ಲೈಂಗಿಕ ದೌರ್ಜನ್ಯ: ಅಪರಾಧಿಗೆ 26 ದಿನಗಳಲ್ಲಿ ಮರಣದಂಡನೆ ವಿಧಿಸಿದ ನ್ಯಾಯಾಲಯ
Team Udayavani, Mar 18, 2021, 6:45 PM IST
ನವದೆಹಲಿ: 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಕೇವಲ 26 ದಿನಗಳ ಬಳಿಕ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ವಿಶೇಷ POCSO ನ್ಯಾಯಾಲಯವು ಅಪರಾಧಿಗೆ ಮರಣದಂಡನೆಯನ್ನು ವಿಧಿಸಿದೆ.
ಘಟನೆಯ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸರು ಕಳೆದ ಫ್ರೆಬ್ರವರಿ 19 ರಂದು ತನ್ನ ಮನೆಯ ಬಳಿಯ ಹೊಲವೊಂದರಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಯ ಮೇಲೆ 21 ವರ್ಷ ವಯಸ್ಸಿನ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಘಟನೆ ನಡೆದ ಬಳಿಕ ಬಾಲಕಿಯ ಜೊತೆಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕೆಯ ಪೋಷಕರ ಬಳಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಬಾಲಕಿಯ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆ ನಿರ್ಜನ ಪ್ರದೇಶದಲ್ಲಿ ಸಿಕ್ಕಿದ್ದಳು ಎಂದಿದ್ದಾರೆ.
ಆ ಬಳಿಕ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಸತತ 5 ಘಂಟೆಗಳ ನಿರಂತರ ಕಾರ್ಯಚರಣೆಯ ಬಳಿಕ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಬಸವ ಕಲ್ಯಾಣ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್
ಕೋರ್ಟ್ ಆದೇಶದ ಕುರಿತಾಗಿ ಮಾಹಿತಿ ನೀಡಿರುವ ಪ್ರಕರಣದ ತನಿಖಾ ಅಧಿಕಾರಿ ಸುರೇಶ್ ಶರ್ಮಾ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿರುವ ನ್ಯಾಯಾಲಯವು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ POCSO ಕಾಯ್ದೆಯ ಅಡಿಯಲ್ಲಿ ಅಪರಾಧಿಗೆ ಮರಣದಂಡನೆಯನ್ನು ವಿಧಿಸಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸ್ ಇಲಾಖೆಯನ್ನು ಶ್ಲಾಘಿಸಿರುವ ನ್ಯಾಯಾಲಯವು ಇದು ಯಾವುದೇ ಪ್ರಕರಣಗಳನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಮಾದರಿ ತನಿಖೆಯಾಗಿದ್ದು, ಈ ತನಿಖೆಯಲ್ಲಿ ಇಲಾಖೆಯು ವೈಜ್ಞಾನಿಕ, ತಂತ್ರಜ್ಞಾನ ಹಾಗೂ ಸಾಂದರ್ಭಿಕ ಆದಾರಗಳನ್ನು ಕಲೆಹಾಕಿರುವುದಾಗಿ ತಿಳಿಸಿದ್ದಾರೆ.
ಈ ಕುರಿತಾಗಿ ತಮ್ಮ ಟ್ವೀಟ್ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆ ನಡೆದ ಕೇವಲ ಒಂಭತ್ತು ದಿನದ ಒಳಗೆ ಪೊಲೀಸರು ಜಾರ್ಜ್ ಶೀಟ್ ಹಾಕಿದ್ದು, ಕೇವಲ 26 ದಿನಗಳಲ್ಲಿ ಕೋರ್ಟ್ ವಿಚಾರಣೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸಿದೆ.ಇದು ಪೊಲೀಸ್ ಇಲಾಖೆ, ನ್ಯಾಯಾಂಗ ವ್ಯವಸ್ಥೆ ಕಾರ್ಯ ಕ್ಷಮತೆ ಹಾಗೂ ಸರ್ಕಾರದ ಬದ್ದತೆಯನ್ನು ಎತ್ತಿಹಿಡಿಯುವ ಅಂಶವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.