ಹೊಳಲ್ಕೆರೆ ಕ್ಷೇತ್ರಕ್ಕೆ ಆಂಜನೇಯ ಕೊಡುಗೆ ಶೂನ್ಯ
Team Udayavani, Mar 23, 2021, 5:25 PM IST
ಹೊಳಲ್ಕೆರೆ: ಐದು ವರ್ಷ ಶಾಸಕರಾಗಿ ಹಾಗೂ ಸಚಿವರಾಗಿ ಎಚ್. ಆಂಜನೇಯ ಸರಕಾರದ ದೊಡ್ಡ ಖಾತೆ ನಿರ್ವಹಣೆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಏನೆಂಬುದನ್ನು ಕ್ಷೇತ್ರದ ಜನತೆ ಅರಿತಿದ್ದಾರೆ. ಹಾಗಾಗಿ ಎಂ. ಚಂದ್ರಪ್ಪ ಅವರಿಗೆ ಒಂದು ಲಕ್ಷದ ಎಂಟು ಸಾವಿರ ಮತ ನೀಡಿ 40 ಸಾವಿರ ಮತಗಳ ಅಂತರದಿಂದ ಆಂಜನೇಯ ಅವರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಸಿ. ರಘುಚಂದನ್ ಟೀಕಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಎಂ. ಚಂದ್ರಪ್ಪ ಬಗ್ಗೆ ಮಾಜಿ ಸಚಿವ ಎಚ್. ಆಂಜನೇಯ ಬದ್ಧತೆ ಇಟ್ಟುಕೊಂಡು ಮಾತನಾಡಬೇಕು. ಚುನಾವಣೆಯಲ್ಲಿ ಸೋತಿರುವ ಆಂಜನೇಯ ಅವರಿಗೆ ಮತಿಭ್ರಮಣೆಯಾಗಿದೆ. ಶಾಸಕ ಎಂ. ಚಂದ್ರಪ್ಪನವರು ಸುಳ್ಳು ಹೇಳುತ್ತಾರೆಂದು ಹೇಳುವ ಆಂಜನೇಯ ಸೋಲು ಅನುಭವಿಸಿದ್ದೇಕೆ, ಅಧಿಕಾರದಲ್ಲಿದ್ದಾಗ ಕೆಲಸ ಮಾಡಿದ್ದರೆ ಜನರೇಕೆ ಸೋಲಿಸುತ್ತಿದ್ದರು ಎಂದು ಪ್ರಶ್ನಿಸಿದರು.
ಶಾಸಕ ಎಂ. ಚಂದ್ರಪ್ಪ ಮಾಡಿರುವ ಕೆಲಸಕ್ಕೆ ಜನರು ಮತ ನೀಡಿದ್ದಾರೆ. ಅ ಧಿಕಾರವಿದ್ದಾಗ ಕೆಲಸ ಮಾಡದೆ ಶಾಸಕ ಎಂ.ಚಂದ್ರಪ್ಪ ಅವರ ಬಗ್ಗೆ ಅಪಪ್ರಚಾರ ಮಾಡುವುದು ಆಂಜನೇಯ ಅವರಿಗೆ ಶೋಭೆ ತರುವುದಿಲ್ಲ. ಶಾಸಕ ಎಂ. ಚಂದ್ರಪ್ಪ ಕ್ಷೇತ್ರದಲ್ಲಿ ಅಭಿವೃದ್ಧಿ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಕೆರೆಗಳಿಗೆ ನೀರು ತುಂಬಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಸಹಕಾರದಿಂದ ಸಾವಿರಾರು ಕೋಟಿ ಅನುದಾನದ ತಂದು ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುವಂತೆ ಮಾಡಿದ್ದಾರೆ ಎಂದರು.
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ರೂಪಾ ಸುರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.