ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಕೃಷ್ಣ ವಿ. ಶೆಟ್ಟಿ ಅಧಿಕಾರ ಸ್ವೀಕಾರ

Team Udayavani, Mar 22, 2021, 3:52 PM IST

ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಕೃಷ್ಣ ವಿ. ಶೆಟ್ಟಿ ಅಧಿಕಾರ ಸ್ವೀಕಾರ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಬಂಟರ ಭವನದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಜ್ಞಾನ ಮಂದಿರ ಸಮಿತಿಯ 8ನೇ ಕಾರ್ಯಾಧ್ಯಕ್ಷರಾಗಿ ಹೊಟೇಲ್‌ ಉದ್ಯಮಿ, ಸಮಾಜ ಸೇವಕ ಕೃಷ್ಣ ವಿ. ಶೆಟ್ಟಿ ಅವರು ನೇಮಕಗೊಂಡಿದ್ದಾರೆ.

ಸಂಚಾಲಕರಾಗಿ ಜ್ಞಾನ ಮಂದಿರದ ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರಾಗಿ ಹೊಟೇಲ್‌ ಉದ್ಯಮಿ ದಿವಾಕರ ಬಿ. ಶೆಟ್ಟಿ ಕುರ್ಲಾ, ಕಾರ್ಯದರ್ಶಿಯಾಗಿ ಸುರೇಶ್‌ ಎಲ್‌. ಶೆಟ್ಟಿ ಪನ್ವೆಲ್‌, ಕೋಶಾಧಿಕಾರಿಯಾಗಿ ಬಿ. ಬಾಲಕೃಷ್ಣ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಸಮಿತಿಯ ಸಲಹೆಗಾರರಾಗಿ ಜ್ಞಾನ ಮಂದಿರ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಚಂದ್ರಹಾಸ್‌ ಎಂ. ರೈ ಮತ್ತು ಜಗನ್ನಾಥ ಎನ್‌. ರೈ ಅವರು ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರಾಗಿ ಅಶೋಕ್‌ ಪಕ್ಕಳ, ಲತಾ ಪಿ. ಶೆಟ್ಟಿ, ಲತಾ ಜೆ. ಶೆಟ್ಟಿ, ಪ್ರಶಾಂತಿ ಡಿ. ಶೆಟ್ಟಿ, ಕಲ್ಪನಾ ಕೆ. ಶೆಟ್ಟಿ, ಅರುಣ ಪ್ರಭಾ ಬಿ. ಶೆಟ್ಟಿ, ಕೆ. ಕೆ. ಶೆಟ್ಟಿ, ಪಿ. ಧನಂಜಯ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಬಾಳಿಕೆ, ಭಾಸ್ಕರ್‌ ಡಿ. ಶೆಟ್ಟಿ, ನಲ್ಯಗುತ್ತು ಪ್ರಕಾಶ್‌ ಟಿ. ಶೆಟ್ಟಿ, ಮನೋರಮಾ ಎನ್‌. ಶೆಟ್ಟಿ, ಪ್ರಮೀಳಾ ಎಸ್‌. ಶೆಟ್ಟಿ ಅವರನ್ನು ನೇಮಿಸಲಾಗಿದೆ.

ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ ಅವರು ಸಂಘದ ಸಿಟಿ ಪ್ರಾದೇಶಿಕ ಸಮಿತಿಯ ಪ್ರಗತಿಗಾಗಿ ಅಹರ್ನಿಶಿಯಾಗಿ ಸೇವೆ ಸಲ್ಲಿಸಿದ್ದು, ಮೂರು ವರ್ಷ ಸಮಿತಿಯ ಕೋಶಾಧಿಕಾರಿಯಾಗಿ, ಬಳಿಕ ಕಾರ್ಯಾಧ್ಯಕ್ಷರಾಗಿ, ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಂಘದ ಕೆಟರಿಂಗ್‌ ಮತ್ತು ಡೆಕೊರೇಷನ್‌ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮೂರು ವರ್ಷ ದುಡಿದಿರುವ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳು 2021-23ರ ಅವಧಿಗೆ ಶ್ರೀ ಮಹಾವಿಷ್ಣು ದೇವಸ್ಥಾನ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಮಾ. 9ರಿಂದ ಮಾ. 11ರ ವರೆಗೆ ನಡೆದ ಶ್ರೀ ಮಹಾವಿಷ್ಣು ಮಂದಿರದ ಜಾತ್ರಾ ಮಹೋತ್ಸವ ಅದ್ದೂರಿ ಆಚರಣೆಯಲ್ಲಿ ಅವರ ಪಾತ್ರ ಹಿರಿದಾಗಿದ್ದು, ಜ್ಞಾನ ಮಂದಿರದ ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಮೊದಲ್ಗೊಂಡು ಮಂದಿರದ ಮಾಜಿ ಕಾರ್ಯಾಧ್ಯಕ್ಷರಾದ ಡಾ| ಪಿ. ವಿ. ಶೆಟ್ಟಿ, ಜಯ ಎ. ಶೆಟ್ಟಿ ಮೇರ್ಕಳ ತ್ಯಾಂಪಣ್ಣ ಶೆಟ್ಟಿ, ಶಿವರಾಮ ಜಿ. ಶೆಟ್ಟಿ, ಜಗನ್ನಾಥ ಎನ್‌. ರೈ, ಚಂದ್ರಹಾಸ ಎಂ. ರೈ ಅವರ ಸಂಪೂರ್ಣ ಪ್ರೋತ್ಸಾಹದೊಂದಿಗೆ ಅವರು ಈ ಪದವಿಯನ್ನು ಸ್ವೀಕರಿಸಿದರು.

ಮಾ. 10ರಂದು ಸಂಘದ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಮಹಾವಿಷ್ಣು ದೇವರ ಸನ್ನಿಧಿಯಲ್ಲಿ ಜರಗಿದ ಪದವಿ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರನಾಥ್‌ ಎಂ. ಭಂಡಾರಿ ಅವರಿಂದ ಪದವಿ ಸ್ವೀಕರಿಸಿದರು.

ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಡಿ. ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರು, ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಪ್ರಾದೇಶಿಕ ಸಮಿತಿಗಳ ಸಮನ್ವಯಕರು, ಪ್ರಾದೇಶಿಕ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯರು, ಯುವ ವಿಭಾಗದ ಸದಸ್ಯರು ಈ ಸಂದರ್ಭ ಭಾಗವಹಿಸಿದ್ದರು. ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

-ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

ಟಾಪ್ ನ್ಯೂಸ್

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.