ಸಿಎಂ ಆಗಮನ : ಮಸ್ಕಿಯಲ್ಲಿ ಬಿಜೆಪಿಗೆ ಚೈತನ್ಯ


Team Udayavani, Mar 16, 2021, 7:26 PM IST

,ಕಜಹಗ್ದಜಹಗ್ದ

ಮಸ್ಕಿ: ಉಪಚುನಾವಣೆ ಘೋಷಣೆಗೂ ಮುನ್ನವೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಸ್ಕಿಗೆ ಆಗಮಿಸುವುದು ಖಚಿತವಾಗಿದೆ. ಸಿಎಂ ಪ್ರವಾಸ ಕುರಿತು ತಾತ್ಕಾಲಿಕ ಪಟ್ಟಿ ಹೊರ ಬೀಳುತ್ತಿದ್ದಂತೆಯೇ ಮಸ್ಕಿ ಮಂಡಲ ಬಿಜೆಪಿಯಲ್ಲಿ ಚೈತನ್ಯ ಮೂಡಿದೆ. ಸಿಎಂ ಕಾರ್ಯಕ್ರಮಕ್ಕೆ ಜನಸೇರಿಸಲು ಈಗಿನಿಂದಲೇ ಕಸರತ್ತು ನಡೆಸಲಾಗುತ್ತಿದೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಪರ ಪ್ರಚಾರ ಮತ್ತು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕಾಗಿ ಮಾ.20ರಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಮಸ್ಕಿ ಪಟ್ಟಣಕ್ಕೆ ಆಗಮಿಸುವುದು ಖಚಿತವಾಗಿದೆ.

ಅಂದು ಪ್ರತ್ಯೇಕ ಎರಡು ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆದಿದೆ. ಜಿಲ್ಲಾಡಳಿತ ವತಿಯಿಂದ ಒಂದು ಸರಕಾರಿ ಕಾರ್ಯಕ್ರಮ. ಪಕ್ಷ ಸೇರ್ಪಡೆ, ಬೃಹತ್‌ ಶಕ್ತಿ ಪ್ರದರ್ಶನಕ್ಕಾಗಿ ಬಿಜೆಪಿ ವತಿಯಿಂದ ಮತ್ತೂಂದು ಖಾಸಗಿ ಕಾರ್ಯಕ್ರಮ ಆಯೋಜನೆಗೆ ಪ್ರತ್ಯೇಕ ಸ್ಥಳಗಳಲ್ಲಿ ಸಿದ್ಧತೆ ನಡೆದಿದೆ.

 ಏಲ್ಲೆಲ್ಲಿ?: ಮಸ್ಕಿ ಪಟ್ಟಣದ ಹೃದಯ ಭಾಗ ಶ್ರೀಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾ.20ರಂದು ಮಧ್ಯಾಹ್ನ ಸರಕಾರಿ ವಿವಿಧ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ, ಲೋಕಾರ್ಪಣೆ ಬಳಿಕ ಇಲ್ಲಿ ಬಹಿರಂಗ ಕಾರ್ಯಕ್ರಮ ನಡೆಯಲಿದೆ. ಅಂದಾಜು 1 ಸಾವಿರ ಜನರಿಗೆ ಇಲ್ಲಿ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಸಂಜೆ 6ಗಂಟೆಗೆ ಪೊಲೀಸ್‌ ಠಾಣೆ ಪಕ್ಕದ ಬಯಲು ಪ್ರದೇಶದಲ್ಲಿ ಬೃಹತ್‌ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಯಲು ವೇದಿಕೆ ನಿರ್ಮಾಣ ಮಾಡಿ ಇಲ್ಲಿಯೇ ಬಿಜೆಪಿಗೆ ಸೇರ್ಪಡೆ, ಚುನಾವಣೆ ಪ್ರಚಾರ ಭಾಷಣ ನಡೆಯಲಿದೆ. ಈಗಿನಿಂದಲೇ ಸಂಚಾರ: ಮಾ.20ರಂದು ಸಿಎಂ ಕಾರ್ಯಕ್ರಮ ನಿಗದಿ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಜನರನ್ನು ಸೇರಿಸಲು ಈಗಿನಿಂದಲೇ ಪ್ರಯತ್ನ ನಡೆದಿವೆ. ಸ್ವತಃ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಮತ್ತು ಅವರ ಪುತ್ರರು ಹಾಗೂ ಸಂಬಂ ಧಿಗಳೇ ಅಖಾಡಕ್ಕೆ ಇಳಿದಿದ್ದಾರೆ.

ಜಿಲ್ಲಾ ಪಂಚಾಯಿತಿವಾರು ಉಸ್ತುವಾರಿ ಹೊತ್ತು ಈಗಿನಿಂದಲೇ ಪ್ರಚಾರಕ್ಕೆ ಇಳಿದಿದ್ದಾರೆ. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ನೇತೃತ್ವದಲ್ಲಿ ತಿಡಿಗೋಳ, ತುರುವಿಹಾಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದರೆ, ಅವರ ಪುತ್ರ ಪ್ರಸನ್ನ ಪಾಟೀಲ್‌ ಸಂತೆಕಲ್ಲೂರು ಜಿಪಂ ಕ್ಷೇತ್ರ, ಮತ್ತೂಬ್ಬ ಪುತ್ರ ಚೇತನ ಪಾಟೀಲ್‌ ತೋರಣದಿನ್ನಿ ಭಾಗ ಹಾಗೂ ಅವರ ಅಳಿಯ ರವಿಗೌಡ ಪಾಟೀಲ್‌ ನೇತೃತ್ವದಲ್ಲಿ ಬಳಗಾನೂರು ಜಿಪಂ ವ್ಯಾಪ್ತಿಯಲ್ಲಿ ಸಂಚರಿಸಿ ಪ್ರಚಾರ ನಡೆಸುತ್ತಿದ್ದಾರೆ. ಆಯಾ ಭಾಗದ ಬಿಜೆಪಿ ಮುಖಂಡರು ಇವರಿಗೆ ಸಾಥ್‌ ನೀಡಿದ್ದು, ಮಾ.20ರಂದು ನಡೆಯುವ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.