ಕಾಪುವಿನಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ಸಂಭ್ರಮ
Team Udayavani, Mar 24, 2021, 1:27 AM IST
ಕಾಪು: ಪ್ರಸಿದ್ಧ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಕಾಪುವಿನ ಮೂರೂ ಮಾರಿಗುಡಿಗಳು ಸಿದ್ಧಗೊಂಡಿದ್ದು ಕಾಪುವಿನಲ್ಲಿ ಹಬ್ಬದ ವಾತಾವರಣದ ಸಂಭ್ರಮ ಕಾಣಿಸಿಕೊಂಡಿದೆ.
ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ (ಕಲ್ಯ) ದೇವಸ್ಥಾನದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೆ ನಡೆಯುವ ಸುಗ್ಗಿ ಮಾರಿಪೂಜೆಗಾಗಿ ವಿವಿಧೆಡೆಗಳಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಬಿಗು ಪೊಲೀಸ್ ಬಂದೋಬಸ್ತ್ ಸಹಿತವಾಗಿ ವಿಶೇಷ ವ್ಯವಸ್ಥೆಗಳು ಜೋಡಣೆಯಾಗಿವೆ. ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಗುಡಿಗಳು ವಿದ್ಯುತ್ ದೀಪಾಲಂಕಾರ ಮತ್ತು ಪುಷ್ಪಾಲಂಕಾರದೊಂದಿಗೆ ಎಲ್ಲರ ಕಣ್ಮನ ಸೆಳೆಯುತ್ತಿವೆ.
ತೆರೆದುಕೊಂಡ ವ್ಯಾಪಾರ ಮಳಿಗೆಗಳು
ಮೂರು ಮಾರಿಗುಡಿಗಳ ಪರಿಸರದಲ್ಲಿ ವಿವಿಧ ರೀತಿಯ ಮಾರಾಟ ಮಳಿಗೆಗಳು, ಅಂಗಡಿ – ಸ್ಟಾಲ್‌ಗಳು ತೆರೆದುಕೊಂಡಿವೆ. ದೇವಿಗೆ ಅತ್ಯಂತ ಪ್ರಿಯವಾಗಿರುವ ಮಲ್ಲಿಗೆ, ಹಿಂಗಾರ, ಹಣ್ಣು ಕಾಯಿ ಸಮರ್ಪಣೆಗೆ ಸಹಿತ ವಿವಿಧ ಅಂಗಡಿಗಳು ಮಂಗಳವಾರ ಬೆಳಗ್ಗಿನಿಂದಲೇ ವ್ಯಾಪಾರ ಪ್ರಾರಂಭಿಸಿವೆ. ಕಾಪು ಸಂತೆ ಮಾರ್ಕೆಟ್‌ನ ಒಳಗೆ ಸೀಮಿತ ಸಂಖ್ಯೆಯ ಕೋಳಿ ಅಂಗಡಿಗಳಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸ್ವಚ್ಛತೆಗೆ ವಿಶೇಷ ಆದ್ಯತೆ
ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪುರಸಭೆ ಯು ಇಬ್ಬರು ಉಸ್ತುವಾರಿಗಳ ಸಹಿತವಾಗಿ 15 ಮಂದಿ ಪೌರ ಕಾರ್ಮಿರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು ಅವರು 24ಗಿ7 ಮಾದರಿಯಲ್ಲಿ ಕಾರ್ಯ ನಿರ್ವ ಹಿಸಲಿದ್ದಾರೆ. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿಯೂ ನಡೆಯುತ್ತಿದೆ.
ಭದ್ರತೆಗೆ 200 ಪೊಲೀಸರು
ಭದ್ರತೆಗೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಚೆಕ್‌ಪೋಸ್ಟ್ ಅಳವಡಿಸಲಾಗಿದೆ. ನೂಕು ನುಗ್ಗಲು ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ.
ಕೊರೊನಾ ಜಾಗೃತಿಗೆ ಪ್ರತ್ಯೇಕ ತಂಡ
ಕೊರೊನಾ ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಪರಿಶೀಲನೆಗಾಗಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮತ್ತು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವು ಅವರು ಸ್ವತಃ ಫೀಲ್ಡಿಗಿಳಿದಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾಯಕದಲ್ಲಿ ತೊಡಗಿದ್ದಾರೆ. ಪುರಸಭಾ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದರ ಸಹಿತವಾಗಿ ಜನರಲ್ಲಿ ಸಾಮಾಜಿಕ ಅಂತರ ಪಾಲನೆಯ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.