ಕೋವಿಡ್ ಸೋಂಕು ಹೆಚ್ಚಳ: ಗುಜರಾತ್ ನ 4 ನಗರಗಳಲ್ಲಿ ಮಾ.31ರವರೆಗೆ ರಾತ್ರಿ ಕರ್ಫ್ಯೂ ಜಾರಿ
ಕೋವಿಡ್ ಟಾಸ್ಕ್ ಪೋರ್ಸ್ ನ ಕೋರ್ ಕಮಿಟಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
Team Udayavani, Mar 16, 2021, 2:35 PM IST
Representative Image
ಅಹಮದಾಬಾದ್:ಕೋವಿಡ್ 19 ಸೋಂಕು ಪ್ರಕರಣ ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ಮಾರ್ಚ್ 17ರಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಗುಜರಾತ್ ಸರ್ಕಾರ ಮಂಗಳವಾರ(ಮಾರ್ಚ್ 16) ನಿರ್ಧರಿಸಿದೆ.
ಗುಜರಾತ್ ನ ಪ್ರಮುಖ ನಗರಗಳಾದ ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್ ಕೋಟ್ ನಲ್ಲಿ ಮಾರ್ಚ್ 17ರಿಂದ 31ರವರೆಗೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ಮತ್ತೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ರಾತ್ರಿ 12ರಿಂದ ಬೆಳಗ್ಗೆ 6ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿತ್ತು.
ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಕೋವಿಡ್ ಟಾಸ್ಕ್ ಪೋರ್ಸ್ ನ ಕೋರ್ ಕಮಿಟಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಈ ನಿರ್ಬಂಧ ಮಾರ್ಚ್ 31ರವರೆಗೆ ಮುಂದುರಿಯಲಿದೆ. ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಜನರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ರೂಪಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.