ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಅನುದಾನ

ರಾಜ್ಯ ಮೂಲ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್‌ ಮೋಹನ್‌ ಭರವಸೆ

Team Udayavani, Mar 20, 2021, 5:19 PM IST

Airport

ಹಾಸನ: ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತುರ್ತು ಕಾಮಗಾರಿಗಳಿಗೆ ಬೇಕಾಗಿರುವ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಇಂಧನ ಮತ್ತು ಮೂಲಭೂತ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್‌ ಮೋಹನ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ತ್ವರಿತವಾಗಿ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭವಾಗಬೇಕು. ವಿಮಾನ ನಿಲ್ದಾಣ ನಿರ್ಮಾಣ ಪ್ರದೇಶದಲ್ಲಿ ಹಾದು ಹೋಗಿರುವ ಹೈಟೆನ್ಷನ್‌ ವಿದ್ಯುತ್‌ ಮಾರ್ಗಗಳ ಸ್ಥಳಾಂತರ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಈ ವೇಳೆ ಮಾತನಾಡಿದ ಮೂಲ ಸೌಕರ್ಯ ಇಲಾಖೆಯ ಸಹಾಯಕ ಕಾರ್ಯದರ್ಶಿ ವಿ.ಚೈತ್ರಾ, ಹಾಲಿ 9 ಕಿ.ಮೀ. ವ್ಯಾಪ್ತಿಯಲ್ಲಿರುವ 35 ಮೀಟರ್‌ ವಿಸ್ತೀರ್ಣದ ಹೈಟೆನÒನ್‌ ತಂತಿ ಹಾಗೂ ಟವರ್‌ಗಳನ್ನು 17 ಕಿ.ಮೀ. ದೂರಕ್ಕೆ ಸ್ಥಳಾಂತರಿಸಬೇಕಾಗಿದೆ. ಅದಕ್ಕೆ ತಗಲುವ ವೆಚ್ಚವನ್ನು ಮೂಲ ಸೌಕರ್ಯ ಇಲಾಖೆಯಿಂದ ಒದಗಿಸಿ ಕೊಡಬೇಕಾಗಿದ್ದು, ಭೂ ಪರಿಹಾರ ಧನವನ್ನು ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಉದ್ದೇಶಿತ ಪ್ರದೇಶದ ವಿದ್ಯುತ್‌ ಮಾರ್ಗವನ್ನು ಸ್ಥಳಾಂತರಿಸಲು 7.3 ಕೋಟಿ ರೂ. ಭೂ ಪರಿಹಾರಧನ ಸೇರಿ 19.7 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಒಟ್ಟು 34 ಎಕರೆ ಭೂ ಪ್ರದೇಶಕ್ಕೆ ಪರಿಹಾರ ನೀಡಬೇಕಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಡಿಕೊಡುವಂತೆ ಕೋರಲಾಗಿದೆ. ವಿದ್ಯುತ್‌ ಮಾರ್ಗ ಸ್ಥಳಾಂತರದ ಪರಿಹಾರ ನೀಡಿದ ನಂತರ ರೈತರು ತಮ್ಮ ಜಮೀನನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್‌, ಕೆಪಿಟಿಸಿಎಲ್‌ ಮುಖ್ಯ ಎಂಜಿನಿಯರ್‌ ನಾಗಾರ್ಜುನ್‌, ಸೂಪರ್‌ಡೆಂಟ್‌ ಎಂಜಿನಿಯರ್‌ ಉಮೇಶ್‌, ಕಾರ್ಯನಿರ್ವಾಹಕ ಎಂಜಿನಿಯರ್‌ ಲೋಕೇಶ್‌, ಹಾಸನ ತಹಶೀಲ್ದಾರ್‌ ಶಿವಶಂಕರಪ್ಪ ಮತ್ತಿತರರು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.