ಗೋವಾ ದುರುದ್ದೇಶ ಬಹಿರಂಗ: ಸುಪ್ರೀಂ ಗಮನಕ್ಕೆ ತನ್ನಿ


Team Udayavani, Mar 22, 2021, 4:35 PM IST

ಗೋವಾ ದುರುದ್ದೇಶ ಬಹಿರಂಗ: ಸುಪ್ರೀಂ ಗಮನಕ್ಕೆ ತನ್ನಿ

ಬೆಳಗಾವಿ: ಮಹದಾಯಿ ನೀರು ಹಂಚಿಕೆ ಸಂಬಂಧ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನೀರಾವರಿ ಇಲಾಖೆಗಳ ಅಧಿಕಾರಿಗಳ ಜಂಟಿ ಪರಿಶೀಲನಾ ಸಮಿತಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಬಳಿ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿದಸಮಯದಲ್ಲಿ ನಡೆದ ಘಟನೆಗಳು ಗೋವಾದದುರುದ್ದೇಶವನ್ನು ಬಹಿರಂಗಗೊಳಿಸಿದ್ದು,ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗಮನಕ್ಕೆ ತರಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ರಾಜ್ಯ ಸರಕಾರದ ಜಲಸಂಪನ್ಮೂಲ ಇಲಾಖೆಯ ಅತಿರಿಕ್ತ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್‌ ಅವರಿಗೆ ಪತ್ರಬರೆದಿರುವ ಜಿಲ್ಲಾ ಕನ್ನಡ ಸಂಘಟನೆಗಳಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಗೋವಾದ ದುರುದ್ದೇಶದ ಬಗ್ಗೆಕರ್ನಾಟಕ ಸರಕಾರ ನ್ಯಾಯಾಲಯದಗಮನಕ್ಕೆ ತರುವ ಅಗತ್ಯತೆ ಇದೆ ಎಂದು ಹೇಳಿದ್ದಾರೆ.

ಯೋಜನಾ ಪ್ರದೇಶದಲ್ಲಿ ನಿರ್ಮಿಸಿದ ತಡೆಗೋಡೆಯಲ್ಲಿ ಈ ಹಿಂದೆ ಉಂಟಾಗಿದ್ದಬಿರುಕುಗಳನ್ನು ಮುಚ್ಚಲಾಗಿತ್ತು. ಈಬಿರುಕುಗಳು ಮತ್ತೆ ತೆರೆದುಕೊಂಡಿವೆಯೇಎಂಬುದನ್ನು ಪರಿಶೀಲಿಸಲು ಸರ್ವೋತ್ಛನ್ಯಾಯಾಲಯ ಆದೇಶಿಸಿತ್ತು. ಅದರಂತೆಮೂರು ರಾಜ್ಯಗಳ ಜಂಟಿ ಪರಿಶೀಲನಾಸಮಿತಿಯು ಮಾ.19 ರಂದು ಕಳಸಾ ನಾಲಾಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆದರೆ ಈ ಸಂದರ್ಭದಲ್ಲಿ ಗೋವಾದಅಧಿಕಾರಿಗಳು ತಮ್ಮ ಜತೆ ಪರಿಸರವಾದಿಗಳುಮತ್ತು ಮಾಧ್ಯಮ ಪ್ರತಿನಿಧಿಗಳನ್ನುಕರೆತಂದಿದ್ದರು. ಉದ್ದೇಶಪೂರ್ವಕವಾಗಿಯೇಕರ್ನಾಟಕದ ಪೊಲೀಸರ ಜತೆ ವಾದಕ್ಕಿಳಿದರು.ಅಷ್ಟೇ ಅಲ್ಲ ವಾಸ್ತವತೆಯ ಆಧಾರದ ಮೇಲೆವರದಿ ತಯಾರಿಸಲು ಸಹ ಸಿದ್ಧರಾಗಲಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.ಸರ್ವೋತ್ಛ ನ್ಯಾಯಾಲಯದ ಆದೇಶದನ್ವಯ ನಿರ್ಮಿಸಲಾದ ತಡೆಗೋಡೆಯುಭದ್ರವಾಗಿದೆ ಎಂಬ ವಾಸ್ತವವನ್ನು ಕಂಡರೂಅದನ್ನು ವರದಿಯಲ್ಲಿ ಪ್ರಸ್ತಾಪಿಸಲು ಸಿದ್ಧರಾಗದ ಗೋವಾ ಅಧಿಕಾರಿಗಳು ಹಾಗೆಯೇ ಮರಳಿ ಹೋಗಿದ್ದಾರೆ. ಜತೆಗೆಮಾಧ್ಯಮಗಳಲ್ಲಿ ಕರ್ನಾಟಕದ ವಿರುದ್ಧ ವರದಿ ಪ್ರಕಟವಾಗುವಂತೆ ಮಾಡಿದ್ದಾರೆ ಎಂದು ಅಶೋಕ ಚಂದರಗಿ ಪತ್ರದಲ್ಲಿ ತಿಳಿಸಿದ್ದಾರೆ.

ಕಳಸಾ ಬಂಡೂರಿ ಯೋಜನೆಯಅನುಷ್ಠಾನವನ್ನು ತಡೆಯುವ ಪ್ರಯತ್ನವಾಗಿವಿಳಂಬ ತಂತ್ರವನ್ನು ಅನುಸರಿಸುತ್ತಿರುವ ಗೋವಾ ತನ್ನ ತಂತ್ರಕ್ಕಾಗಿ ಸರ್ವೋತ್ಛನ್ಯಾಯಾಲಯದ ಅಮೂಲ್ಯ ಸಮಯ ಹಾಳುಮಾಡುತ್ತಿದೆ. ಕಾರಣ ಈ ವಿಷಯವನ್ನು ರಾಜ್ಯ ಸರಕಾರ ಏಪ್ರಿಲ್‌ ಮೊದಲ ವಾರದಲ್ಲಿ ನಡೆಯುವ ವಿಚಾರಣೆ ಕಾಲಕ್ಕೆನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.

2010 ರಿಂದ 2018 ರವರೆಗೆ ಮಹದಾಯಿ ನ್ಯಾಯಮಂಡಳಿ ವಿಚಾರಣೆ ಕಾಲಕ್ಕೆ ಗೋವಾಸರಕಾರ ಇದೇ ರೀತಿ ವಿಳಂಬ ತಂತ್ರವನ್ನುಅನುಸರಿಸಿದ್ದಲ್ಲದೆ ನ್ಯಾಯಾಲಯ ಮತ್ತುಕೇಂದ್ರ ಸರಕಾರವನ್ನು ಬಳಸಿಕೊಂಡುಯೋಜನೆಯ ಅನುಷ್ಠಾನಕ್ಕೆ ತಡೆಯಲು ಪ್ರಯತ್ನ ಮಾಡಿತ್ತು.

ಇದರ ಹೊರತಾಗಿ ಜಂಟಿ ಪರಿಶೀಲನಾಸಮಿತಿಯು ವಾಸ್ತವ ಪರಿಸ್ಥಿತಿಯನ್ನುನ್ಯಾಯಾಲಯದ ಗಮನಕ್ಕೆ ತರಲುವಿಫಲವಾದರೆ ಸರ್ವೋತ್ಛ ನ್ಯಾಯಾಲಯವು ತನ್ನದೇ ಅದ ಅಧಿಕಾರಿಗಳನ್ನು ಯೋಜನಾ ಪ್ರದೇಶಕ್ಕೆ ಕಳಿಸುವಂತೆ ಕರ್ನಾಟಕ ಸರಕಾರ ಮನವಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.