ಸದನದಲ್ಲಿ ಸಿ.ಡಿ. ಪ್ರಕರಣ ಪ್ರಸ್ತಾಪಿಸಲು ಅವಕಾಶ ಕೋರಿದ ಕಾಂಗ್ರೆಸ್
Team Udayavani, Mar 18, 2021, 8:15 PM IST
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ.
ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ ಹೋಗಿ 67 ಮಾಧ್ಯಮಗಳು ಹಾಗೂ ಇತರರ ವಿರುದ್ಧ ನಿರ್ಬಂಧಕಾಜ್ಞೆಯನ್ನು ತಂದಿದ್ದು, ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಇದರ ಬಗ್ಗೆ ಎಫ್ಐಆರ್ ದಾಖಲಾಗುವ ಮೊದಲೇ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಲಾಗಿದೆ.
ಅನಂತರ ಮಾಜಿ ಸಚಿವರು ವ್ಯಕ್ತಿಯೊಬ್ಬರ ಮೂಲಕ ಕಳುಹಿಸಿದ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಸಾಮಾಜಿಕ ಕಾರ್ಯಕರ್ತನೆಂಬ ಹೆಸರಿನಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರು ಹಾಗೂ ಸಂತ್ರಸ್ತೆಯೆಂದು ಹೇಳಿ ಗೃಹ ಸಚಿವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿಕೊಂಡ ಮನವಿಗಳನ್ನು ಆಧರಿಸಿ ಯಾವುದೇ ಎಫ್ಐಆರ್ ದಾಖಲಾಗಿಲ್ಲ.
ಇದನ್ನೂ ಓದಿ : ಸಿಂಧನೂರು ನಗರಸಭೆಯಲ್ಲಿ ಬಿಲ್ ಕಲೆಕ್ಟರ್ ಕೈ ಚಳಕ ಬಯಲು
ಸಂತ್ರಸ್ತೆಯ ಪೋಷಕರು ಸಹ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಮಹಿಳಾ ಆಯೋಗವು ಸಂತ್ರಸ್ತೆಗೆ ರಕ್ಷಣೆ ನೀಡಲು ಆದೇಶಿಸಿದ್ದರೂ ಸಂತ್ರಸ್ತೆಯನ್ನು ಹುಡುಕಿ ರಕ್ಷಣೆ ನೀಡಿದಂತೆ ಕಾಣುತ್ತಿಲ್ಲ. ಎಸ್‌ಐಟಿಯ ಇದುವರೆಗಿನ ತನಿಖೆಯನ್ನು ನೋಡಿದರೆ ಸಿ.ಡಿ.ಪ್ರಚಾರವಾಗಲು ಕಾರಣಕರ್ತರು ಯಾರು ಎಂಬುದನ್ನು ಹುಡುಕುವ ಕಡೆಗೆ ತನಿಖೆ ಸಾಗುತ್ತಿದೆ ಎಂಬ ಅನುಮಾನ ಬರುತ್ತಿದೆ. ಸರಕಾರದ ವರ್ತನೆ ಪಾರದರ್ಶಕವಾಗಿಲ್ಲ ಮತ್ತು ನ್ಯಾಯಸಮ್ಮತವಾಗಿಲ್ಲ. ಸರಕಾರದ ನಿಲುವುಗಳ ವಿರುದ್ಧ ಮಾ. 19ರಂದು ಸದನದಲ್ಲಿ ಪ್ರಸ್ತಾವಿಸಲು ನಿಯಮ 60ರ ಮೇರೆಗೆ ನಿಲುವಳಿ ಸೂಚನೆ ಕೊಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಯನ್ನು ಸ್ಪೀಕರ್, ಸದನದ ನಾಯಕರಾದ ಮುಖ್ಯಮಂತ್ರಿಯವರು ಹಾಗೂ ಸಂಬಂಧಪಟ್ಟ ಸಚಿವರಿಗೂ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.