ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ : ಸಿಂಧು ಓಟ ಸೆಮಿಯಲ್ಲಿ ಅಂತ್ಯ
Team Udayavani, Mar 21, 2021, 6:40 AM IST
ಬರ್ಮಿಂಗ್‌ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಕೂಟದಲ್ಲಿ ಪಿ.ವಿ. ಸಿಂಧು ಅವರ ಓಟ ಸೆಮಿಫೈನಲ್‌ನಲ್ಲಿ ಅಂತ್ಯಗೊಂಡಿದೆ. ಶನಿವಾರದ ಮುಖಾಮುಖೀಯಲ್ಲಿ ಥಾಯ್ಲೆಂಡ್‌ನ ಪೊರ್ಣಪವೀ ಚೊಚುವಾಂಗ್ ವಿರುದ್ಧ ನಿರಾಶಾದಾಯಕ ಆಟವಾಡಿದ ಸಿಂಧು 17-21, 9-21 ನೇರ ಗೇಮ್‌ಗಳಿಂದ ಮುಗ್ಗರಿಸಿದರು. ಇದರಿಂದ ಈ ಪಂದ್ಯಾವಳಿಯಲ್ಲಿ ಮೊದಲ ಸಲ ಫೈನಲ್ ಪ್ರವೇಶಿಸುವ ಸಿಂಧು ಕನಸು ಭಗ್ನಗೊಂಡಿತು.
ಶುಕ್ರವಾರ ತಡರಾತ್ರಿ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ವಿಶ್ವದ 5ನೇ ಶ್ರೇಯಾಂಕಿತೆ, ಜಪಾನಿನ ಬಲಿಷ್ಠ ಆಟಗಾರ್ತಿ ಅಕಾನೆ ಯಮಾಗುಚಿ ಅವರನ್ನು 16-21, 21-16, 21-19 ಅಂತರದಿಂದ ಮಣಿಸಿ ಭಾರೀ ಭರವಸೆ ಮೂಡಿಸಿದ್ದರು. ಯಮಾಗುಚಿ ವಿರುದ್ಧ ಆಡಿದ ಕಳೆದ 4 ಪಂದ್ಯಗಳಲ್ಲಿ ಸಿಂಧು ಮೊದಲ ಗೆಲುವು ಕಂಡಿದ್ದರು.
ವಿಶ್ವದ 11ನೇ ರ್‍ಯಾಂಕಿಂಗ್ ಆಟಗಾರ್ತಿಯಾಗಿರುವ ಪೊರ್ಣಪವೀ ಚೊಚುವಾಂಗ್ ವಿರುದ್ಧ 4-1 ಮೇಲುಗೈ ದಾಖಲೆ ಹೊಂದಿರುವ ಕಾರಣ ಸಿಂಧು ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿತ್ತು. ಆದರೆ ಇದು ಕೇವಲ 45 ನಿಮಿಷಗಳಲ್ಲಿ ಹುಸಿಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.