ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಯಾಸ್ ನಿಧನ
Team Udayavani, Mar 25, 2021, 11:25 AM IST
ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ (88) ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಎರಡು ದಶಕಗಳಿಂದ ಆರ್ ಎಲ್ ಡಯಾಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗೂ ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು.
ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು. ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಯಾಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.
ಇದನ್ನೂ ಓದಿ: ಪುತ್ತೂರು: ಪೊಲೀಸ್ ಠಾಣೆಯ 50 ಮೀ. ದೂರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!
ಆರ್ ಎಲ್ ಡಯಾಸ್ ಅವರು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.
ಇದನ್ನೂ ಓದಿ: ಕಂಟೈನರ್- ಬಸ್ ಮುಖಾಮುಖಿ: ಹೊತ್ತಿ ಉರಿದ ಬಸ್, ಕಂಟೈನರ್ ಚಾಲಕ ಸಜೀವ ದಹನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.