ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ
ಬೆಂಗಳೂರಿನಿಂದ ಜೈಪುರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಣಿಯೊಬ್ಬರು ಪ್ರಯಾಣಿಸಿದ್ದಾರೆ
Team Udayavani, Mar 17, 2021, 1:24 PM IST
ಜೈಪುರ : ಕೆಲವೊಂದು ಮಕ್ಕಳು ವಿಶೇಷ ಸಮಯದಲ್ಲಿ ಜನಿಸುತ್ತವೆ. ಇಂತಹದ್ದೇ ಒಂದು ಸಂದರ್ಭಕ್ಕೆ ಸಾಕ್ಷಿಯಾಯಿತು ಇಂಡಿಗೋ ವಿಮಾನ.
ಬೆಂಗಳೂರಿನಿಂದ ಜೈಪುರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಣಿಯೊಬ್ಬರು ಪ್ರಯಾಣಿಸಿದ್ದಾರೆ. ಮಾರ್ಗಮಧ್ಯೆ ಆ ಮಹಿಳೆಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ವಿಮಾನ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಅದೃಷ್ಟವೆಂಬಂತೆ ಅದೇ ವಿಮಾನದಲ್ಲಿ ವೈದ್ಯರೊಬ್ಬರು ಇದ್ದು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಇಂಡಿಗೋ ಏರ್ ಲೈನ್ಸ್ ಖಚಿತ ಪಡಿಸಿದೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಜೈಪುರಕ್ಕೆ ಹೋಗುತ್ತಿದ್ದ 8ಇ 469 ವಿಮಾನದಲ್ಲಿ ಘಟನೆ ನಡೆದಿದೆ. ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ವೈದ್ಯೆ ಡಾ.ಸುಬಹನ ಮತ್ತು ವಿಮಾನ ಸಿಬ್ಬಂದಿ ಧಾವಿಸಿ ಬಂದು ಸಹಾಯ ಮಾಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಜೈಪುರ ವಿಮಾನ ನಿಲ್ದಾಣಕ್ಕೆ ಮಾಹಿತಿ ತಿಳಿಸಿದ್ದು, ವಿಮಾನ ಲ್ಯಾಂಡ್ ಆಗುವಷ್ಟರಲ್ಲಿ ವೈದ್ಯರು ಮತ್ತು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಸದ್ಯ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ.
ತುರ್ತು ಸ್ಥಿತಿಯಲ್ಲಿ ಸಹಾಯ ಮಾಡಿವ ವೈದ್ಯೆ ಸುಬಹನಗೆ ಇಂಡಿಗೋ ಸಂಸ್ಥೆಯು ಗೌರವಿಸಿದ್ದು, ಉಡುಗೊರೆ ನೀಡಿದೆ.
ಈ ಹಿಂದೆ ಅಕ್ಟೋಬರ್ 2020ರಲ್ಲಿ ದೆಹಲಿ-ಬೆಂಗಳೂರು ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.