ಲಂಕಾ ವಿರುದ್ಧ ಜಯ ಸಾಧಿಸಿ ಭಾರತ ಚಾಂಪಿಯನ್
Team Udayavani, Mar 22, 2021, 12:06 AM IST
ರಾಯ್‌ಪುರ: ರೋಡ್ ಸೇಫ್ಟಿ ವರ್ಲ್ಡ್ ಟಿ20 ಸೀರಿಸ್ ಫೈನಲ್‌ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಆತಿಥೇಯ ಇಂಡಿಯಾ ಲೆಜೆಂಡ್ಸ್ 14 ರನ್‌ಗಳ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು.
ಮೊದಲು ಬ್ಯಾಟಿಂಗ್ ನಡೆಸಿದ ಭಾರತ 4 ವಿಕೆಟಿಗೆ 181 ರನ್ ಪೇರಿಸಿತು. ಬಳಿಕ ಗುರಿ ಬೆನ್ನತ್ತಿದ ಲಂಕಾ 20 ಓವರ್‌ಗಳಲ್ಲಿ 7 ವಿಕೆಟಿಗೆ 167 ರನ್ ಗಳಿಸಿ ಶರಣಾಯಿತು.
ಆರಂಭಿಕ ಆಘಾತ :
ಭಾರತ ವೀರೇಂದ್ರ ಸೆಹವಾಗ್ (10) ಅವರನ್ನು ಬೇಗನೆ ಕಳೆದುಕೊಂಡಿತು. ಎಸ್. ಬದರೀನಾಥ್ (7) ಕೂಡ ಹೆಚ್ಚು ಹೊತ್ತು ಉಳಿಯಲಿಲ್ಲ. ಈ ಹಂತದಲ್ಲಿ ನಾಯಕ ಸಚಿನ್ ತೆಂಡುಲ್ಕರ್ ಮತ್ತು ಯುವರಾಜ್ ಸಿಂಗ್ ಸೇರಿಕೊಂಡು ತಂಡವನ್ನು ಆಧರಿಸಿ ನಿಂತರು. ತೆಂಡುಲ್ಕರ್ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನವೊಂದನ್ನು ನೀಡಿ 30 ರನ್ ಹೊಡೆದರು (23 ಎಸೆತ, 5 ಬೌಂಡರಿ).
ಮುಂದಿನದು ಯುವರಾಜ್ ಸಿಂಗ್ ಮತ್ತು ಯೂಸುಫ್ ಪಠಾಣ್ ಅವರ ಬ್ಯಾಟಿಂಗ್ ದರ್ಬಾರು. ಲಂಕಾ ಬೌಲರ್‌ಗಳ ಮೇಲೇರಿ ಹೋದ ಈ ಜೋಡಿ 7.5 ಓವರ್‌ಗಳಿಂದ 85 ರನ್ ಒಟ್ಟುಗೂಡಿಸಿತು. ಹೀಗಾಗಿ ಭಾರತ ಬೃಹತ್ ಮೊತ್ತ ದಾಖಲಿಸುವಂತಾಯಿತು. ಇಬ್ಬರೂ ಟೀಮ್ ಇಂಡಿಯಾ ದಿನಗಳ ಬ್ಯಾಟಿಂಗ್ ವೈಭವವನ್ನು ನೆನಪಿಸಿ ಅರ್ಧ ಶತಕ ಬಾರಿಸಿ ಮೆರೆದರು; ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದರು.
ಯುವರಾಜ್ ಸಿಂಗ್ 41 ಎಸೆತ ಎದುರಿಸಿ 60 ರನ್ ಬಾರಿಸಿದರು. ಈ ಆಕರ್ಷಕ ಇನ್ನಿಂಗ್ಸ್‌ನಲ್ಲಿ 4 ಫೋರ್, 4 ಸಿಕ್ಸರ್ ಸೇರಿತ್ತು. ಯೂಸುಫ್ ಪಠಾಣ್ ಅವರದು ಅಜೇಯ 62 ರನ್ ಕೊಡುಗೆ. 36 ಎಸೆತ ಎದುರಿಸಿದ ಅವರು 5 ಸಿಕ್ಸರ್, 4 ಬೌಂಡರಿ ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.