ಪೊಲೀಸ್ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರ ಸಾವು : ರೊಚ್ಚಿಗೆದ್ದ ಸ್ಥಳೀಯರು
Team Udayavani, Mar 22, 2021, 8:51 PM IST
ಮೈಸೂರು: ಮೈಸೂರು: ಸಂಚಾರ ಪೊಲೀಸರ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ವೇಳೆ ಬೈಕಿನಿಂದ ಬಿದ್ದ ಬೈಕ್ ಸವಾರನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಿನಕಲ್ ರಿಂಗ್ ರಸ್ತೆಯ ಆರ್‌ಎಂಪಿ ವೃತ್ತದ ಬಳಿ ಸೋಮವಾರ ಸಂಜೆ ನಡೆದಿದೆ.
ಎಚ್.ಡಿ. ಕೋಟೆಯ ಹಂಪಾಪುರದ ಕಲ್ಲೇನಹಳ್ಳಿ ನಿವಾಸಿ ದೇವರಾಜು(43) ಮೃತರು. ಇವರೊಂದಿಗೆ ಇದ್ದ ಸುರೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಉದ್ರಿಕ್ತರಾದ ಸಾರ್ವಜನಿಕರು, ಪೊಲೀಸರ ಮೇಲೆ ಹಲ್ಲೆ ನಡೆಸಿ ಬಳಿಕ ಜೀಪ್ ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಂಚಾರ ವ್ಯವಸ್ಥೆ ಒಂದು ಗಂಟೆಗೂ ಹೆಚ್ಚು ಕಾಲ ಅಸ್ತವ್ಯಸ್ಥಗೊಂಡಿತ್ತು.
ಇದನ್ನೂ ಓದಿ:ರಾಷ್ಟ್ರಧ್ವಜದ ಕೇಕ್ ಕತ್ತರಿಸುವುದು ರಾಷ್ಟ್ರದ್ರೋಹವಲ್ಲ : ಮದ್ರಾಸ್ ಹೈಕೋರ್ಟ್ ಆದೇಶ
ಆಗಿದಿಷ್ಟು: ಬೋಗಾದಿಯಿಂದ ಹಿನಕಲ್ ಕಡೆಗೆ ದೇವರಾಜು ಅವರು ಸುರೇಶ್ ಅವರೊಂದಿಗೆ ಬೈಕಿನಲ್ಲಿ ಬರುತ್ತಿದ್ದರು ಈ ವೇಳೆ ಆರ್‌ಎಂಪಿ ವೃತ್ತದ ಬಳಿ ವಿವಿ ಪುರಂ ಸಂಚಾರ ಪೊಲೀಸರು ತಪಾಸಣಾ ಕಾರ್ಯದಲ್ಲಿ ನಿರತರಾಗಿದ್ದರು.
ಪೊಲೀಸರನ್ನು ಕಂಡ ಬೈಕ್ ಸವಾರ ದೇವರಾಜು, ತಕ್ಷಣ ಚಾಲನೆಯಲ್ಲಿ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಸ್ತೆ ಅಪಘಾತಕ್ಕೆ ಸಂಚಾರ ಪೊಲೀಸರ ತಪಾಸಣೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಪೊಲೀಸರ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಅಲ್ಲದೇ ಸ್ಥಳದಲ್ಲಿದ್ದ ಪೊಲೀಸರ ಜೀಪ್ ಜಖಂಗೊಳಿಸಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿಗಳಾದ ಡಾ.ಎ.ಎನ್. ಪ್ರಕಾಶ್ ಗೌಡ , ಗೀತ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.