ಕೋವಿಡ್‌ 2ನೇ ಅಲೆ ಭೀತಿ: ಕಟ್ಟೆಚ್ಚರಕ್ಕೆ ಸೂಚನೆ

ಕಡ್ಡಾಯವಾಗಿ ಕ್ವಾರಂಟೈನ್‌ ಕೊಠಡಿಯಲ್ಲಿ ಇರಿಸಬೇಕು ಎಂದು ಸೂಚಿಸಿದರು.

Team Udayavani, Mar 20, 2021, 6:36 PM IST

DC-yad

ಯಾದಗಿರಿ: ಮಹಾರಾಷ್ಟ್ರದಲ್ಲಿ ಕೋವಿಡ್‌ ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ
ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕೋವಿಡ್‌-19 ಟಾಸ್ಕ್ ಫೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಕೋವಿಡ್‌-19 ಸೋಂಕು ಹರಡುವಿಕೆ ತಡೆಗಟ್ಟುವುದು ಮತ್ತು ಕೋವಿಡ್‌
2ನೇ ಅಲೆಯ ಮುಂಜಾಗ್ರತ ಕ್ರಮ ಕೈಗೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ  ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ
ಪಾಲಿಸಿ, ಕೋವಿಡ್‌-19 ಹರಡುವಿಕೆ ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ಮಾ. 1ರಿಂದ 15ರವರೆಗೆ ಕೇವಲ 20 ಸಕ್ರಿಯ ಪ್ರಕರಣಗಳು ಮಾತ್ರ ಕಂಡುಬಂದಿದ್ದು, ಕಳೆದ ನಾಲ್ಕು ದಿನಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು
ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದ ಶಹಾಪುರ ತಾಲೂಕಿನ ಮುಡಬೂಳ, ಗುರುಮಠಕಲ್‌, ಯಾದಗಿರಿ ತಾಲೂಕಿನ ಯರಗೋಳ ಗ್ರಾಮಗಳಲ್ಲಿ
ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್‌
ನೆಗೆಟಿವ್‌ ವರದಿ ತೋರಿಸಬೇಕು ಎಂದು ತಿಳಿಸಿದರು.

ಮಹಾರಾಷ್ಟ್ರ ರಾಜ್ಯದಿಂದ ಬಸ್‌, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್‌ಟಿಪಿಸಿಆರ್‌ ಪರೀಕ್ಷೆ ನೆಗೆಟಿವ್‌ ವರದಿಯೊಂದಿಗೆ ಆಗಮಿಸತಕ್ಕದ್ದು. ಆರ್‌ಟಿಪಿಸಿಆರ್‌ ಪರೀಕ್ಷೆ ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್‌ ಟಿಪಿಸಿಆರ್‌ ನೆಗೆಟಿವ್‌ ಫಲಿತಾಂಶ ಬರುವವರೆಗೂ ಕಡ್ಡಾಯವಾಗಿ ಕ್ವಾರಂಟೈನ್‌ ಕೊಠಡಿಯಲ್ಲಿ ಇರಿಸಬೇಕು ಎಂದು ಸೂಚಿಸಿದರು. ಆರ್‌ಟಿಪಿಸಿಆರ್‌ ನೆಗೆಟಿವ್‌
ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್‌ಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು.

ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್‌ ಸ್ಯಾನಿಟೈಜರ್‌ನ್ನು ಕಡ್ಡಾಯವಾಗಿ ಬಳಕೆ
ಮಾಡಿ ಕೊರೊನಾದಿಂದ ಜಾಗೃತಿ ವಹಿಸಬೇಕೆಂದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್‌ ಸೋನಾವಣೆ,
ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಇಂದುಮತಿ ಕಾಮಶೆಟ್ಟಿ, ಡಾ| ಅನ್ವರ್‌,
ಡಾ| ಲಕ್ಷ್ಮೀಕಾಂತ್‌ ಸೇರಿದಂತೆ ಇತರರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.