ಡಿನೋಟಿಫಿಕೇಷನ್ ಆರೋಪ ಪ್ರಕರಣ: ಬಿಎಸ್‌ವೈಗೆ ಸಂಕಷ್ಟ?
Team Udayavani, Mar 17, 2021, 10:10 PM IST
ಬೆಂಗಳೂರು: ನಗರದ ಹೂವಿನಾಯಕನಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣ ಸಂಬಂಧ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್ ಪ್ರಕಾರ ಮುಂದಿನ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣದಿಂದ ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ಅವರನ್ನು ಕೈಬಿಟ್ಟು ಲೋಕಾಯುಕ್ತ ಕೋರ್ಟ್ ಹೊರಡಿಸಿದ್ದ ಆದೇಶ ರದ್ದುಕೋರಿ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ದೋಷಾರೋಪಪಟ್ಟಿ ಮೇರೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿತು.
ಇದನ್ನೂ ಓದಿ :ನವದೆಹಲಿ ಜಗತ್ತಿನ ನಂ.1 ಕಲುಷಿತ ರಾಜಧಾನಿ! ಸತತ 3ನೇ ಬಾರಿಗೆ ಈ ಅಪಖ್ಯಾತಿ
ಪ್ರಕರಣದ ಹಿನ್ನೆಲೆ:
ನಗರದ ಹೂವಿನಾಯಕನಳ್ಳಿ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಆಲಂಪಾಷಾ 2011ರ ಆ.20ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.
ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2012 ರ ಮೇ 21ರಂದು ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಕೆಲ ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ 2016ರ ಜುಲೈ 25ರಂದು ಆರೋಪಿಗಳ ವಿರುದ್ಧದ ಚಾರ್ಚ್‌ಶೀಟ್ ರದ್ದುಪಡಿಸಿತ್ತು.
ಇದನ್ನು ಪ್ರಶ್ನಿಸಿ ದೂರುದಾರ ಆಲಂಪಾಷಾ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.