ತನಿಖೆ ಬಳಿಕ ಸಿಡಿ ನಿರ್ಮಾಪಕ, ನಟ, ನಿರ್ದೇಶಕ ಬಯಲು: ರವಿ
Team Udayavani, Mar 16, 2021, 8:16 PM IST
ಚಿಕ್ಕಮಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಂತರ ಇದರ ಹಿಂದೆ ಯಾರ್ಯಾರು ಇದ್ದಾರೆ, ಪ್ರೊಡ್ನೂಸರ್, ಡೈರೆಕ್ಟರ್, ಆ್ಯಕ್ಟರ್ ಯಾರೆಂಬುದು ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ ಹೆಸರು ಏಕೆ ಥಳಕು ಹಾಕಿಕೊಂಡಿದೆಯೋ ಗೊತ್ತಿಲ್ಲ, ವಿಚಾರಣೆ ನಂತರ ಎಲ್ಲವೂ ತಿಳಿಯಲಿದೆ. ಸಿಡಿ ಪ್ರಕರಣ ರಾಜ್ಯ ರಾಜಕಾರಣಕ್ಕೆ ಗೌರವ ತರುವಂತಹ ವಿಷಯವಲ್ಲ, ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೆಯುತ್ತಿತ್ತು.
ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೆಯುತ್ತಿದೆ. ಮೌಲ್ಯಧಾರಿತವೋ ಅಥವಾ ಸಿಡಿ ಆಧಾರಿತ ರಾಜಕಾರಣ ಬೇಕೋ ಎಂದು ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವರು ಪರಿಶುದ್ಧವಾಗಿ ರಾಜಕಾರಣದ ಬಗ್ಗೆ ಆಲೋಚನೆ ಮಾಡಬೇಕು. ಜನಲಜ್ಜೆ ಮತ್ತು ಮನಲಜ್ಜೆ ಇರಬೇಕು. ನಮಗೆ ನಾವೇ ಪರಿಮಿತಿ ಹಾಕಿಕೊಳ್ಳಬೇಕು.
ತಮಿಳುನಾಡು ಚುನಾವಣೆಯಲ್ಲಿ 234 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. ಉಳಿದ ಕ್ಷೇತ್ರಗಳಿಗೆ ಎಐಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ಸ್ಪರ್ಧೆ ನಡೆಸಲಿದೆ. ಎಐಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ಅಧಿ ಕಾರಕ್ಕೆ ಬರುವುದು ಖಚಿತ. ಬಿಜೆಪಿ ಸ್ಪರ್ಧಿಸಿರುವ 20 ಸ್ಥಾನಗಳಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಮಾಜಿ ಐಪಿಎಸ್ ಅ ಧಿಕಾರಿ ಅಣ್ಣಾಮಲೈ ಅವರಿಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಅವರು ಗೆಲುವು ಸಾಧಿ ಸಿ ತಮಿಳುನಾಡಿಗೆ ಒಳ್ಳೆಯ ನಾಯಕತ್ವ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.