ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ

Team Udayavani, Mar 22, 2021, 7:16 PM IST

nbcncgbn

ಸಿಂಧನೂರು : ಮಸ್ಕಿಯಲ್ಲಿ ಉಪಚುನಾವಣೆ ಪ್ರಚಾರಕ್ಕೆ ಹೋದಾಗ 30 ಸಾವಿರ ಜನ ಭವ್ಯವಾಗಿ ಸ್ವಾಗತಿಸಿದ್ದು, ಪ್ರತಾಪ್‌ಗೌಡರು 20 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಅವರು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಸ್ಕಿ ಕ್ಷೇತ್ರಕ್ಕೆ ಮತ್ತೂಮ್ಮೆ ಬಂದು ಪ್ರಚಾರ ನಡೆಸುವೆ. ಬಸವ ಕಲ್ಯಾಣದಲ್ಲಿ ಈಗಾಗಲೇ ನಾವು ಗೆದ್ದಾಗಿದೆ. ಬೆಳಗಾವಿಯಲ್ಲೂ ನಾವೇ ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ದೆಹಲಿಗೆ ಕಳಿಸಲಾಗಿದ್ದು, ಶೀಘ್ರವೇ ಹೆಸರು ಪ್ರಕಟಿಸಲಾಗುವುದು ಎಂದರು.

ಸ್ಪರ್ಧೆಯಿಲ್ಲ, ಮೈಸೂರಲ್ಲಿ ಮನೆ: ಬಸವಕಲ್ಯಾಣದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪರ್ಧೆ ಮಾಡುತ್ತಾರೆನ್ನುವುದರಲ್ಲಿ ಯಾವುದೇ ಹುರುಳಿಲ್ಲ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಮೈಸೂರಿನಲ್ಲಿ ಮನೆ ಮಾಡಿ, ವಿಜಯೇಂದ್ರ ಅವರು ಅಲ್ಲಿ ಬಿಡಾರ ಹೂಡಲಿದ್ದಾರೆ. ಅಲ್ಲಿದ್ದುಕೊಂಡು ಐದಾರು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಮಾಡಲಿದ್ದಾರೆ.

ಸುತ್ತಮುತ್ತಲಿನ ಜಿಲ್ಲೆಗಳಿಗೂ ಇದರಿಂದ ಅನುಕೂಲವಾಗಲಿದೆ. ಅವರಿಗೆ ಏನು ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷವೇ ನಿರ್ಧರಿಸುತ್ತದೆ. ವರುಣಾ ಕ್ಷೇತ್ರಕ್ಕೆ ಮುಂದಿನ ಬಾರಿ ಯಾರು ಸ್ಪರ್ಧಿಸಲಿದ್ದಾರೆಂಬುದು ಕೂಡ ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

 ನೀರಾವರಿಗೆ ಆದ್ಯತೆ :  5ಎ ಕಾಲುವೆಗೆ ಸಂಬಂಧಿಸಿದ ಬೇಡಿಕೆಯನ್ನು ಗಮನಿಸಿದ್ದು, ಅಲ್ಲಿ ಅನುಕೂಲವಾಗುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಅವಶ್ಯವಿರುವ ಯೋಜನೆಗಳನ್ನು ಮಾಡಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್‌ 10ರ ತನಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ತೆರಿಗೆ ಹೊರೆಯಿಲ್ಲದ ಬಜೆಟ್‌: ಕೋವಿಡ್‌ ನಂತಹ ಕ್ಲಿಷ್ಟ ಸಮಯದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್‌ನ್ನು ಮಂಡಿಸಲಾಗಿದೆ. ಅಭಿವೃದ್ಧಿಗೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಬದ್ಧವಿದ್ದು, ಯಾವುದೇ ಹೆಚ್ಚಿನ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕಿಲ್ಲ.

ನಮ್ಮ ಸರಕಾರದ ಕೆಲಸಗಳನ್ನು ಜನ ಮೆಚ್ಚಿಕೊಂಡಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಪಕ್ಷ 130 ಸ್ಥಾನಗಳಲ್ಲಿ ಗೆಲುವು ಸಾಧಿ ಸಲಿದೆ ಎಂದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್‌, ಸಂಸದ ಸಂಗಣ್ಣ ಕರಡಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಜಿಪಂ ಸದಸ್ಯರಾದ ಎನ್‌.ಶಿವನಗೌಡ ಗೋರೆಬಾಳ, ಅಮರೇಗೌಡ ವಿರೂಪಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ್‌ ಇದ್ದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.