ನೂತನ ಕಾರ್ಯಾಧ್ಯಕ್ಷ ಸಿಎ ಐ. ಆರ್. ಶೆಟ್ಟಿ ತಂಡದ ಪದಗ್ರಹಣ
Team Udayavani, Mar 25, 2021, 11:40 AM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಸಮಿತಿಯ 2021-2023ನೇ ಅವಧಿಯ ನೂತನ ಕಾರ್ಯಾಧ್ಯಕ್ಷರಾಗಿ ಲೆಕ್ಕ ಪರಿಶೋಧಕ ಸಿಎ ಐ. ಆರ್. ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.
ಮಾ. 10ರಂದು ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಸಮಿತಿಯ ಉಪ ಕಾರ್ಯಾಧ್ಯಕ್ಷರಾಗಿ ಆದರ್ಶ್ ಬಿ. ಶೆಟ್ಟಿ, ಕಿಶೋರ್ ಕುಮಾರ್ ಕುತ್ಯಾರ್, ಕಾರ್ಯದರ್ಶಿಯಾಗಿ ಸಿಎ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ಪ್ರದೀಪ್ ಜೆ. ಶೆಟ್ಟಿ ಆಯ್ಕೆಯಾದರು.
ಸಂಘದ ಉನ್ನತ ಶಿಕ್ಷಣ ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷ ಎನ್. ವಿವೇಕ್ ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಸಿಎ ಐ. ಆರ್. ಶೆಟ್ಟಿ ಅವರಿಗೆ ಪದವಿ ಹಸ್ತಾಂತರಿಸಿದರು. ನಿರ್ಗಮನ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಕುತ್ಯಾರ್, ಮಮತಾ ಎಂ. ಶೆಟ್ಟಿ , ನಿರ್ಗಮನ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ ಕಾರ್ನಾಡ್, ನಿರ್ಗಮನ ಕೋಶಾಧಿಕಾರಿ ಸಿಎ ರಮೇಶ್ ಬಿ. ಶೆಟ್ಟಿ ಇವರು ಉನ್ನತ ಶಿಕ್ಷಣ ಸಮಿತಿಯ ನೂತನ ಪದಾಧಿಕಾರಿಗಳಿಗೆ ಪದವಿ ಹಸ್ತಾಂತರಿಸಿ ಶುಭ ಹಾರೈಸಿದರು.
ಇದೇ ವೇಳೆ ಉನ್ನತ ಶಿಕ್ಷಣ ಕಾಲೇಜಿನಲ್ಲಿ ಈಗಾಗಲೇ ವಿವಿಧ ಸೌಲಭ್ಯ ಒದಗಿಸಿದ ದಾನಿಗಳಾದ ಮನ್‌ಮೋಹನ್ ಆರ್. ಶೆಟ್ಟಿ , ಅಣ್ಣಾಲೀಲಾ ಕಾಲೇಜಿನ ಪ್ರತಿನಿಧಿ ಶೋಭಾ ಜಯರಾಮ ಶೆಟ್ಟಿ, ಕಾಲೇಜಿನ ಪ್ರತಿನಿಧಿ ಶಶಿಕಿರಣ್ ಶೆಟ್ಟಿ, ಬಿ. ಡಿ. ಶೆಟ್ಟಿ, ಸುಧಾಕರ ಎಂ. ಶೆಟ್ಟಿ , ಕೃಷ್ಣ ವೈ. ಶೆಟ್ಟಿ, ಗೌರವ್ ಆರ್. ಪಯ್ಯಡೆ, ಸಮಿತಿಯ ಸದಸ್ಯರಾದ ಪ್ರಮೋದ್ ಶೆಟ್ಟಿ, ರಂಜಿತ್ ಶೆಟ್ಟಿ , ಮಹೇಶ್ ಆರ್. ಶೆಟ್ಟಿ, ಬಿ. ವಿವೇಕ್ ಶೆಟ್ಟಿ, ದಿನಕರ ಎನ್. ಶೆಟ್ಟಿ , ಹರೀಶ್ ಎಸ್. ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಜಯ ಎ. ಶೆಟ್ಟಿ , ಪ್ರಸನ್ನ ಜೆ. ಶೆಟ್ಟಿ, ಭರತ್ ವಿ. ಶೆಟ್ಟಿ, ಹರೀಶ್ ವಾಸು ಶೆಟ್ಟಿ , ಕೆ. ಸಿ. ಶೆಟ್ಟಿ , ಸಲಹೆಗಾರರಾಗಿ ಐಕಳ ಹರೀಶ್ ಶೆಟ್ಟಿ, ಸಿಎ ಶಂಕರ್ ಬಿ. ಶೆಟ್ಟಿ , ಸುಧಾಕರ ಎಸ್. ಹೆಗ್ಡೆ, ರವಿ ಎಸ್. ಶೆಟ್ಟಿ , ಉನ್ನತ ಶಿಕ್ಷಣ ಸಮಿತಿಯ ನೂತನ ಸಂಚಾಲಕರಾಗಿ ಭಾಸ್ಕರ್ ಶೆಟ್ಟಿ ಕಾರ್ನಾಡ್ ಅವರು ನೇಮಕಗೊಂಡಿದ್ದಾರೆ ಎಂದು ನೂತನ ಕಾರ್ಯಾಧ್ಯಕ್ಷ ಸಿಎ ಐ. ಆರ್. ಶೆಟ್ಟಿ ಪ್ರಕಟಿಸಿದರು.
ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ಇಂದ್ರಾಳಿ ದಿವಾಕರ ಶೆಟ್ಟಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್.
ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್ ಡಿ. ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.