ದರೋಜಿ ಕರಡಿಧಾಮದಲ್ಲಿ ನೀರಿನ ಬರ


Team Udayavani, Mar 23, 2021, 5:41 PM IST

asn

ಹೊಸಪೇಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಎಲ್ಲೆಡೆ ನೀರಿನ ಅಭಾವ ತಲೆದೋರಿರುವ ಬೆನ್ನಲ್ಲಿಯೇ ತಾಲೂಕಿನ ದರೋಜಿ ಕರಡಿಧಾಮದ ಪ್ರಾಣಿ ಪಕ್ಷಿ ಸಂಕುಲಕ್ಕೆ ನೀರಿನ ಸಮಸ್ಯೆ ಎದುರಾಗಿದೆ.

ಹಂಪಿಯಿಂದ ಅನತಿ ದೂರದಲ್ಲಿರುವ ದರೋಜಿ ಕರಡಿಧಾಮದ ಕರಡಿ, ಪ್ರಾಣಿ ಪಕ್ಷಿ ಸಂಕುಲಕ್ಕೆ ನೀರಿನ ಅಭಾವ ಎದುರಾಗಿದೆ. ಅರಣ್ಯ ಇಲಾಖೆ, ಪ್ರಾಣಿಗಳ ನೀರಿನ ದಾಹ ತೀರಿಸಲು ಟ್ಯಾಂಕರ್‌ ಮೂಲಕ ನೀರು ಸಂಗ್ರಹಿಸಿ ಇಡುತ್ತಿದೆಯಾದರೂ ಈ ನೀರು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ.

ನೀರಿನ ದಾಹ ತೀರಿಸಿಕೊಳ್ಳಲು ಕರಡಿಗಳು ಅನಿವಾರ್ಯವಾಗಿ ಕಾಡಿಂಚಿನ ಗ್ರಾಮ ಹಾಗೂ ಹೊಲಗದ್ದೆಗಳ ಕಡೆ ಮುಖ ಮಾಡಿವೆ. ಇದರಿಂದಾಗಿ ಮಾನವ ಪ್ರಾಣಿ ಸಂಘರ್ಷ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಘೋಷಣೆ: ಬಳ್ಳಾರಿ, ಸಂಡೂರು, ಹೊಸಪೇಟೆ ಹಾಗೂ ರಾಮಸಾಗರ ಗ್ರಾಮದ ನಡುವೆ ವ್ಯಾಪಿಸಿರುವ ಬಂಡೆಗಲ್ಲುಗಳಿಂದ ಕೂಡಿದ ಗುಡ್ಡಗಳ ನಡುವೆ ಇರುವ 5,587.3 ಹೆಕ್ಟೇರ್‌ ಬಿಳಿಕಲ್ಲು ಪ್ರದೇಶವನ್ನು ರಾಜ್ಯ ಸರ್ಕಾರ 1994ರಲ್ಲಿ ದರೋಜಿ ಅಭಯಾರಣ್ಯ ಎಂದು ಘೋಷಣೆ ಮಾಡಿತು. ಚಿರತೆಗಳು, ಹಯೆನಾ, ನರಿಗಳು, ಕಾಡುಹಂದಿಗಳು, ಮುಳ್ಳುಹಂದಿ, ಪ್ಯಾಂಗೊಲಿನ್‌, ನಕ್ಷತ್ರ ಆಮೆ, ಮಾನಿಟರ್‌ ಹಲ್ಲಿ, ಮುಂಗುಸಿ, ಬಟಾಣಿ ಕೋಳಿಗಳು, ಪಾಟ್ರಿìಜYಳು, ಪೇಂಟೆಡ್‌ ಸ್ಪರ್‌ ಹೆನ್‌, ಕ್ವಿಲ್ಸ್‌ ಮುಂತಾದ ಪ್ರಾಣಿಗಳನ್ನು ಹೊರತುಪಡಿಸಿ ಸುಮಾರು 120 ಕರಡಿಗಳು ಈ ಅಭಯಾರಣ್ಯದಲ್ಲಿ ವಾಸಿಸುತ್ತಿವೆ ಎಂದು ಅಂದಾಜಿಸಲಾಗಿದೆ. 90 ಜಾತಿಯ ಪಕ್ಷಿಗಳು ಮತ್ತು 27 ಜಾತಿಯ ಚಿಟ್ಟೆಗಳು ಕಾಡಿನಲ್ಲಿ ವಾಸ ಮಾಡುತ್ತಿವೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಗುರುತಿಸಲಾಗಿದೆ.

ಆಹಾರ: ಹೆಚ್ಚು ಸಸ್ಯಾಹಾರ ಸೇವನೆ ಮಾಡುವ ಕರಡಿಗಳು ಹಣ್ಣುಗಳು, ಗೆಡ್ಡೆಗಳು, ಜೇನುತುಪ್ಪ, ಕೀಟಗಳು ಮತ್ತು ಗೆದ್ದಲುಗಳನ್ನು ಸೇವಿಸುತ್ತವೆ. ಆದರೆ ಕೆಲವೊಮ್ಮೆ ಕಾಡು ಅಂಚಿನ ಗ್ರಾಮಗಳ ಬಳಿ ಸುಳಿದಾಡುವ ಕರಡಿಗಳು ಹೊಲ ಗದ್ದೆಗಳಿಗೆ ಲಗ್ಗೆಯಿಟ್ಟು ಶೇಂಗಾ, ಕಬ್ಬು ಮತ್ತು ಮೆಕ್ಕೆಜೋಳ ಸೇವಿಸಲು ಹಿಂಜರಿಯುವುದಿಲ್ಲ. ಮಳೆಗಾಲದಲ್ಲಿ ತುಂಬಿ ತುಳುಕುವ ಕರಡಿಧಾಮಕ್ಕೆ ಹೊಂದಿಕೊಂಡ ಕೆಲ ಪುರಾತನ ಕೆರೆಗಳು ಭತ್ತಿಹೋಗಿ, ನೀರಿನ ಸಮಸ್ಯೆ ಉದ್ಭವವಾಗಿದೆ.

ಅನುದಾನ ಕೊರತೆ: ಅನುದಾನದ ಕೊರತೆ ಪರಿಣಾಮ ಬೇಸಿಗೆಯಲ್ಲಿ ಕರಡಿಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ಅರಣ್ಯ ಇಲಾಖೆ ಹಿಂದೆ ಬಿದ್ದಿದೆ. ಇದಕ್ಕಾಗಿ ಅಗತ್ಯ ಅನುದಾನವನ್ನು ಕೋರಿದ್ದರೂ ಸರ್ಕಾರ ಕೋವಿಡ್‌ ಹಿನ್ನೆಲೆಯಲ್ಲಿ ಅನುದಾನ ಒದಗಿಸಲು ಹಿಂದೆ ಮುಂದೆ ನೋಡುತ್ತಿದೆ ಎಂದು ದೂರಲಾಗಿದೆ. ಬೇಸಿಗೆ ದಿನಗಳಲ್ಲಿ ಅರಣ್ಯದಲ್ಲಿ ಕಿರುದಾದ ಸಿಮೆಂಟ್‌ ತೊಟ್ಟಿಗಳನ್ನು ನಿರ್ಮಿಸಿ, ಅವುಗಳಲ್ಲಿ ನೀರಿನ ಸಂಗ್ರಹಿಸಿ ಇಟ್ಟು ಪ್ರಾಣಿ ಪಕ್ಷಿಗಳ ದಾಹ ತೀರಿಸಬೇಕು. ಬೇಸಿಗೆಯಲ್ಲಿ ಇಲ್ಲಿನ ಪ್ರಾಣಿ ಪಕ್ಷಿಗಳಿಗೆ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಶಾಶ್ವತ ನೀರಿನ ವ್ಯವಸ್ಥೆ ಮಾಡಬೇಕಿದೆ. ಜಿಲ್ಲಾ ಖನಿಜ ನಿಧಿ ಯಿಂದ ಹಣ ಬಳಿಸಿಕೊಂಡಾದರೂ ಪ್ರಾಣಿ ಪಕ್ಷಿಗಳ ನೀರಿನ ಬವಣೆ ತಪ್ಪಿಸಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬುದು ಪ್ರಾಣಿ ಪ್ರಿಯರ ಆಗ್ರಹವಾಗಿದೆ.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.