ಹೊಸ ಕಾಂಕ್ರೀಟ್‌ ರಸ್ತೆಗೆ ಕತ್ತರಿ; ಸಾರ್ವಜನಿಕರ ತೆರಿಗೆ ದುಡ್ಡು ಪೋಲು !

ಕಾಮಗಾರಿ ವೇಳೆ ನಿರ್ಲಕ್ಷ್ಯ ತೋರಿದ ಎಂಜಿನಿಯರ್‌ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

Team Udayavani, Mar 21, 2021, 3:00 AM IST

ಹೊಸ ಕಾಂಕ್ರೀಟ್‌ ರಸ್ತೆಗೆ ಕತ್ತರಿ; ಸಾರ್ವಜನಿಕರ ತೆರಿಗೆ ದುಡ್ಡು ಪೋಲು !

ಮಹಾನಗರ: ಸ್ಮಾರ್ಟ್‌ ಸಿಟಿಯಾಗಿ ಮುಂದುವರಿಯುತ್ತಿರುವ ಮಂಗಳೂರು ನಗರದ ಸೌಂದರ್ಯಕ್ಕೆ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಧಕ್ಕೆ ಉಂಟಾಗುತ್ತಿದೆ. ನಗರದ ಅಲ್ಲಲ್ಲಿ ಹೊಸ ಕಾಂಕ್ರೀಟ್‌ ರಸ್ತೆಗಳನ್ನು ವಿವಿಧ ಕಾಮಗಾರಿ ಉದ್ದೇಶಕ್ಕಾಗಿ ಅಗೆಯಲಾಗುತ್ತಿದ್ದು, ಅಸಮ ರ್ಪಕ ಕಾಮಗಾರಿ ನಡೆಸಿ, ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿರುವ ಎಂಜಿನಿಯರ್‌ ವಿರುದ್ಧ ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ನಗರದ ಕೆಲವೊಂದು ಕಡೆಗಳಲ್ಲಿ ಇತ್ತೀಚೆಗೆ ಯಷ್ಟೇ ಉದ್ಘಾಟನೆಗೊಂಡ ಕಾಂಕ್ರೀಟ್‌ ರಸ್ತೆಗಳನ್ನು ಮತ್ತೆ ಅಗೆಯುತ್ತಿದ್ದಾರೆ. ನಗರದ ಪಿವಿಎಸ್‌ನಿಂದ ಬಂಟ್ಸ್‌ಹಾಸ್ಟೆಲ್‌ವರೆಗೆ ರಸ್ತೆ ವಿಸ್ತರಣೆ ಕೆಲವು ಸಮಯಗಳ ಹಿಂದೆ ನಡೆದಿತ್ತು. ಈ ವೇಳೆ ವ್ಯವಸ್ಥಿತ ಚರಂಡಿ ವ್ಯವಸ್ಥೆ ಕೂಡ ನಿರ್ಮಾಣವಾಗಿತ್ತು. ಇದೀಗ ಮತ್ತೆ ಕಾಂಕ್ರೀಟ್‌ ರಸ್ತೆಗೆ ಕತ್ತರಿ ಬಿದ್ದಿದೆ. ಪಿವಿಎಸ್‌ ಬಳಿಯ ಕುದು¾ಲ್‌ ರಂಗರಾವ್‌ ಹೆಣ್ಣುಮಕ್ಕಳ ವಸತಿ ನಿಲಯ ಪ್ರದೇಶದಲ್ಲಿ ಕಾಂಕ್ರೀಟ್‌ ರಸ್ತೆ ಅಗೆದು  ಹಾಕಲಾಗಿದೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆಯಿಂದಾಗಿ ಈ ಭಾಗದಲ್ಲಿ ತೊಂದರೆ ಉಂಟಾಗಿತ್ತು. ಇದೇ ಕಾರಣಕ್ಕೆ ಮತ್ತೆ ರಸ್ತೆಗೆ ಕತ್ತರಿ ಹಾಕಿದ್ದು, ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ.

ಕೆಲವು ದಿನಗಳ ಹಿಂದೆ ನಗರದ ರಥಬೀದಿಯಿಂದ ಶರವು ಕ್ಷೇತ್ರ ಸಂಪರ್ಕ ರಸ್ತೆಯನ್ನೂ ಇದೇ ರೀತಿ ಅಗೆಯಲಾಗಿತ್ತು. ಈ ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಿ ಒಂದು ತಿಂಗಳಾಗಿದ್ದು, ಎಂಜಿನಿ ಯರ್‌ ನಿರ್ಲಕ್ಷ್ಯದಿಂದಾಗಿ ಕಾಂಕ್ರೀಟ್‌ ತುಂಡುಗಳನ್ನು ಇದೇ ರಸ್ತೆಯಲ್ಲಿರುವ ಮ್ಯಾನ್‌ಹೋಲ್‌ಗೆ ಬೀಳಿಸಲಾಗಿತ್ತು. ಕಾಮಗಾರಿಯ ವೇಳೆ ಈ ವಿಚಾರ ಗಮನಕ್ಕೆ ಬರಲಿಲ್ಲ. ರಸ್ತೆ ಉದ್ಘಾಟನೆಗೊಂಡು ತಿಂಗಳಾದ ಬಳಿಕ ಈ ರಸ್ತೆಯಲ್ಲಿರುವ ಮ್ಯಾನ್‌ಹೋಲ್‌ನಲ್ಲಿ ಗಲೀಜು ನೀರು ಸರಾಗವಾಗಿ ಹರಿಯದೆ, ಮೇಲೆ ಚಿಮ್ಮುತ್ತಿತ್ತು. ಇದರಿಂದಾಗಿ ಈ ರಸ್ತೆಯ ಇಕ್ಕೆಲದಲ್ಲಿರುವ ಮಂದಿಗೆ ಸಮಸ್ಯೆ ಉಂಟಾಗುತ್ತಿತ್ತು. ಕಾಮಗಾರಿ ಉದ್ದೇಶದಿಂದ ಹೊಸ ಕಾಂಕ್ರೀಟ್‌ ರಸ್ತೆ ಅಗೆಯಲಾಗಿತ್ತು.

ಸಾಮಾಜಿಕ ಹೋರಾಟಗಾರ ಜಿ.ಕೆ. ಭಟ್‌ “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಮಹಾನಗರ ಪಾಲಿಕೆ ಎಂಜಿನಿಯರ್‌ಗಳ ನಿರ್ಲಕ್ಷ್ಯದಿಂದಾಗಿ ನಗರದ ಅನೇಕ ಕಡೆಗಳಲ್ಲಿ ಹೊಸ ಕಾಂಕ್ರೀಟ್‌ ರಸ್ತೆ ಅಗೆಯುವ ಕೆಲಸ ಆಗುತ್ತಿದೆ. ಪಿವಿಎಸ್‌- ಬಂಟ್ಸ್‌ಹಾಸ್ಟೆಲ್‌ ರಸ್ತೆಯಲ್ಲಿ ಕೆಲವು ಸಮಯದ ಹಿಂದೆ ರಸ್ತೆ ವಿಸ್ತರಣೆಗೊಳಿಸಿದ್ದು, ಇದೀಗ ಒಳಚರಂಡಿ ಸಮಸ್ಯೆಯಿಂದ ರಸ್ತೆ ಅಗೆಯಲಾಗುತ್ತಿದೆ. ಒಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಹಣವನ್ನು ಪೋಲು ಮಾಡಲಾಗುತ್ತಿದೆ’ ಎನ್ನುತ್ತಾರೆ.

ಒಂದೆಡೆ ಪಾಲಿಕೆ, ಸ್ಮಾರ್ಟ್‌ಸಿಟಿ ಕಾಮಗಾರಿ ಸಾಗುತ್ತಿದ್ದರೆ ಮತ್ತೂಂದೆಡೆ ಗೈಲ್‌ ಸಂಸ್ಥೆಯಿಂದ ಮನೆ ಮನೆಗೆ ಗ್ಯಾಸ್‌ ಸಂಪರ್ಕ ಕಾಮಗಾರಿ ಆರಂಭವಾಗಿದೆ. ಇದೇ ಉದ್ದೇಶಕ್ಕೆ ನಗರದ ಹಲವು ಕಡೆಗಳಲ್ಲಿ ರಸ್ತೆ ಅಗೆಯಲಾಗುತ್ತಿದೆ. ದೊಡ್ಡ ದೊಡ್ಡ ಯಂತ್ರದ ಮುಖೇನ ಕಾಮಗಾರಿ ಸಾಗುತ್ತಿದ್ದು, ಕೆಲವೆಡೆ ಕಾಂಕ್ರೀಟ್‌ ರಸ್ತೆ ಅಗೆದು ಕಾಮಗಾರಿಯನ್ನು ಅರ್ಧದಲ್ಲಿಯೇ ನಿಲ್ಲಿಸಲಾಗಿದೆ.

ನಾಲ್ಕು ಬಾರಿ ಕಾಂಕ್ರೀಟ್‌ ಅಗೆತ :

ನಗರದಲ್ಲಿ ಜೈಲು ರಸ್ತೆಯಿಂದ ಬಿಜೈಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಕೊಡಿಯಾಲ್‌ಗ‌ುತ್ತು ಕ್ರಾಸ್‌ ಬಳಿ ಕೆಲವು ತಿಂಗಳುಗಳಿಂದ ನಾಲ್ಕು ಬಾರಿ ಕಾಂಕ್ರೀಟ್‌ ರಸ್ತೆ ಅಗೆಯಲಾಗಿದೆ. ಒಳಚರಂಡಿಯಲ್ಲಿ ನೀರು ಸರಾಗವಾಗಿ ಹೋಗದ ಪರಿಣಾಮ ಮ್ಯಾನ್‌ಹೋಲ್‌ನಿಂದ ಮೇಲಕ್ಕೆ ನೀರು ಬಂದು ಸುತ್ತಮುತ್ತಲಿನ ಮನೆ ಮಂದಿಗೆ ತೊಂದರೆ ಉಂಟಾಗುತ್ತಿತ್ತು. ಆದರೂ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಪಾಲಿಕೆ ವಿಫಲ ವಾಗಿದ್ದು, ಸದ್ಯ ರಸ್ತೆ ಅಗೆದು ಮ್ಯಾನ್‌ಹೋಲ್‌ ಸರಿಪಡಿಸುವ ಕೆಲಸ ಆರಂಭವಾಗಿದೆ.

ನಗರದ ಅಲ್ಲಲ್ಲಿ ಕಾಂಕ್ರೀಟ್‌ ಅಗೆಯುವ ಕಾಮಗಾರಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ವಿಷಯಕ್ಕೆ ಸಂಬಂಧಿಸಿ ಈಗಾಗಲೇ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸೂಕ್ತ ಕಾರಣ ಕೇಳಲಾಗುವುದು. ಮತ್ತು ಎಚ್ಚರಿಕೆ ನೀಡಲಾಗುವುದು.  -ಪ್ರೇಮಾನಂದ ಶೆಟ್ಟಿ,  ಮನಪಾ ಮೇಯರ್‌

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

9

Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.