ಸ್ಟಾರ್ ವರ್ಗೀಕೃತ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ: ರಾಜ್ಯ ಸರ್ಕಾರದ ಆದೇಶ
Team Udayavani, Mar 22, 2021, 3:13 PM IST
ಬೆಂಗಳೂರು: ಕೋವಿಡ್-19ಕ್ಕೆ ಸಂಕಷ್ಟಕ್ಕೆ ಸಿಲುಕಿ ಜರ್ಜರಿತಗೊಂಡಿರುವ ಹೋಟೆಲ್ ಕ್ಷೇತ್ರದ ಪುನಶ್ಚೇತನಕ್ಕೆ ಪೂರಕವಾಗುವಂತೆ ಸ್ಟಾರ್ ವರ್ಗೀಕೃತ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೋಟೆಲ್ ಅಸೋಸಿಯೇಷನ್ ಆಫ್ ಇಂಡಿಯಾರವರು ಆತಿಥ್ಯ ವಲಯಕ್ಕೆ ಕೈಗಾರಿಕಾ ಸ್ಥಾನಮಾನ ನೀಡಬೇಕೆಂದು ಕೋರಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೋಟೆಲ್ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಿ, ವಿದ್ಯುಚ್ಛಕ್ತಿ ದರ ಹಾಗೂ ಆಸ್ತಿ ತೆರಿಗೆಯಲ್ಲಿ 5 ವರ್ಷಗಳ ಅವಧಿಗೆ ರಿಯಾಯಿತಿ ನೀಡಿ, ಆದೇಶ ಹೊರಡಿಸಿದೆ.
ಇದನ್ನೂ ಓದಿ:ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!
ಕರ್ನಾಟಕ ರಾಜ್ಯದಲ್ಲಿ ನೊಂದಣಿಯಾಗಿರುವ 62 ಸ್ಟಾರ್ ವರ್ಗೀಕೃತ ಹೋಟೆಲ್‍ಗಳಿಗೆ ಹಾಗೂ ಮುಂದಿನ ದಿನಗಳಲ್ಲಿ ನೊಂದಣಿಯಾಗುವ ಸ್ಟಾರ್ ವರ್ಗೀಕೃತ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ದೊರೆಯಲಿದೆ.
ಈ ಕುರಿತು ಕೈಗಾರಿಕಾ ಅಭಿವೃದ್ಧಿ ಹಾಗೂ ವಾಣಿಜ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಮಾಲೋಚನೆ ಮಾಡಿ, ಮಾರ್ಗಸೂಚಿಗಳನ್ನು ಹೊರಡಿಸಲಿದೆ. ವಿದ್ಯುಚ್ಛಕ್ತಿ ದರ ಹಾಗೂ ಆಸ್ತಿ ತೆರಿಗೆಯಲ್ಲಿ ವಾಣಿಜ್ಯ ಬಳಕೆದಾರ ಮತ್ತು ಕೈಗಾರಿಕೆ ಬಳಕೆದಾರ ನಡುವಿನ ವ್ಯತ್ಯಾಸದ ದರ ಮಾತ್ರ ಇದಕ್ಕೆ ಅನ್ವಯಿಸುತ್ತದೆ.
ಇದನ್ನೂ ಓದಿ: ಕಾಮಗಾರಿ ಬ್ಲಾಸ್ಟ್ ಸದ್ದಿಗೆ ಮಗು ಸಾವು! ಗುಂಡಿಯಿಂದ ಮೃತದೇಹ ತೆಗೆದು ಅಮಾನವೀಯ ಕೃತ್ಯ
ಪ್ರವಾಸೋದ್ಯಮ ವಲಯ ರಾಜ್ಯದಲ್ಲಿ ಪ್ರಮುಖ ಕ್ಷೇತ್ರವಾಗಿದ್ದು, ದೇಶಿ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪಾರಂಪರಿಕ ನೈಸರ್ಗಿಕ ಕರಾವಳಿ ಆಧ್ಯಾತ್ಮಿಕ, ಅರಣ್ಯ ಹಾಗೂ ಸಾಹಸಿ ಪ್ರವಾಸ ಒಳಗೊಂಡಂತೆ 778 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರ ರಾಜ್ಯದ ಜಿಎಸ್‍ಡಿಪಿಗೆ ಶೇ.14.8 ರಷ್ಟು ಕೊಡುಗೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.