ಕುಂದಾಪುರ : ಮೊಟ್ಟೆಯೊಡೆದು ಹೊರ ಬಂದ ಕಡಲಾಮೆಗಳು

Team Udayavani, Mar 19, 2021, 4:20 AM IST

ಕುಂದಾಪುರ : ಮೊಟ್ಟೆಯೊಡೆದು ಹೊರ ಬಂದ ಕಡಲಾಮೆಗಳು

ಕುಂದಾಪುರ: ಕಳೆದೆರಡು ತಿಂಗಳಿನಿಂದ ಕೋಡಿ ಲೈಟ್‌ ಹೌಸ್‌ ಸಮುದ್ರ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್ಯ ನಡೆಯುತ್ತಿದ್ದು ಬುಧವಾರ ರಾತ್ರಿ ಮೊಟ್ಟೆಗಳು ಒಡೆದು ಮರಿಗಳು ಹೊರಬರುವ ಮೂಲಕ ಎರಡು ತಿಂಗಳ ಶ್ರಮ ಸಾರ್ಥಕವಾಗಿದೆ.

ಜನವರಿಯಿಂದ ಮಾರ್ಚ್‌ ತನಕ ಕೋಡಿ ಲೈಟ್‌ ಹೌಸ್‌ ಬಳಿಯ ಕಡಲ ತೀರದಲ್ಲಿ 1 ಕಿ.ಮೀ. ವ್ಯಾಪ್ತಿಯಲ್ಲಿ 11 ಕಡೆ ಕಡಲಾಮೆಗಳು ತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ, ಎಫ್ಎಸ್‌ಎಲ್‌ ಇಂಡಿಯಾ, ರೀಫ್ ವಾಚ್‌, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಮೊದಲಾದ ಸಂಸ್ಥೆಗಳ ಗಮನಕ್ಕೆ ತಂದಿದ್ದು ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸಿ ಸಂರಕ್ಷಿಸಲಾಗಿತ್ತು. ಪ್ರತ್ಯೇಕವಾಗಿ ಸಾವಿರಾರು ಮೊಟ್ಟೆಗಳು ವಿವಿಧ ದಿನಗಳಲ್ಲಿ ಪತ್ತೆಯಾಗಿದ್ದು ಪತ್ತೆಯಾದ ದಿನವೇ ಪ್ರತ್ಯೇಕ ಹ್ಯಾಚರಿ ನಿರ್ಮಿಸಲಾಗುತ್ತಿತ್ತು.

ಬುಧವಾರ ರಾತ್ರಿ 2 ಹ್ಯಾಚರಿಗಳಿಂದ ಒಟ್ಟು 120 ಕಡಲಾಮೆ ಮರಿಗಳು ಮೊಟ್ಟೆಯೊಡೆದು ಹೊರ ಬಂದಿದ್ದು ನೈಸರ್ಗಿಕವಾಗಿ ಕಡಲು ಸೇರಲು ಅಧಿಕಾರಿಗಳು, ಸಂಸ್ಥೆಯವರು, ಸಾರ್ವಜನಿಕರು ಒಗ್ಗೂಡಿ ಅನುವು ಮಾಡಿಕೊಟ್ಟರು. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್‌ ರೆಡ್ಡಿ ಮಾರ್ಗದರ್ಶನದಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್‌ ಕುಲಾಲ್‌ ನೇತೃತ್ವದಲ್ಲಿ ಸಿಬಂದಿ ಹಾಗೂ ಎಫ್‌.ಎಸ್‌.ಎಲ್‌. ಇಂಡಿಯಾ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್, ರೀಫ್‌ ವಾಚ್‌ ಸಂಸ್ಥೆ ತಡರಾತ್ರಿ 9.30ರಿಂದ ಮುಂಜಾವ 4.30ರ ತನಕ ಸ್ಥಳದಲ್ಲಿ ಬೀಡುಬಿಟ್ಟಿದ್ದರು.

ಜ. 22ರಿಂದ ಮಾ. 3ರ ವರೆಗೂ ಮೊಟ್ಟೆ ಗಳು ಪತ್ತೆಯಾಗಿತ್ತು. ಈ ಪೈಕಿ ಜ.24ಕ್ಕೆ ನಿರ್ಮಿಸಿದ ಹ್ಯಾಚರಿಯಲ್ಲಿ 19 ಮರಿಗಳು ಹಾಗೂ ಜ. 26ರ ಹ್ಯಾಚರಿಯಿಂದ 101 ಮರಿ ಹೊರಕ್ಕೆ ಬಂದು ಕಡಲು ಸೇರಿದ್ದು ಇನ್ನು ಹಂತಹಂತವಾಗಿ ಮೊಟ್ಟೆಯೊಡೆದು ಮರಿಗಳು ಹೊರಬರುವ ನಿರೀಕ್ಷೆ ಇದೆ.

ಸಾಮಾನ್ಯವಾಗಿ ಕಡಲಾಮೆಗಳು ಮೊಟ್ಟೆಯಿಟ್ಟ 48-60 ದಿನಗಳಲ್ಲಿ ಮರಿಗಳು ಹೊರಬರುತ್ತವೆ. ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ, ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 2 ತಿಂಗಳಿನಿಂದ ಮುತುವರ್ಜಿ ವಹಿಸಿದ್ದು ಮಾತ್ರವಲ್ಲದೇ ಮರಿಯೊಡೆಯುವ ದಿನಾಂಕ ಸಮೀಪ ವಾದ ಕಾರಣ ಕಳೆದೊಂದು ವಾರದಿಂದ ರಾತ್ರಿ ಕಾಯುತ್ತಿದ್ದ ಅರಣ್ಯ ಇಲಾಖೆ, ವಿವಿಧ ಸಂಸ್ಥೆ, ಸ್ಥಳೀಯರ ಕಾರ್ಯ ಸಾರ್ವ ಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.