ಬೇಕಿದ್ದರೆ ನಳಿನ್ ಕಟೀಲ್ ಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ: ಸಿದ್ದರಾಮಯ್ಯ
Team Udayavani, Mar 21, 2021, 12:53 PM IST
ಬೆಂಗಳೂರು: ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕ ಬಿಜೆಪಿಯ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಟ್ವೀಟ್ ಮಾಡಿದ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಇದನ್ನೂ ಓದಿ:ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ
ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಎಚ್ಚರಿಸಿದರು.
ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ @BJP4Karnataka ನಾಯಕರಿಗೆ ದಾನ ಮಾಡೋಣ ಎಂದು
90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.ಬೇಕಿದ್ದರೆ @nalinkateel ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ.
ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ. pic.twitter.com/CnErHQ3dhU
— Siddaramaiah (@siddaramaiah) March 21, 2021
ಮಸ್ಕಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಿ ದ್ದರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.