ಶಿಕ್ಷಣತಜ್ಞ ಪ್ರೊ.ಮಳಲಿ ವಸಂತಕುಮಾರ್ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ
Team Udayavani, Mar 18, 2021, 10:40 PM IST
ಬೆಂಗಳೂರು: ಕನ್ನಡದ ಹಿರಿಯ ಕವಿ, ವಿಮರ್ಶಕ , ಶಿಕ್ಷಣತಜ್ಞ ಪ್ರೊ.ಮಳಲಿ ವಸಂತಕುಮಾರ್ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮಳಲಿ ವಸಂತಕುಮಾರ್ ಅವರು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಕೊಟ್ಟವರು, ಕುವೆಂಪು ಹಾಗೂ ಕನಕದಾಸರ ಬಗ್ಗೆ ಅವರು ರಚಿಸಿದ ಕೃತಿ ಸಾಹಿತ್ಯಾಸಕ್ತರ ವಿಶೇಷ ಗಮನ ಸೆಳೆದಿದೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿರುವ ಮಳಲಿ ವಸಂತಕುಮಾರ್,ನೆಲ-ಜಲ ,ಭಾಷೆ ಮತ್ತು ಸಂಸ್ಕೃತಿಯ ಪ್ರಶ್ನೆ ಬಂದಾಗ ದಿಟ್ಟವಾಗಿ ನಿಂತು ಹೋರಾಟ ಮಾಡಿದವರು.
ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿ ಅವರು ಅಪಾರ ಶಿಷ್ಯ ಸಂಪತ್ತನ್ನು ಹೊಂದಿದ್ದರು, ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಕೊಡುಗೆ ನಿಜಕ್ಕೂ ಗಮನಾರ್ಹ. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಸ್ಪೂರ್ತಿಯ ಸೆಲೆಯೊಂದನ್ನು ಕಳೆದುಕೊಂಡಂತಾಗಿದೆ, ಎಂದು ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.