70 ವರ್ಷಗಳಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದೀರಿ ಈಗ ನಮಗೆ 5 ವರ್ಷ ಅಧಿಕಾರ ಕೊಡಿ; ಪ್ರಧಾನಿ
ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಕನಸುಗಳು ಕಳೆದ 50 ರಿಂದ 55 ವರ್ಷಗಳಿಂದ ಸ್ಥಗಿತಗೊಂಡಿವೆ.
Team Udayavani, Mar 20, 2021, 1:53 PM IST
ಕೋಲ್ಕತ್ತ:ಶುಕ್ರವಾರ ರಾತ್ರಿ ವಾಟ್ಸಪ್, ಫೇಸ್ ಬುಕ್ ಹಾಗೂ ಇನ್‍ಸ್ಟಾಗ್ರಾಂ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದನ್ನು ಉದಾಹರಣೆಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನ ಟೀಕಿಸಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು (ಮಾ.20) ಪಶ್ಚಿಮ ಬಂಗಾಳದ ಖರಗಪುರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರಚಾರ ಜಾಥಾದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ಸರ್ಕಾರಗಳ ವಿರುದ್ಧ ಹರಿಹಾಯ್ದರು.
ನಿನ್ನೆ ( ಶುಕ್ರವಾರ) ವಾಟ್ಸಪ್, ಇನ್‍ಸ್ಟಾಗ್ರಾಂ ಹಾಗೂ ಫೇಸ್‍ಬುಕ್ 50-55 ನಿಮಿಷಗಳ ವರೆಗೆ ಸ್ಥಗಿತಗೊಂಡಿದ್ದವು. ಇದರಿಂದ ಜನರು ಚಿಂತೆಗೆ ಒಳಗಾಗಿದ್ದರು. ಆದರೆ, ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಜನರ ಕನಸುಗಳು ಕಳೆದ 50 ರಿಂದ 55 ವರ್ಷಗಳಿಂದ ಸ್ಥಗಿತಗೊಂಡಿವೆ. ಮೊದಲು ಕಾಂಗ್ರೆಸ್ ನಂತರ ಎಡಪಕ್ಷಗಳು ಈಗ ಟಿಎಂಸಿ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯನ್ನ ಮರೆಮಾಚಿದ್ದಾರೆ ಎಂದು ಮೋದಿ ಆರೋಪಿಸಿದರು.
ಕಾಂಗ್ರೆಸ್ ಪಕ್ಷದಿಂದಾದ ನಷ್ಟವನ್ನು ನೀವು ನೋಡಿದ್ದೀರಿ. ಟಿಎಂಸಿ ನಿಮ್ಮ ಕನಸುಗಳನ್ನು ಹಾಳು ಮಾಡುತ್ತಿದೆ. ಕಳೆದ 70 ವರ್ಷಗಳಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದೀರಿ. ಆದರೆ, ನಮಗೆ 5 ವರ್ಷ ನೀಡಿ. ಕಳೆದ 70 ವರ್ಷಗಳಿಂದ ಉಂಟಾದ ನಷ್ಟವನ್ನ ಪಶ್ಚಿಮ ಬಂಗಾಳದಲ್ಲಿ ಇಲ್ಲವಾಗಿಸುತ್ತೇವೆ. ನಿಮಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.