ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಅರಿವು ಅಗತ್ಯ

Team Udayavani, Mar 24, 2021, 3:06 PM IST

ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಅರಿವು ಅಗತ್ಯ

ಹಾವೇರಿ: ಇಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವಿಲ್ಲ. ಯುವ ಸಮೂಹ, ವಿದ್ಯಾರ್ಥಿ ಸಮೂಹಕ್ಕೆ ದೇಶಪ್ರೇಮ, ಸ್ವಾತಂತ್ರ್ಯ ಹೋರಾಟದ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಪಂ ಅಧ್ಯಕ್ಷ ಏಕನಾಥ ಭಾನುವಳ್ಳಿ ಹೇಳಿದರು.

ನಗರದ ಹುತಾತ್ಮ ಮೈಲಾರ ಮಹಾದೇವಪ್ಪನವರ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ 75ನೇ ಭಾರತದ ಸ್ವಾತಂತ್ರ್ಯೊತ್ಸವದಅಮೃತ ಮಹೋತ್ಸವ ಹಾಗೂ ವಿಜಯ ದಿವಸ್‌, ಕಿಸಾನ ದಿವಸ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶಾದ್ಯಂತ ಭಾರತ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ. ವರ್ಷಪೂರ್ತಿ ನಡೆಯುವ ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯಕ್ಕಾಗಿ ಮೈಲಾರ ಮಹದೇವಪ್ಪ ಸೇರಿದಂತೆ ನಮ್ಮ ಹಿರಿಯರು ನಡೆಸಿದ ಹೋರಾಟ, ತ್ಯಾಗ, ಬಲಿದಾನದ ಪರಿಚಯವನ್ನು ಯುವ ಪೀಳಿಗೆಗೆ ಮಾಡಿಸಬೇಕು ಎಂದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಭಾರತ ಸ್ವಾತಂತ್ರ್ಯಗಳಿಸಿ 75 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲೂ 75 ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ಬೇರೆ ಬೇರೆ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಾವೇರಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಮೈಲಾರ ಮಹಾದೇವ ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು. ಇಂತಹ ಮಹಾನ್‌ ವ್ಯಕ್ತಿಗಳ ತ್ಯಾಗ, ಬಲಿದಾನಕ್ಕೆಎಲ್ಲರೂ ತಲೆಬಾಗಬೇಕು. ಮೈಲಾರ ಮಹಾದೇವ ಅವರು ಕ್ವಿಟ್‌ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದು ನಾವು ಹೆಮ್ಮೆಪಡುವ ವಿಷಯವಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರು ಬಲಿದಾನ ಮಾಡಿದ್ದರ ಫಲವಾಗಿ ಇಂದು ನಾವು ಆರಾಮವಾಗಿ ಹಾಗೂ ಸ್ವತ್ಛಂದವಾಗಿ ಹಾರಾಡುತ್ತಿದ್ದೇವೆ. ಆದರೆ ಸ್ವಾತಂತ್ರ್ಯಕ್ಕೆ ಕಾರಣರಾದವರನ್ನು ಮರೆಯುತ್ತಿರುವ ಭಯ ಕಾಡುತ್ತಿದೆ. ನಮ್ಮ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದಬಗ್ಗೆ ತಿಳಿಸಬೇಕಾಗಿದೆ. ಮೈಲಾರ ಮಹದೇವಪ್ಪ ಸೇರಿದಂತೆ ಜಿಲ್ಲೆಯ ಹಲವಾರು ಹೋರಾಟ ಗಾರರನ್ನು ಯಾರೂ ಮರೆಯಬಾರದು. ದೇಶದ ಭದ್ರತೆಗೆ ಹೋರಾಡುವ ಯೋಧರನ್ನು ಹಾಗೂ ರೈತರನ್ನು ಸ್ಮರಿಸಬೇಕು. ನಗರದ ವಿವಿಧ ಬಡಾವಣೆಗಳಿಗೆ, ವೃತ್ತಗಳಿಗೆ ಹಾಗೂಉದ್ಯಾನವನಗಳಿಗೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಇಡಲು ತೀರ್ಮಾನಿಸಲಾಗಿದೆ ಎಂದರು.

ವಿ.ಎಲ್‌.ತಿಪ್ಪನಗೌಡ್ರ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮೋಟೆ ಬೆನ್ನೂರಿನ ಲಿಂಗಪ್ಪ ಕೃಷ್ಣಪ್ಪ ಕುಲಕರ್ಣಿ ಹಾಗೂ ಹಿರೇಅಣಜಿಯ ಸಿದ್ದಪ್ಪ ಮಲ್ಲಪ್ಪ ಕೊಪ್ಪದ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕನ್ನಪ್ಪಳವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಮುಖ್ಯ ಯೋಜನಾಧಿಕಾರಿ ನಿರ್ಮಲಾ, ತಹಶೀಲ್ದಾರ್‌ ಸವದಿ, ಪೌರಾಯುಕ್ತ ಪರಶುರಾಮ ಚಲವಾದಿ ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.