ಅದ್ಧೂರಿಯಾಗಿ ಸೆಟ್ಟೇರಿದ ಸತ್ಯಪ್ರಕಾಶ್ ರ ‘ಮ್ಯಾನ್‌ ಆಫ್ ದಿ ಮ್ಯಾಚ್’

Team Udayavani, Mar 21, 2021, 8:15 AM IST

man of the match kannada new movie

ಕನ್ನಡ ಚಿತ್ರರಂಗಕ್ಕೆ “ರಾಮಾ ರಾಮಾ ರೇ’ ಮತ್ತು “ಒಂಲ್ಲಾ ಎರಡಲ್ಲಾ’ದಂತಹ ಅಪರೂಪದ ಸಿನಿಮಾಗಳನ್ನು ನೀಡಿದ, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ. ಸತ್ಯಪ್ರಕಾಶ್‌ ತಮ್ಮ ಮೂರನೇ ನಿರ್ದೇಶನದ ಸಿನಿಮಾ “ಮ್ಯಾನ್‌ ಆಫ್ ದಿ ಮ್ಯಾಚ್‌ ‘ನೊಂದಿಗೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿ ಇದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿದ್ದು, ಕಾರ್ಯಕ್ರಮದಲ್ಲಿ ನಾದಬ್ರಹ್ಮ ಹಂಸಲೇಖ, ಡಾಲಿ ಧನಂಜಯ, ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ, ದೇವರಾಜ್‌ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

ಇದನ್ನೂ ಓದಿ: ಪಂಚಿಂಗ್ ಡೈಲಾಗ್, ಪವರ್‍ ಫುಲ್ ಫೈಟ್ಸ್ ನ  ‘ಯುವರತ್ನ’ ಟ್ರೈಲರ್ ರಿಲೀಸ್

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಡಿ. ಸತ್ಯಪ್ರಕಾಶ್‌, “ಪ್ರತಿದಿನ ಪ್ರತಿಯೊಬ್ಬನಿಗೂ ಒಂದು ಮ್ಯಾಚ್‌ ಇದ್ದಂತೆ. ಸಂಜೆಯಾಗುತ್ತಲೆ ಅವನು ಗೆದ್ದಿರುತ್ತಾನೆ ಅಥವಾ ಸೋತಿರುತ್ತಾನೆ. ಗೆಲುವು ಸೋಲುಗಳ ಹಗ್ಗಾಜಗ್ಗಾಟದಲ್ಲಿ ಗೆಲ್ಲುವುದು ವ್ಯಕ್ತಿಯೋ ಅಥವಾ ಮೌಲ್ಯಗಳ್ಳೋ ಇಲ್ಲವೇ ಸಂದರ್ಭ-ಸನ್ನಿವೇಶವೋ ಎನ್ನುವುದನ್ನು ಹುಡುಕುತ್ತಾ ಚಿತ್ರ ಸಾಗುತ್ತದೆ. ಇಡೀ ಕಥೆ ಒಂದೇ ದಿನದಲ್ಲಿ ಒಂದೇ ಜಾಗದಲ್ಲಿ ನಡೆಯುತ್ತದೆ’ ಎಂದು ವಿವರಣೆ ನೀಡಿದರು.

ಇನ್ನು “ಮ್ಯಾನ್‌ ಆಫ್ ದಿ ಮ್ಯಾಚ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಡಿ. ಸತ್ಯಪ್ರಕಾಶ್‌, “ಸತ್ಯ ಪಿಕ್ಚರ್’ ಎನ್ನುವ ಚಿತ್ರ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. “ಸತ್ಯ ಪಿಕ್ಚರ್’ ಜೊತೆಗೆ “ಮಯೂರ ಮೋಶನ್‌ ಪಿಕ್ಚರ್’ನ ನಿರ್ಮಾಪಕರಾದ ಡಿ. ಮಂಜುನಾಥ ಕೂಡ “ಮ್ಯಾನ್‌ ಆಫ್ ದಿ ಮ್ಯಾಚ್‌’ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ.

“ಮ್ಯಾನ್‌ ಆಫ್ ದಿ ಮ್ಯಾಚ್‌’ ಚಿತ್ರದಲ್ಲಿ “ರಾಮಾ ರಾಮಾ ರೇ..’ ಚಿತ್ರದ ಖ್ಯಾತಿಯ ನಟ ನಟರಾಜ್‌ ಮತ್ತು ಧರ್ಮಣ್ಣ ಕಡೂರ್‌ ಜೊತೆಗೆ ಸಾಕಷ್ಟು ಹೊಸ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಮದನ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್‌ ಮತ್ತು ನೊಬಿನ್‌ ಪೌಲ್‌ ಸಂಗೀತ ಸಂಯೋಜನೆಯಿದೆ. ಇದೇ ಏಪ್ರಿಲ್‌ ತಿಂಗಳಿನಿಂದ “ಮ್ಯಾನ್‌ ಆಫ್ ದಿ ಮ್ಯಾಚ್‌’ ಶೂಟಿಂಗ್‌ ಶುರುಮಾಡಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.