ಸರ್ಕಾರದ ಸೌಲಭ್ಯ ಪ್ರತಿಯೊಬ್ಬರಿಗೂ ಸಿಗಲಿ
Team Udayavani, Mar 21, 2021, 7:54 PM IST
ಶಿವಮೊಗ್ಗ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅರಿಯಲು ಮತ್ತು ಸರ್ಕಾರದ ಸೇವಾ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪುವುದನ್ನು ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಶನಿವಾರ ಹೊಳಲೂರು ಹೋಬಳಿ ವ್ಯಾಪ್ತಿಯ ಆಲದಳ್ಳಿಯಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬೆಳಗ್ಗೆಯಿಂದ ನಿರಂತರ ಭೇಟಿ, ಪರಿಶೀಲನೆ: ಬೆಳಗ್ಗೆ 11ಗಂಟೆಗೆ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಊರಿನ ದ್ವಾರದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ಹಾಗೂ ಮಂಗಳ ವಾದ್ಯಗಳ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿಗಳನ್ನು ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.
ಆಲದಳ್ಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಂಗನವಾಡಿಯ ಮಕ್ಕಳೊಂದಿಗೆ ಬೆರೆತು ಮಾತನಾಡಿದರು. ಮಕ್ಕಳಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಗ್ರಾಮದ ಪ್ರತಿಯೊಂದು ಮಗುವಿಗೂ ಇದರ ಸೌಲಭ್ಯ ಸಿಗುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು. ಊರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಪ್ರಾಥಮಿಕ ಕೇಂದ್ರದಲ್ಲಿ ನೀಡಲಾಗುತ್ತಿರುವ ಕೊರೊನಾ ಲಸಿಕೆಯನ್ನು ಎಲ್ಲಾ ಅರ್ಹರೂ ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು.
ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೊರೊನಾ ಲಸಿಕೆ ಕುರಿತು ಜಾಗೃತಿ ವಾಹನ ಜಾಥಾಕ್ಕೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಊರಿನ ಅರಳಿಕಟ್ಟೆ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ನೀರು ಹರಿದು ಹೋಗದೆ ನಿಂತಿದ್ದು, ಬೇಸಿಗೆಯಲ್ಲಿ ನೀರು ಕಡಿಮೆಯಾದ ಬಳಿಕ ಹೂಳೆತ್ತುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ.
ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಅಭಿವೃದ್ಧಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಜಿಲ್ಲಾ ಧಿಕಾರಿ ಅವರು ಸೋಮಿನಕೊಪ್ಪ ಪಶು ಆರೋಗ್ಯ ಕೇಂದ್ರ ಹಾಗೂ ಊರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದರು. ಉತ್ತಮ ಗುಣಮಟ್ಟದ ಅಕ್ಕಿ ಪೂರೈಕೆಯಾಗುತ್ತಿದ್ದು, ಗೋ ಧಿ ಗುಣಮಟ್ಟ ಚೆನ್ನಾಗಿಲ್ಲ ಎಂದು ಊರಿನವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಆಲದಳ್ಳಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಒಂದು ಗಂಟೆಗೂ ಅಧಿ ಕ ಕಾಲ ಪಾಠ ಹಾಗೂ ಸಂವಾದ ನಡೆಸಿದರು.
ಹೈಸ್ಕೂಲ್ ವಿದ್ಯಾರ್ಥಿಗಳ ಗಣಿತ, ವಿಜ್ಞಾನ ಗುಣಮಟ್ಟ ಪರಿಶೀಲಿಸಿದ ಅವರು, ಈ ವಿಷಯಗಳ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು. ಅಹವಾಲು ಸ್ವೀಕಾರ- ಅಭಿನಂದನೆ: ಸಂಜೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಅವರು ಸಭಾ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್‌ಗಳಳನ್ನು ಅಭಿನಂದಿಸಿದರು. ತಹಶೀಲ್ದಾರ್ ಎನ್.ಜೆ. ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರೋಜಾ ಬಾಯಿ ಮತ್ತಿತರರು ಇದ್ದರು. ಜಿಲ್ಲಾಧಿಕಾರಿ ಅವರು ಕೊಮ್ಮನಾಳು ಬಾಲಕರ ವಸತಿ ನಿಲಯದಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.