST

ಮತ್ತೆ ಲಾಕ್‌ಡೌನ್‌ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್‌ಡೌನ್‌ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್‌ಡೌನ್‌ನತ್ತ ಮುಖ ಮಾಡದೆ ಇರುವಂತೆ ನೋಡಿ­ಕೊಳ್ಳಬೇಕಾಗಿದೆ.

ಇದನ್ನೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು ಇನ್ನೊಂದು ಲಾಕ್‌ಡೌನ್‌, ಕರ್ಫ್ಯೂನಂಥ ಪರಿಸ್ಥಿತಿಯನ್ನು ತಂದುಕೊಳ್ಳುವುದು ಬೇಡ ಎಂದು ಜನತೆಯಲ್ಲಿ ಕೈಮುಗಿದು ಕೇಳಿಕೊಂಡಿದ್ದಾರೆ. ಈಗಾಗಲೇ ಕೆಲವು ಕಠಿನ ನಿರ್ಬಂಧಗಳನ್ನು ಸರಕಾರ ಹೇರಿದೆ. ಕೊರೊನಾ ನಿಯಂತ್ರಣ ಮತ್ತು ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ| ಸುಧಾಕರ್‌ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮುಂದಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಹೆಜ್ಜೆ ಇಟ್ಟಿರುವುದು ಸ್ತುತ್ಯರ್ಹ. ಕೊಳ್ಳೆ ಹೊಡೆಯುವ ಮೊದಲೇ ದಿಡ್ಡಿ ಬಾಗಿಲು ಹಾಕುವುದು ಸೂಕ್ತ.

ಜನವರಿ ತಿಂಗಳ ಅನಂತರ ಇದೇ ಮೊದಲ ಬಾರಿ ಸೋಂಕಿನ ಸಂಖ್ಯೆ ಒಂದು ಸಾವಿರದ ಆಸುಪಾಸಿನಲ್ಲಿರುವುದು ಕಡೆಗಣಿಸುವಂಥ ವಿಚಾರವಂತೂ ಅಲ್ಲ. ಫೆಬ್ರವರಿ ಕೊನೆಯ ವಾರ ನಿತ್ಯ ಸರಾಸರಿ 400ರಷ್ಟಿದ್ದ ಪ್ರಕರಣಗಳು ಮಾರ್ಚ್‌ ಮೊದಲ ವಾರ 500 ದಾಟಿದ್ದರೆ, ಈಗ 900 ದಾಟಿದೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದಂತೂ ಸತ್ಯ. ಇನ್ನೊಂದು ಅಘಾತಕಾರಿ ಅಂಶವೆಂದರೆ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಿಸಲಾಗಿಲ್ಲ. ಅಂದರೆ ಪರೀಕ್ಷೆ ಸಂಖ್ಯೆ ಕಡಿಮೆ ಇದ್ದಾಗಲೇ ಸೋಂಕು ಏರಿಕೆ ಕಂಡುಬರುತ್ತಿದೆ ಎನ್ನುವುದು ಆತಂಕಕಾರಿಯೇ. ದೇಶದಲ್ಲಿ ಕಳೆದ ಒಂದೇ ವಾರದಲ್ಲಿ ಶೇ. 33ರಷ್ಟು ಏರಿಕೆ ಕಂಡುಬಂದಿದೆ. ರವಿವಾರದಿಂದ ಸೋಮವಾರದೊಳಗಿನ 24 ಗಂಟೆಗಳಲ್ಲಿ 26,291ರಷ್ಟು ಸೋಂಕು ದಾಖಲಾಗಿರುವುದು ಗಮನಾರ್ಹ­ವಾದುದು. ಇದು 84 ದಿನಗಳಲ್ಲೇ ಗರಿಷ್ಠವಾದುದು.

ಸರಕಾರ ಈಗಲೇ ಗಂಭೀರವಾಗಿ ಪರಿಗಣಿಸಿ ಅಗತ್ಯ ಇರುವ ಎಲ್ಲ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಜತೆ ಜತೆಗೆ, ಸಾರ್ವಜನಿಕರೂ ಈ ನಿಟ್ಟಿನಲ್ಲಿ ಸರಕಾರದ ಜತೆ ಕೈಜೋಡಿಸಬೇಕು. ಎಲ್ಲಕ್ಕೂ ಸರಕಾರವನ್ನೇ ನೆಚ್ಚಿಕೊಂಡು ಅಥವಾ ಸರಕಾರದ ಮೇಲೆ ಭಾರ ಹಾಕಿ ಕೂರುವುದು ಪ್ರಜ್ಞಾವಂತ ನಾಗರಿಕನ ಲಕ್ಷಣ ಅಲ್ಲ. ಸರಕಾರ ವಿಧಿಸುವ ನಿಯಮಗಳ ಪಾಲನೆಗೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಮುಂದಾಗಬೇಕು. ಕೊರೊನಾ ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿರುವ ಕೆಲವು ಕ್ರಮಗಳನ್ನು ಸಾರ್ವಜನಿಕರು ಪಾಲಿಸಬೇಕಾಗುತ್ತದೆ. ಇಲ್ಲದೆ ಇದ್ದರೆ ಕಳೆದ ಮಾರ್ಚ್‌, ಎಪ್ರಿಲ್‌, ಮೇ ತಿಂಗಳ ಕರಾಳ ದಿನಗಳನ್ನು ಇನ್ನೊಮ್ಮೆ ಆಹ್ವಾನಿಸಿದಂತಾಗುತ್ತದೆ.

ಅದಕ್ಕೆ ಅವಕಾಶ ಕೊಡಬಾರದು ಎಂದಿದ್ದರೆ ಅದು ಬರಿ ಸರಕಾರದ ಹೊಣೆಯಲ್ಲ; ಪ್ರತಿಯೊಬ್ಬ ನಾಗರಿಕನ ಹೊಣೆ.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.